More

    ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ವಿರುದ್ಧ ಯಾವುದೇ ಸಾಕ್ಷ್ಯವಿಲ್ಲ; ಸಂಸದ ಸಂಜಯ್​ ಸಿಂಗ್​

    ನವದೆಹಲಿ: ಕೇಂದ್ರ ಸರ್ಕಾರ ಮತ್ತು ಸಿಬಿಐ ವಿರುದ್ಧ ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ವಾಗ್ದಾಳಿ ನಡೆಸಿದರು. ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿರುವುದನ್ನು ಅವರು ಖಂಡಿಸಿದರು. ಹಾಗೂ ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಫೆಡರಲ್ ಏಜೆನ್ಸಿ ಈ ಬಂಧನ ಮಾಡಿದೆ ಎಂದು ಆರೋಪಿಸಿದ್ದಾರೆ.

    ಇದನ್ನು ಓದಿ: ನೂತನ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ

    ಸಿಎಂ ಕೇಜ್ರಿವಾಲ್ ಅವರು ಸುಪ್ರೀಂಕೋರ್ಟ್‌ನಿಂದ ಜಾಮೀನು ಪಡೆಯುವುದು ಖಚಿತವಾಗಿತ್ತು, ನಂತರ ಮೋದಿ ಸರ್ಕಾರವು ಅರವಿಂದ್ ಕೇಜ್ರಿವಾಲ್ ಅವರನ್ನು ತಕ್ಷಣ ಬಂಧಿಸುವಂತೆ ಸಿಬಿಐಗೆ ಕೇಳಿತು. ತನಿಖಾ ಸಂಸ್ಥೆಗಳನ್ನು ಎಷ್ಟು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂಬುದಕ್ಕೆ ಇದಕ್ಕಿಂತ ದೊಡ್ಡ ಉದಾಹರಣೆ ಬೇರಿಲ್ಲ. ಕೇಂದ್ರ ಸರ್ಕಾರವು ನ್ಯಾಯಾಂಗವನ್ನು, ಕಾನೂನು ಮತ್ತು ಸುವ್ಯವಸ್ಥೆಯನ್ನು, ದೇಶದ ಸಂವಿಧಾನವನ್ನು ಅಪಹಾಸ್ಯ ಮಾಡಿದೆ ಎಂದು ಟೀಕಿಸಿದರು.

    ಅರವಿಂದ್ ಕೇಜ್ರಿವಾಲ್ ವಿರುದ್ಧದ ಹಣದ ಟ್ರಯಲ್ ಬಗ್ಗೆ ಜಾರಿ ನಿರ್ದೇಶನಾಲಯದ ಬಳಿ ಯಾವುದೇ ಪುರಾವೆಗಳಿಲ್ಲ. ಅರವಿಂದ್ ಕೇಜ್ರಿವಾಲ್ ವಿರುದ್ಧ ಇಡಿ ಯಾವುದೇ ಸಾಕ್ಷ್ಯವನ್ನು ಹೊಂದಿಲ್ಲ ಮತ್ತು ದುರುದ್ದೇಶದಿಂದ ಕೆಲಸ ಮಾಡುತ್ತಿದೆ ಎಂದು ನ್ಯಾಯಾಲಯವು (ರೋಸ್ ಅವೆನ್ಯೂ ಕೋರ್ಟ್) ತನ್ನ ಆದೇಶದಲ್ಲಿ ಹೇಳಿದೆ ಎಂದು ಸಂಜಯ್​​ ಸಿಂಗ್​ ಹೇಳಿದರು.

    ಅರವಿಂದ್ ಕೇಜ್ರಿವಾಲ್ ವಿರುದ್ಧ ಇಡಿ ಹಣದ ಜಾಡು ಹೊಂದಿಲ್ಲ. ಯಾವುದೇ ಪುರಾವೆಗಳಿಲ್ಲ, ಆದ್ದರಿಂದ ಅವರು ನಿರಪರಾಧಿ. ಅಲ್ಲದೆ, ಅರವಿಂದ್ ಕೇಜ್ರಿವಾಲ್ ಅವರ ಜಾಮೀನಿಗೆ ತಡೆಯಾಜ್ಞೆ ಪಡೆಯುವ ಸಲುವಾಗಿ ಜಾರಿ ನಿರ್ದೇಶನಾಲಯ ಅಸಂವಿಧಾನಿಕ ಮತ್ತು ಕಾನೂನುಬಾಹಿರ ರೀತಿಯಲ್ಲಿ ಹೈಕೋರ್ಟ್​​​ ಅನ್ನು ಸಂಪರ್ಕಿಸಿದೆ ಎಂದು ಆರೋಪಿಸಿದ್ದಾರೆ.

    ದೆಹಲಿಯ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಕೆಲವೇ ಗಂಟೆಗಳ ನಂತರ ಜೂನ್ 26 ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಕಸ್ಟಡಿಗೆ ಕಳುಹಿಸಲಾಯಿತು. ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 2024 ಮಾರ್ಚ್ 21 ರಿಂದ ಜೈಲಿನಲ್ಲಿದ್ದಾರೆ. 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ತಮ್ಮ ಪಕ್ಷದ ಪ್ರಚಾರಕ್ಕಾಗಿ ಅಲ್ಪಾವಧಿಗೆ ಜಾಮೀನು ಪಡೆದಿದ್ದರು. (ಏಜೆನ್ಸೀಸ್​)

    ಕಲ್ಕಿ 2898 ಎಡಿ ಸಿನಿಮಾ ಬಗ್ಗೆ ಟಾಲಿವುಡ್​ ಐಕಾನ್​ ಸ್ಟಾರ್​​ ಅಲ್ಲು ಅರ್ಜುನ್​ ಹೇಳಿದ್ದೇನು ಗೊತ್ತಾ?

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts