More

    ರಾಜ್ಯಾದ್ಯಂತ ಜೂನ್​ನಲ್ಲಿ ವಾಡಿಕೆಯಷ್ಟೇ ಸುರಿದ ಮಳೆ: 22 ಜಿಲ್ಲೆಗಳಲ್ಲಿ ಅಧಿಕ

    ಬೆಂಗಳೂರು:ರಾಜ್ಯಾದ್ಯಂತ ಜೂನ್​ನಲ್ಲಿ ವಾಡಿಕೆಯಷ್ಟೇ ಮಳೆಯಾಗಿದೆ. ಈ ಬಾರಿ ಜೂ 2ರಂದು ಪ್ರವೇಶಿಸಿದ್ದ ಮುಂಗಾರು ಉತ್ತಮವಾಗಿ ಆರಂಭವಾಯಿತು. ಈ ಹಿನ್ನೆಲೆಯಲ್ಲಿ ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಬಿದ್ದಿರುವುದು ಗಮನಾರ್ಹ. ಮಲೆನಾಡು, ಕರಾವಳಿಯಲ್ಲಿ ವಾಡಿಕೆಗಿಂತ ತುಸು ಕಡಿಮೆ ವರ್ಷಧಾರೆಯಾದರೂ ಜಲಾಶಯಗಳಿಗೆ ಗಣನೀಯ ಪ್ರಮಾಣದಲ್ಲಿ ನೀರು ಹರಿದು ಬಂದಿದೆ.

    ಜೂನ್​​ನಲ್ಲಿ ರಾಜ್ಯಾದ್ಯಂತ 208 ಮಿಮೀ ಮಳೆ ಬೀಳಬೇಕಿತ್ತು. 205 ಮಿಮೀ ಬಿದ್ದಿದ್ದು, ವಾಡಿಕೆಗಿಂತ ಶೇ.2ರಷ್ಟು ಕಡಿಮೆ ಪ್ರಮಾಣದಲ್ಲಿ ಸುರಿದಿದೆ. ಆದರೆ, ರಾಜ್ಯಾದ್ಯಂತ ಒಟ್ಟಾರೆ ವಾಡಿಕೆಯಷ್ಟೇ ಮಳೆಯಾದ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ವರದಾನವಾಗಿದೆ. ಐದು ವರ್ಷಗಳಿಂದ ಮಳೆ ಅವಧಿ ದಿನಗಳು ಬದಲಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್​ನಲ್ಲಿ ಮಳೆ ಕುಂಠಿತವಾಗುತ್ತಿತ್ತು. ಇದರಿಂದಾಗಿ ಕೃಷಿ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರುವ ಜತೆಗೆ ಆಹಾರ ಉತ್ಪಾದನೆಯಲ್ಲಿ ಇಳಿಕೆಯಾಗಿತ್ತು. ಈ ಬಾರಿ “ಎಲ್​ ನಿನೋ’ ದುರ್ಬಲವಾಗಿ ಲಾ&ನಿನಾ’ ಉಂಟಾಗಿರುವ ಹಿನ್ನೆಲೆಯಲಿ ಮುಂಗಾರು ಆಶಾದಾಯಕವಾಗಿದ್ದು, ಜೂನ್​ನಲ್ಲಿ ವಾಡಿಕೆಯಷ್ಟೂ ಮಳೆ ಸುರಿದಿದೆ. ಅಲ್ಲದೆ, ಜೂನ್​ನಿಂದ ಸೆಪ್ಟೆಂಬರ್​ವರೆಗೆ ರಾಜ್ಯದಲ್ಲಿ ವಾಡಿಕೆ ಅಥವಾ ವಾಡಿಕೆಗಿಂತ ಹೆಚ್ಚು ಬೀಳುವ ಸಾಧ್ಯತೆ ಇದೆ.

    22 ಜಿಲ್ಲೆಗಳಲ್ಲಿ ಅಧಿಕ: ಬೆಂಗಳೂರು, ಬೆಂ.ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಮೈಸೂರು, ಮಂಡ್ಯ, ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗದಲ್ಲಿ ವಾಡಿಕೆಗಿಂತ ಹೆಚ್ಚು ಸುರಿದಿದೆ. ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ವರ್ಷಧಾರೆಯಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಅಂಕಿ ಅಂಶಗಳಿಂದ ತಿಳಿದುಬಂದಿದೆ.

    ವಾಲ್ಮೀಕಿ ನಿಗಮ; ಸರ್ಕಾರ ತಪ್ಪು ಮಾಡಿದವರ ರಕ್ಷಣೆಗೆ ನಿಂತಿಲ್ಲ

    ಕರಾವಳಿ, ಮಲೆನಾಡಲ್ಲಿ ಮಳೆ ಬಿರುಸು: ಕರಾವಳಿ, ಮಲೆನಾಡು ಭಾಗದ ಬಹುತೇಕ ಜಿಲ್ಲೆಗಳಲ್ಲಿ ಕೊಂಚ ಇಳಿಮುಖವಾಗಿದ್ದ ಮಳೆ ಮುಂದಿನ ಐದು ದಿನ ಇನ್ನಷ್ಟು ಬಿರುಸುಗೊಳ್ಳಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ ಮೂರು ದಿನ ಯೆಲ್ಲೋ ಅರ್ಲಟ್​ ಇದ್ದರೆ, ಜು 6ರಿಂದ ಜೂ 7ರವರೆಗೆ ಆರೆಂಜ್​ ಅರ್ಲಟ್​ ಇರಲಿದೆ. ಕೊಡಗು, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಜು.3ರಿಂದ ಜು 6ರವರೆಗೆ ಯೆಲ್ಲೋ ಅರ್ಲಟ್​ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts