More

    ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಜಾಗೃತಿ ಕಾರ್ಯಕ್ರಮ


    ಮೈಸೂರು: ಹೊಸ ಕಾನೂನಿನ ಬಗ್ಗೆ ಪೊಲೀಸರು, ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು, ಸರಕಾರಿ ಅಭಿಯೋಜಕರು ಮತ್ತು ಮಾಧ್ಯಮದವರಿಗೆ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಜಿ.ದಿನೇಶ್ ಹೇಳಿದರು.

    ನಗರದ ನಜರ್‌ಬಾದ್‌ನ ಕರ್ನಾಟಕ ಪೊಲೀಸ್ ಅಕಾಡೆಮಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಹಳೆಯ ಐಪಿಸಿ, ಸಿಆರ್‌ಪಿಸಿ ಮತ್ತು ಸಾಕ್ಷೃ ಕಾಯಿದೆ ರದ್ದಾಗಿದ್ದು, ಹೊಸದಾಗಿ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ ಜಾರಿಯಾಗಿದೆ. ಇದರಿಂದ ಸಾಕಷ್ಟು ಬದಲಾವಣೆಯಾಗಿದ್ದು, ಕೆಲ ಅಪರಾಧಗಳಿಗೆ ಕನಿಷ್ಠ ಶಿಕ್ಷೆಯೊಂದಿಗೆ ಗರಿಷ್ಠ ಶಿಕ್ಷೆ ಪ್ರಮಾಣ ವಿಧಿಸಲಾಗಿದೆ. ಅಲ್ಲದೇ ದಂಡದ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts