More

    ಭಾರೀ ಮಳೆಗೆ ಅಯೋಧ್ಯೆ ರಾಮ ಮಂದಿರದ ಛಾವಣಿ ಸೋರಿಕೆ; ನಿರ್ಮಾಣ ಸಮಿತಿ ಸ್ಪಷ್ಟನೆ

    ಉತ್ತರಪ್ರದೇಶ: ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರದ ಗರ್ಭಗುಡಿಯನ್ನು ಸಾರ್ವಜನಿಕರಿಗೆ ತೆರೆದ ನಂತರ ಇದೇ ಮೊದಲ ಭಾರಿಗೆ ಮಳೆಯಾಗಿದೆ. ಗರ್ಭಗುಡಿಯ ಛಾವಣಿಯಿಂದ ನೀರು ಸೋರಿಕೆಯಾಗುತ್ತಿದೆ ಎಂದು ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಸೋಮವಾರ ಹೇಳಿದ್ದಾರೆ.

    ದೇವಾಲಯದ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದ ಮುಖ್ಯ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಸುದ್ದಿಗಾರರೊಂದಿಗೆ ಮಾತನಾಡಿ, ಶನಿವಾರ ಮಧ್ಯರಾತ್ರಿ ಸಂಭವಿಸಿದ ಮೊದಲ ಭಾರಿ ಮಳೆಯಲ್ಲಿ ದೇವಾಲಯದ ಗರ್ಭಗುಡಿಯ ಮೇಲ್ಛಾವಣಿಯಿಂದ ಭಾರೀ ಸೋರಿಕೆಯಾಗಿದೆ. ರಾಮ್ ಲಲ್ಲಾನ ವಿಗ್ರಹದ ಮುಂದೆ ಅರ್ಚಕರು ಕುಳಿತುಕೊಳ್ಳುವ ಸ್ಥಳ ಮತ್ತು ವಿಐಪಿ ದರ್ಶನಕ್ಕೆ ಜನರು ಬರುವ ಸ್ಥಳದ ಮೇಲಿನ ಛಾವಣಿಯಿಂದ ಮಳೆ ನೀರು ಸೋರಿಕೆಯಾಗುತ್ತಿದೆ. ಮಧ್ಯರಾತ್ರಿ ಸುರಿದ ಮಳೆಯ ನಂತರ ದೇವಾಲಯದ ಆವರಣದಿಂದ ಮಳೆನೀರು ಹರಿದು ಹೋಗಲು ಯಾವುದೇ ವ್ಯವಸ್ಥೆ ಇಲ್ಲ. ದೇವಾಲಯದ ಅಧಿಕಾರಿಗಳು  ಸರಿಪಡಿಸುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದರು.

    ಮೇಲ್ಛಾವಣಿಯಿಂದ ನೀರು ಸೋರಿಕೆಯಾದ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ ನಂತರ, ದೇವಾಲಯದ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಅವರು ದೇವಾಲಯಕ್ಕೆ ಆಗಮಿಸಿ ಮೇಲ್ಛಾವಣಿಯನ್ನು ದುರಸ್ತಿ ಮಾಡಿ ಜಲನಿರೋಧಕ ಮಾಡಲು ಸೂಚನೆ ನೀಡಿದರು ಎಂದು ದೇವಾಲಯದ ಟ್ರಸ್ಟ್ ಮೂಲಗಳು ತಿಳಿಸಿವೆ.

    ಮೊದಲ ಮಹಡಿಯಿಂದ ಮಳೆ ನೀರು ಬೀಳುವುದು ನಿಜ. ಏಕೆಂದರೆ ಗುರು ಮಂಟಪವು ಎರಡನೇ ಮಹಡಿಯಲ್ಲಿದ್ದು ಅದರ ಮೇಲೆ ಛಾವಣಿ ನಿರ್ಮಿಸಲಾಗಿಲ್ಲ. ಅದರ ಕಾಮಗಾರಿ ನಡೆಯಲಿದೆ ಎಂದು ತಿಳಿಸಿದ್ದಾರೆ.

    ಮಂದಿರ ನಿರ್ಮಾಣದ ಪ್ರಗತಿ ಕುರಿತು ಪ್ರತ್ಯೇಕವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಮಿಶ್ರಾ, ಮೊದಲ ಅಂತಸ್ತಿನ ಕಾಮಗಾರಿ ನಡೆಯುತ್ತಿದ್ದು, ಈ ವರ್ಷದ ಜುಲೈ ವೇಳೆಗೆ ಪೂರ್ಣಗೊಳ್ಳಲಿದೆ, ಡಿಸೆಂಬರ್‌ ವೇಳೆಗೆ ಮಂದಿರ ನಿರ್ಮಾಣ ಪೂರ್ಣಗೊಳ್ಳಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts