More

    ಜಾಗತಿಕ ಮಟ್ಟದಲ್ಲಿ ಬೆಂಗಳೂರು ಗಮನ ಸೆಳೆದಿದೆ

    ಚಿಕ್ಕಮಗಳೂರು: ಕೆಂಪೇಗೌಡರು ನಿರ್ಮಿಸಿದ ಬೆಂಗಳೂರು ಆಹ್ಲಾದಕರ ವಾತಾವರಣದ ಸ್ಥಳದಲ್ಲಿ ನಿರ್ಮಾಣಗೊಂಡಿದ್ದು, ಎಲ್ಲ ಜಾತಿ, ಮತ, ಪಂಥ, ಧರ್ಮದ ಜನರು ಬದುಕು ಕಟ್ಟಿಕೊಂಡಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಒಕ್ಕಲಿಗರ ಕ್ಷೇಮಾವೃದ್ದಿ ಸಂಘದ ಅಧ್ಯಕ್ಷ ಎಂ.ಪಿ.ಪ್ರಕಾಶ್ ತಿಳಿಸಿದರು.

    ನಗರದ ಸರ್ಕಾರಿ ಬಸ್‌ನಿಲ್ದಾಣದಲ್ಲಿ ಕೆಎಸ್‌ಆರ್‌ಟಿಸಿ ಒಕ್ಕಲಿಗರ ಕ್ಷೇಮಾಭಿವೃದ್ದಿ ಸಂಘದಿAದ ಏರ್ಪಡಿಸಿದ್ಧ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಬಳಿಕ ಸಾರ್ವಜನಿಕರಿಗೆ ಸಿಹಿ ವಿತರಿಸಿ ಮಾತನಾಡಿದ ಅವರು, ಬೆಂಗಳೂರು ನಗರವನ್ನು ಪ್ರಮುಖ ವಾಣಿಜ್ಯ ಕೇಂದ್ರವನ್ನಾಗಿ ಮಾಡಬೇಕೆಂಬುದು ಕೆಂಪೇಗೌಡರ ಮಹದಾಸೆಯಾಗಿತ್ತು. ಅದರಂತೆಯೇ ತಮ್ಮ ಕೋಟೆಯೊಳಗೆ ಆಯಾ ಕುಲ ಕುಸಬುದಾರರಿಗೆ ಅನುಗುಣವಾಗಿ ಪೇಟೆಗಳನ್ನು ಕಟ್ಟಿಕೊಂಡು ವ್ಯಾಪಾರ ವಹಿವಾಟಿಗೆ ಅನುವು ಮಾಡಿಕೊಟ್ಟಿದ್ದರು ಎಂದರು.
    ಬೆAಗಳೂರು ಇಂದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದ್ದು, ಐಟಿ ಬಿಟಿ ಕಂಪನಿಗಳ ತವರೆನಿಸಿಕೊಂಡಿದೆ. ಬೆಂಗಳೂರು ಕೆಂಪೇಗೌಡರ ಕಾಲದಲ್ಲೂ ವಾಣಿಜ್ಯ ಕೇಂದ್ರವಾಗಿತ್ತು. ವೃತ್ತಿಯ ಹೆಸರಿನಲ್ಲಿ ಅನೇಕ ಪೇಟೆಗಳು ನಿರ್ಮಿಸಿದ್ದರೆಂದು ಹೇಳಲಾಗುತ್ತಿದ್ದು, ಇವುಗಳು ನಗರದ ಜೀವನಾಡಿಯಾಗಿದ್ದವು ಎಂದು ಹೇಳಿದರು.
    ಬೆಂಗಳೂರಿಗೆ ನದಿ ಮೂಲಗಳಿರಲಿಲ್ಲ. ಹೀಗಾಗಿ, ಕೃಷಿ ಮತ್ತು ಕುಡಿಯುವ ನೀರಿಗಾಗಿ ನೂರಾರು ಕೆರೆ, ಕುಂಟೆ, ಕಲ್ಯಾಣಿಗಳನ್ನು ನಿರ್ಮಿಸಿದ್ದರು. ಕೆಂಪೇಗೌಡರು ಹಲವಾರು ದೇವಸ್ಥಾನಗಳನ್ನು ನಿರ್ಮಿಸಿದ್ದರು. ಹಲಸೂರಿನ ಸೋಮೇಶ್ವರ, ಗವಿಪುರದ ಗವಿಗಂಗಾಧರೇಶ್ವರ, ಕಾಡು ಮಲ್ಲೇಶ್ವರ, ದೊಡ್ಡ ಗಣಪತಿ ದೇವಾಲಯಗಳನ್ನು ಸ್ಥಾಪಿಸಿ ಭಕ್ತಿಯನ್ನು ತೋರ್ಪಡಿಸಿದ್ದರು ಎಂದರು.
    ಸAಘದ ಉಪಾಧ್ಯಕ್ಷ ಜಗನ್ನಾಥ್ ಮಾತನಾಡಿ, ಕೆಂಪೇಗೌಡರ ವಿವೇಚನಾಯುತ ಯೋಜನೆಗೆ ಜನತೆ ಋಣಪೂರ್ವಕವಾಗಿ ನೆನೆಯುತ್ತಲೇ ಇದ್ದಾರೆ. ಬೆಂಗಳೂರು ಹೊರವಲಯದಲ್ಲಿನ ಅಂತಾರಾಷ್ಟಿçÃಯ ವಿಮಾನ ನಿಲ್ದಾಣ, ಬಸ್ ನಿಲ್ದಾಣಕ್ಕೆ ಕೆಂಪೇಗೌಡರ ಹೆಸರಿಡಲಾಗಿದೆ. ಅಲ್ಲದೇ ನಗರದೆಲ್ಲೆಡೆ ಪ್ರತಿಮೆಗಳನ್ನು ಪ್ರತಿಷ್ಟಾಪಿಸಿ ಅವರ ಹೆಸರನ್ನು ಅಜರಾಮರಗೊಳಿಸಲಾಗಿದೆ ಎಂದು ಸ್ಮರಿಸಿದರು.
    ಕಾರ್ಯಕ್ರಮದಲ್ಲಿ ಸಂಘದ ಖಜಾಂಚಿ ಎ.ಆರ್.ಜಗದೀಶ್, ಕಾರ್ಯದರ್ಶಿ ಸಿದ್ದರಾಮೇಗೌಡ, ಸದಸ್ಯರಾದ ಸೋಮೇಗೌಡ, ಪ್ರವೀಣ್, ವೆಂಕಟೇಗೌಡ, ಯೋಗೇಂದ್ರ, ದಿನೇಶ್, ಕೆ.ಸಿ.ಗಣಪತಿ, ಶಂಕರೇಗೌಡ, ಟಿ.ಆರ್.ಸುಂದ್ರೇಶ್, ಮಂಜೇಗೌಡ, ನಿಯಂತ್ರಣ ವಿಭಾಗೀಯ ಅಧಿಕಾರಿ ಜಗದೀಶ್, ಒಕ್ಕಲಿಗರ ಸಂಘದ ಮಹಿಳಾ ಸದಸ್ಯರಾದ ರೇವತಿ, ರೀನಾ ಸುಜೇಂದ್ರ, ಗಾಯತ್ರಿ ಸತೀಶ್, ಪ್ರತಿಮಾ, ಕೃಷ್ಣವೇಣಿ ಮತ್ತಿತರರಿದ್ದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts