More

    ಮಹಿಳಾ ಕ್ರಿಕೆಟ್​: ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್​​ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ..!

    ಚೆನ್ನೈ: ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ಮಹಿಳಾ ತಂಡವನ್ನು 10 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿದೆ.

    ಇದನ್ನೂ ಓದಿ: T20 World Cup: ಚಾಂಪಿಯನ್‌ ಭಾರತಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ

    ಚೆನ್ನೈನ ಎಂಎ ಚಿದಂಬರಂ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಏಕೈಕ ಟೆಸ್ಟ್ ಪಂದ್ಯದಲ್ಲಿ ಎರಡೂ ಇನ್ನಿಂಗ್ಸ್ ಗಳಲ್ಲಿ ಪ್ರಾಬಲ ಮೆರೆದ ಭಾರತ ಮಹಿಳಾ ಕ್ರಿಕೆಟ್ ತಂಡ ಅರ್ಹವಾಗಿಯೇ ಜಯ ದಾಖಲಿಸಿದೆ. 232 ರನ್​​ಗಳಿಗೆ 2 ವಿಕೆಟ್​ ಕಳೆದುಕೊಂಡು ಸೋಮವಾರ ತನ್ನ ಎರಡನೇ ಇನ್ನಿಂಗ್ಸ್ ಮುಂದುವರೆಸಿದ ದಕ್ಷಿಣ ಆಫ್ರಿಕಾ ತಂಡ 373 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತಕ್ಕೆ 37 ರನ್‌ಗಳ ಸಾಧಾರಣ ಗುರಿಯನ್ನು ನೀಡಿತು.

    ಮಹಿಳಾ ಕ್ರಿಕೆಟ್​: ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್​​ ಪಂದ್ಯದಲ್ಲಿ ಭಾರತಕ್ಕೆ ಭರ್ಜರಿ ಜಯ..!

    ಈ ಸುಲಭ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ 9.2 ಓವರ್‌ಗಳಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೆ ಗೆಲುವು ಸಾಧಿಸಿತು. ತಂಡದ ಪರ ಆರಂಭಿಕ ಆಟಗಾರ್ತಿಯರಾದ ಶಫಾಲಿ ವರ್ಮಾ ಅಜೇಯ 24 ರನ್ ಹಾಗೂ ಶುಭಾ ಸತೀಶ್ ಅಜೇಯ 13 ರನ್ ಬಾರಿಸಿದರು.

    ಕಳೆದ ವರ್ಷ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್‌ಗಳನ್ನು ಭಾರಿ ಅಂತರದಿಂದ ಸೋಲಿಸಿದ ನಂತರ, ಭಾರತವು ತವರಿನಲ್ಲಿ ಮತ್ತೆ ಪ್ರಾಬಲ್ಯ ಸಾಧಿಸಿದೆ.

    ಏಕದಿನ ಸರಣಿ ಮತ್ತು ಏಕೈಕ ಟೆಸ್ಟ್ ಅನ್ನು ಗೆದ್ದ ನಂತರ, ಭಾರತವು ಜುಲೈ 5 ರಿಂದ ಚೆಪಾಕ್‌ನಲ್ಲಿ ಪ್ರಾರಂಭವಾಗುವ 3 ಪಂದ್ಯಗಳ T20I ಸರಣಿಯಲ್ಲಿ ತಮ್ಮ ಫಾರ್ಮ್ ಅನ್ನು ಸಾಗಿಸಲು ನೋಡುತ್ತಿದೆ.

    ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿರಾಟ್​ ಕೊಹ್ಲಿ ವಿದಾಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts