More

    ಸಿಎಂ,ಡಿಸಿಎಂ ರಾಜೀನಾಮೆಗೆ ಒತ್ತಾಯ

    ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
    ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮವಾಗಿ ನಡೆದ 187 ಕೋಟಿ ರೂಪಾಯಿ ಹಣ ವರ್ಗಾವಣೆಯಿಂದ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಹಾಗಾಗಿ ರಾಜ್ಯಾದ್ಯಂತ ರಾಜ್ಯದ ಎಲ್ಲ ಜಿಲ್ಲಾಡಳಿತ ಕಚೇರಿ ಮುತ್ತಿಗೆ ಹಾಕುವ ಮೂಲಕ ಭ್ರಷ್ಟಾಚಾರ ವಿರೋಧಿ ಹೋರಾಟ ನಡೆಸಲಾಗುತ್ತಿದೆ ಎಂದುದೊಡ್ಡಬಳ್ಳಾಪುರ ಶಾಸಕ ಹಾಗೂ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜು ಹೇಳಿದರು.
    ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಭ್ರಷ್ಟಾಚಾರ ಖಂಡಿಸಿ ಬಿಜೆಪಿ ಎಸ್ಟಿ ಮೋರ್ಚಾದ ಜಿಲ್ಲಾ ಅಧ್ಯಕ್ಷ ಎನ್.ನಾಗೇಶ್ ನೇತೃತ್ವದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯ ಕರ್ತರು ಶುಕ್ರವಾರ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ರಾಜೀನಾಮೆಗೆ ಒತ್ತಾಯಿಸಿದರು.
    ಹಗರಣದ ಬಗ್ಗೆ ಸಾಕ್ಷಿಗಳಿದ್ದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಗಮನಕ್ಕೆ ಬಾರದೆ ಈ ಹಗರಣ ನಡೆಯಲು ಸಾಧ್ಯವಿಲ್ಲ. ಹಿಂದುಳಿದ ಸಮುದಾಯ ಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಕೊಡಬೇಕಾದ ಸರ್ಕಾರ ಅದಕ್ಕೆ ವಿರುದ್ಧವಾಗಿ ಹಿಂದುಳಿದ ಸಮುದಾಯವಾಗಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಖಾತೆಯ 187 ಕೋಟಿ ರೂಪಾಯಿಯನ್ನು ರಾಜಾರೋಷ ವಾಗಿ ಅನುಮಾನಾಸ್ಪದ ಖಾತೆಗಳಿಗೆ ವರ್ಗಾವಣೆ ಮಾಡಿ ತೆಲಂಗಾಣದಲ್ಲಿ ಲೋಕಸಭಾ ಚುನಾವಣೆಗೆ ಖರ್ಚು ಮಾಡಿ ಜನರಿಗೆ ದ್ರೋಹ ಎಸಗಿದೆ ಎಂದು ದೂರಿದರು. ಇದರಿಂದಾಗಿ ಸರ್ಕಾರ ರಾಜ್ಯದ ಜನರ ನಂಬಿಕೆ ಕಳೆದುಕೊಂಡಿದೆ ಇಷ್ಟು ದೊಡ್ಡ ಪ್ರಮಾಣದ ಭ್ರಷ್ಟಾಚಾರ ನಡೆದರೂ ಸರ್ಕಾರ ಸೂಕ್ತ ತನಿಖೆ ನಡೆಸುತ್ತಿಲ್ಲ ಅಧಿಕಾರದಲ್ಲಿ ಮುಂದುವರಿಯಲು ಈ ಸರ್ಕಾರಕ್ಕೆ ನೈತಿಕತೆ ಇಲ್ಲ ಅದ್ದರಿಂದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
    ಅಭಿವೃದ್ಧಿ ಯೋಜನೆ ಮರೆತಿದೆ:
    ಗ್ಯಾರಂಟಿ ಯೋಜನೆಗಳಿಂದಾಗಿ ಸರ್ಕಾರ ಅಭಿವೃದ್ಧಿ ಯೋಜನೆಗಳನ್ನು ಮರೆತಿದೆ ಕಳೆದ ಒಂದು ವರ್ಷದಲ್ಲಿ ದೇವನಹಳ್ಳಿ ಸೇರಿ ಯಾವುದೇ ಭಾಗದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ ಎಂದು ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ ದೂರಿದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts