More

    ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ದುರ್ಬಳಕೆ ಪ್ರಕರಣ: ಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

    ಮಂಡ್ಯ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ದುರ್ಬಳಕೆ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಶರಣ ಪ್ರಕಾಶ್ ಪಾಟೀಲ್ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ರಾಜೀನಾಮೆಗೆ ಅಗ್ರಹಿಸಿ ಶುಕ್ರವಾರ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
    ಜಯಚಾಮರಾಜೇಂದ್ರ ಒಡೆಯರ್ ವೃತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಬಿಜೆಪಿ ಎಸ್‌ಟಿ ಮೋರ್ಚಾ ನೇತೃತ್ವದಲ್ಲಿ ಮೆರವಣಿಗೆ ಹೊರಟರು. ಹಣ ದುರ್ಬಳಕೆ ಜತೆಗೆ ಅಧಿಕಾರಿ ಸಾವಿಗೆ ಕಾರಣವಾಗಿದ್ದಾರೆಂದು ಆರೋಪಿಸಿ ರಾಜ್ಯ ಸರ್ಕಾರ, ದಲಿತ ದ್ರೋಹಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
    ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಹತ್ತಿರ ಬರುತ್ತಿದ್ದಂತೆ ಪೊಲೀಸರು ಹೊರ ಆವರಣದ ಗೇಟ್ ಮುಚ್ಚಿ ಪ್ರತಿಭಟನಾಕಾರರನ್ನು ತಡೆದರು. ಗೇಟಿನ ಕಂಬಿಯ ಮೇಲೆ ಏರಿದ ಕೆಲ ಕಾರ್ಯಕರ್ತರು ಒಳ ನುಗ್ಗಲು ಯತ್ನಿಸಿದರು. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡಲಿಲ್ಲ. ಇದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಜಿಲ್ಲಾಡಳಿತದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು. ಪ್ರತಿಭಟನಾಕಾರರನ್ನು ಹೊರ ಆವರಣದಲ್ಲಿ ತಡೆಯಲಾಗುತ್ತಿದೆ, ಜಿಲ್ಲಾಡಳಿತದ ವರ್ತನೆ ಸರಿಯಲ್ಲ ಎಂದು ಕಿಡಿಕಾರಿದರು. ಇದೇ ವೇಳೆ ಮನವಿ ಸ್ವೀಕರಿಸಲು ಜಿಲ್ಲಾಧಿಕಾರಿ ಬರಲಿಲ್ಲ. ಈ ಹಿನ್ನೆಲೆಯಲ್ಲಿ ಡಿಸಿ ಬರಲೇಬೇಕು ಎಂದು ಕೆಲಕಾಲ ಘೋಷಣೆ ಕೂಗಿದರು.
    ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಇಂಡುವಾಳು ಸಚ್ಚಿದಾನಂದ, ಕೆ.ಸಿ.ನಂಜುಂಡೇಗೌಡ, ಅಶೋಕ್ ಜಯರಾಂ, ವಿವೇಕ್, ಎಚ್.ಆರ್.ಅಶೋಕ್‌ಕುಮಾರ್, ಅರವಿಂದ್, ಸಿ.ಟಿ.ಮಂಜುನಾಥ್, ಶಿವಕುಮಾರ್ ಆರಾಧ್ಯ, ಹನಿಯಂಬಾಡಿ ನಾಗರಾಜು, ಸಿದ್ದರಾಜು, ಕೆ.ಎಲ್.ಆನಂದ, ಎಂ.ವಸಂತ್‌ಕುಮಾರ್, ಪೀಹಳ್ಳಿ ರಮೇಶ್, ಬಿ, ಕೃಷ್ಣ, ಶಿವಲಿಂಗಯ್ಯ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts