More

    ರೈತಪರ ಯೋಜನೆ ಸ್ಥಗಿತಕ್ಕೆ ಬಿಜೆಪಿ ಆಕ್ರೋಶ: ಕಾವೇರಿ ನೀರಾವರಿ ನಿಗಮದ ಕಚೇರಿಗೆ ಮುತ್ತಿಗೆ

    ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ರೈತ ಮೋರ್ಚಾ ನೇತೃತ್ವದಲ್ಲಿ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಹಸುಗಳ ಹಾಲು ಕರೆದು ಪ್ರತಿಭಟಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶಿಸಿದರು. ನಂತರ ಕಾವೇರಿ ನೀರಾವರಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಿದರು.
    ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ದಿನದಿಂದಲೂ ಕಾಂಗ್ರೆಸ್ ಸರ್ಕಾರ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ರೈತ ವಿದ್ಯಾನಿಧಿ, ಭೂ ಸಿರಿ ಕಾಯ್ದೆ, ಗೋಶಾಲೆ, ಕಿಸಾನ್ ಸಮ್ಮಾನ್ ಸೇರಿದಂತೆ ಹಲವು ಯೋಜನೆಗಳನ್ನು ಸ್ಥಗಿತ ಮಾಡುವ ಮೂಲಕ ರೈತರ ಶಕ್ತಿ ಕುಗ್ಗಿಸಲು ಮುಂದಾಗಿದೆ. ಪರಿಶಿಷ್ಟ ಸಮುದಾಯವರಿಗೆ ಮೀಸಲಿಟ್ಟಿದ್ದ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿಕೊಳ್ಳುವ ಮೂಲಕ ದ್ರೋಹ ಮಾಡಲಾಗಿದೆ. ಹಾಲಿನ ಪ್ರೋತ್ಸಾಹ ಧನವನ್ನು ಪಶುಪಾಲನಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗೆ ಬಳಕೆ ಮಾಡಿಕೊಳ್ಳಲಾಗಿದೆ ಎಂದು ಕಿಡಿಕಾರಿದರು
    ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಳ ಮಾಡಲಾಗಿದೆ. ಹಾಲಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹ ಧನವನ್ನು ಕಳೆದ ಆರು ತಿಂಗಳಿಂದ ನೀಡಿಲ್ಲ. ರೈತರು, ಕಾರ್ಮಿಕರು, ಜನಸಾಮಾನ್ಯರು ಅಷ್ಟೇ ಅಲ್ಲದೆ ಕನ್ನಡಿಗರ ವಿರೋಧಿ ಸರ್ಕಾರವಾಗಿದೆ. ಕೂಡಲೇ ಹಾಲಿನ ಪ್ರೋತ್ಸಾಹ ಧನವನ್ನು ಪಾವತಿಸಬೇಕು. ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಮಾಡಬೇಕು. ರೈತಪರ ಯೋಜನೆಗಳನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದರು.
    ಪ್ರತಿಭಟನೆಯಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ನವೀನ್, ಜಿಲ್ಲಾಧ್ಯಕ್ಷ ಅಶೋಕ್ ಜಯರಾಂ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ರಾಜ್ಯಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಶ್ರೀಧರ್, ನಾಗರಾಜು, ಲಿಂಗರಾಜು, ಜವರೇಗೌಡ, ಹನಿಯಂಬಾಡಿ ನಾಗರಾಜು, ವೈರಮುಡಿ, ವಿನಯ್ ಇತರರಿದ್ದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts