More

    ಬಿಜೆಪಿ ಹಿರಿಯ ನಾಯಕ ಎಲ್​.ಕೆ. ಅಡ್ವಾಣಿ ಆಸ್ಪತ್ರೆಗೆ ದಾಖಲು

    ನವದೆಹಲಿ: ಅನಾರೋಗ್ಯ ಹಿನ್ನೆಲೆಯಲ್ಲಿ ಬಿಜೆಪಿಯ ಹಿರಿಯ ನಾಯಕ ಲಾಲ್​ ಕೃಷ್ಣ ಅಡ್ವಾಣಿ ಅವರು ರಾಷ್ಟ್ರ ರಾಜಧಾನಿ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್​) ಆಸ್ಪತ್ರೆಗೆ ದಾಖಲಾಗಿರುವುದಾಗಿ ಆಸ್ಪತ್ರೆಯ ಮೂಲಗಳು ಬುಧವಾರ ತಿಳಿಸಿವೆ.

    96 ವರ್ಷದ ಅಡ್ವಾಣಿ ಅವರನ್ನು ದೆಹಲಿಯ ಏಮ್ಸ್‌ನ ಜೆರಿಯಾಟ್ರಿಕ್ (ವಯೋಸಹಜ) ವಿಭಾಗದ ವೈದ್ಯರ ಮೇಲ್ವಿಚಾರಣೆಯಲ್ಲಿ ಇರಿಸಲಾಗಿದೆ. ಅಡ್ವಾಣಿ ಅವರ ಆರೋಗ್ಯ ಸ್ಥಿರವಾಗಿದ್ದು, ತೀವ್ರ ನಿಗಾದಲ್ಲಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.

    ಮಾಜಿ ಉಪಪ್ರಧಾನಿ ಅಡ್ವಾಣಿ ಅವರಿಗೆ ಮೂರು ತಿಂಗಳ ಹಿಂದಷ್ಟೇ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೆಹಲಿಯ ನಿವಾಸದಲ್ಲಿ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

    ಪ್ರಶಸ್ತಿ ಪ್ರದಾನ ಔಪಚಾರಿಕ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್​, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಎಲ್​.ಕೆ ಅಡ್ವಾಣಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.

    ಎಲ್​.ಕೆ. ಅಡ್ವಾಣಿ ಅವರು 2002 ಜೂನ್ ತಿಂಗಳಿಂದ 2004 ಮೇ ತಿಂಗಳವರೆಗೆ ಭಾರತದ ಉಪ ಪ್ರಧಾನ ಮಂತ್ರಿಯಾಗಿ ಮತ್ತು 1999 ಅಕ್ಟೋಬರ್ ತಿಂಗಳಿಂದ 2004 ಮೇ ತಿಂಗಳವರೆಗೆ ಕೇಂದ್ರ ಗೃಹ ಸಚಿವರಾಗಿ ಸೇವೆ ಸಲ್ಲಿಸಿದರು. ಅಲ್ಲದೆ, 1986 ರಿಂದ 1990, 1993 ರಿಂದ 1998 ಮತ್ತು 2004 ರಿಂದ 2005 ರವರೆಗೆ ಬಿಜೆಪಿಯ ಅಧ್ಯಕ್ಷರಾಗಿದ್ದರು. (ಏಜೆನ್ಸೀಸ್​)

    ಅಡ್ವಾಣಿ ಸೇರಿ ಐವರಿಗೆ ಭಾರತ ರತ್ನ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts