More

    ಬಿಜೆಪಿ ಕಚೇರಿ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ಕಾರ್ಯಕರ್ತರ ವಶ

    ಚಿಕ್ಕಮಗಳೂರು: ಪರಿಶಿಷ್ಟ ಪಂಗಡಕ್ಕೆ ಮೀಸಲಿಟ್ಟಿದ್ದ ಕೋಟ್ಯಂತರ ರೂ. ಹಣವನ್ನು ಅಕ್ರಮವಾಗಿ ವರ್ಗಾವಣೆಗೊಳಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆಗೊಳಿಸಿದರು.

    ಜಿಲ್ಲಾ ಬಿಜೆಪಿ ಕಚೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸಿಎಂ, ಡಿಸಿಎಂ ಸೇರಿದಂತೆ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ ಪ್ರತಿಭಟನಕಾರರು ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಕಾರರನ್ನು ಬ್ಯಾರಿಕೇಡ್ ಹಾಕಿ ಅಡ್ಡಗಟ್ಟಿದ ಪೊಲೀಸರು ಅವರನ್ನು ವಶಕ್ಕೆ ಪಡೆದು ಕೆಲಕಾಲದ ಬಳಿಕ ಬಿಡುಗಡೆಗೊಳಿಸಿದರು.
    ಈ ವೇಳೆ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಆರ್.ದೇವರಾಜ ಶೆಟ್ಟಿ ಮಾತನಾಡಿ, ಎಸ್‌ಟಿ ಸಮುದಾಯಕ್ಕೆ ಮೀಸಲಿರಿಸಿದ್ದ ಸುಮಾರು ೧೮೭ ಕೋಟಿ ರೂ. ಹಣವನ್ನು ದುರ್ಬಳಕೆ ಮಾಡಿಕೊಂಡು ವಿವಿಧ ರಾಜ್ಯಗಳ ಚುನಾವಣಾ ಪ್ರಚಾರಕ್ಕೆ ಬಳಸಿಕೊಂಡಿರುವುದು ನಾಚಿಕೇಡಿನ ಸಂಗತಿ. ಈ ಹಣ ವರ್ಗಾವಣೆಯಲ್ಲಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
    ಬಡವರು, ದೀನದಲಿತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತೇವೆ ಎಂದು ಹೇಳಿ ಸುಳ್ಳು ಭರವಸೆ ಮೂಡಿಸಿ ಮತ ಪಡೆದುಕೊಂಡ ರಾಜ್ಯದ ಕಾಂಗ್ರೆಸ್ ಸರ್ಕಾರ ಇದೀಗ ಎಸ್‌ಟಿ ಸಮುದಾಯ ಅಭಿವೃದ್ಧಿಗೆ ಮೀಸಲಿರಿಸಿದ್ದ ಹಣವನ್ನು ದುರ್ಬಳಕೆ ಮಾಡಿಕೊಂಡಿದೆ. ಈ ಪ್ರಕರಣದ ಸಂಬAಧ ಸಚಿವ ನಾಗೇಂದ್ರ ರಾಜೀನಾಮೆ ಸಲ್ಲಿಸಿರುವ ಜೊತೆಗೆ ಓರ್ವ ಅಧಿಕಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಿದರು.
    ಎಸ್‌ಟಿ ಸಮುದಾಯವು ಅತ್ಯಂತ ಹಿಂದುಳಿದಿದೆ. ಸರ್ಕಾರವು ಆ ನಿಟ್ಟಿನಲ್ಲಿ ಜನಾಂಗವನ್ನು ಅಭಿವೃದ್ಧಿಗೊಳಿಸಲು ಅನುದಾನವನ್ನು ಮೀಸಲಿರಿಸಬೇಕು. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಭಾಗ್ಯಗಳಿಗೆ ಹಣ ವ್ಯಯಿಸಿ ಖಾಲಿಯಾದ ಹಿನ್ನೆಲೆಯಲ್ಲಿ ಎಸ್.ಟಿ. ಸಮುದಾಯದ ಹಣವನ್ನು ರಾಜಕೀಯ ದುರುz್ದೆÃಶಕ್ಕೆ ಬಳಸಿರುವುದು ಸರಿಯಲ್ಲ ಎಂದು ದೂರಿದರು.
    ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಎಸ್‌ಟಿ ಘಟಕದ ಜಿಲ್ಲಾಧ್ಯಕ್ಷ ನಂದೀಶ್ ಮದಕರಿ, ಅನ್ಯಾಯಕ್ಕೆ ಒಳಗಾಗಿರುವ ವಾಲ್ಮೀಕಿ ಸಮುದಾಯಕ್ಕೆ ನ್ಯಾಯ ಒದಗಿಸಬೇಕು. ಸರ್ಕಾರದಲ್ಲಿ ಸಣ್ಣ ವಸ್ತುಗಳನ್ನು ಖರೀದಿಸುವ ಅಥವಾ ಅನುದಾನ ಬಿಡುಗಡೆಗೊಳಿಸುವ ವೇಳೆ ಬಹಳಷ್ಟು ನಿಯಮಗಳನ್ನು ರೂಪಿಸಿ ಹಣವನ್ನು ನೀಡುತ್ತದೆ. ಆದರೆ ಹಸ್ತಕ್ಷೇಪವಿಲ್ಲದೇ ದೊಡ್ಡ ಮಟ್ಟದಲ್ಲಿ ಆರ್ಥಿಕ ವ್ಯವಹಾರ ನಡೆಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
    ಲೋಕಸಭಾ ಚುನಾವಣಾ ಸಮಯದ ನೀತಿ ಸಂಹಿತೆಯ ಅವಧಿಯಲ್ಲೇ ಎಸ್‌ಟಿ ಸಮುದಾಯದ ಹಣ ವರ್ಗಾವಣೆಯಾಗಲು ಸಾಧ್ಯವೇ ಎಂದ ಅವರು ಅಕ್ರಮವಾಗಿ ವಿವಿಧ ರಾಜ್ಯದ ಚುನಾವಣೆಗಳಿಗೆ ನಕಲಿ ಉದ್ಯಮಿಗ¼ನ್ನು ಸೃಷ್ಟಿಸಿ ಖಾತೆಗಳಿಗೆ ಹಣವರ್ಗಾವಣೆಯಾಗಿದೆ. ಇದಕ್ಕೆ ಸಂಬAಧಿಸಿದ ನಿಗಮದ ಅಧಿಕಾರಿ ಹಾಗೂ ಸಚಿವರೇ ಕಾರಣವೆಂದು ಅಧಿಕಾರಿ ಚಂದ್ರಶೇಖರ್ ಪತ್ರದಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿದರು.
    ಈ ಪ್ರಕರಣದಲ್ಲಿ ಹಣಕಾಸು ಇಲಾಖೆಯಡಿಯಲ್ಲೇ ಅಕ್ರಮವಾಗಿ ಹಣ ವರ್ಗಾವಣೆ ಆಗಿರುವುದು ಸ್ಪಷ್ಟವಿದೆ. ಹೀಗಾಗಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ವರ್ಗಾವಣೆಗೊಂಡ ಹಣವನ್ನು ವಾಪಸ್ ತಂದು ಎಸ್‌ಟಿ ಸಮುದಾಯಕ್ಕೆ ಬಳಕೆಗೆ ವಿನಿಯೋಗಿಸಬೇಕು ಎಂದು ಒತ್ತಾಯಿಸಿದರು.
    ಪ್ರತಿಭಟನೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಕೆ.ಎಸ್.ಪುಷ್ಪರಾಜ್, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಕುರುವಂಗಿ ವೆಂಕಟೇಶ್, ಎಸ್.ಟಿ. ಘಟಕದ ಜಿಲ್ಲಾ ಉಪಾಧ್ಯಕ್ಷರಾದ ಮೂರ್ತಿ, ಮೋಹನ್, ಪ್ರಧಾನ ಕಾರ್ಯದರ್ಶಿಗಳಾದ ಮಧುಕುಮಾರ್, ಶಂಕರ್ ಮಡೆನೆರಳು, ಮಂಡಲ ಅಧ್ಯಕ್ಷ ಮಂಜುನಾಥ್, ಮುಖಂಡರಾದ ಕೋಟೆ ರಂಗನಾಥ್, ಬೆಳವಾಡಿ ರವೀಂದ್ರ, ಪುಣ್ಯಪಾಲ್, ಮಧುಕುಮಾರ್‌ರಾಜ್ ಅರಸ್, ಬಿ. ರಾಜಪ್ಪ, ಡಾ.ನರೇಂದ್ರ, ದುರ್ಗೇಶ್, ಸಚಿನ್, ಕೌಶಿಕ್, ಸೀತರಾಮಭರಣ್ಯ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts