More

    ವಿದ್ಯೆ ಅತ್ಯಂತ ಶ್ರೇಷ್ಠವಾದ ಸಂಪತ್ತು: ಡಾ.ಶಿವಕುಮಾರ್ ಹೊಸೋಳಿಕೆ

    ವಿಜಯವಾಣಿ ಸುದ್ದಿಜಾಲ ಸುಬ್ರಹ್ಮಣ್ಯ

    ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ನೀಡುವ ಮೂಲಕ ಅವರ ವಿದ್ಯಾಭ್ಯಾಸಕ್ಕೆ ಸ್ಫೂರ್ತಿ ತುಂಬುವ ಚಿಕ್ಕ ಪ್ರಯತ್ನ ನಮ್ಮದು. ಇವುಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಜ್ಞಾನಾರ್ಜನೆ ಮಾಡಿ ಶ್ರೇಷ್ಠತೆ ಸಂಪಾದಿಸಬೇಕು. ಬದುಕಿಗೆ ವಿದ್ಯೆಯು ಅತ್ಯಂತ ಶ್ರೇಷ್ಠವಾದ ಸಂಪತ್ತು. ಆದುದರಿಂದ ಪರಿಶ್ರಮದ ಮೂಲಕ ವ್ಯಾಸಂಗ ಮಾಡಿ ಭವಿಷ್ಯದಲ್ಲಿ ಔನ್ನತ್ಯ ಹೊಂದುವತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕು ಎಂದು ಬೆಳಗಾಂನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವದ್ಯಾನಿಲಯದ ಪ್ರಾದೇಶಿಕ ನಿರ್ದೇಶಕ ಹಾಗೂ ಕಲಿಕಾ ಸಾಮಾಗ್ರಿಗಳ ದಾನಿ ಡಾ.ಶಿವಕುಮಾರ್ ಹೊಸೋಳಿಕೆ ಹೇಳಿದರು.

    ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ವತಿಯಿಂದ ಸುಬ್ರಹ್ಮಣ್ಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 225 ವಿದ್ಯಾರ್ಥಿಗಳಿಗೆ ಗುರುವಾರ ನಡೆದ ಪುಸ್ತಕ ಮತ್ತು ಕಲಿಕಾ ಸಾಮಾಗ್ರಿಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದರು.

    ಕುಕ್ಕೆ ಸುಬ್ರಹ್ಮಣ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಚಂದ್ರ ಪಳಂಗಾಯ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯಶಿಕ್ಷಕ ಪುಂಗವ ಗೌಡ ಮುಖ್ಯಅತಿಥಿಗಳಾಗಿದ್ದರು. ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಪ್ರೊ.ಕೆ.ಆರ್.ಶೆಟ್ಟಿಗಾರ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಜಯಂತ, ಶಾಲಾ ಮುಖ್ಯಶಿಕ್ಷಕ ಮಾಧವ ಗೌಡ ಮೂಕಮಲೆ, ಲಯನ್ಸ್ ಕ್ಲಬ್ ಸದಸ್ಯರಾದ ಮೋಹನ್‌ದಾಸ್ ರೈ, ಅಶೋಕ್ ಕುಮಾರ್ ಮೂಲೆಮಜಲು ಉಪಸ್ಥಿತರಿದ್ದರು.

    ನಿವೃತ್ತ ಮುಖ್ಯಶಿಕ್ಷಕ ಹಾಗೂ ಹಿರಿಯರಾದ ಪುಂಗವ ಗೌಡ ಅವರನ್ನು ಸನ್ಮಾನಿಸಲಾಯಿತು. ಕ್ಲಬ್‌ನ ನಿರ್ದೇಶಕಿ ವಿಮಲಾ ರಂಗಯ್ಯ ನಿರೂಪಿಸಿದರು. ಕಾರ್ಯದರ್ಶಿ ಸತೀಶ್ ಕೂಜುಗೋಡು ವಂದಿಸಿದರು. ಶಾಲಾ ಶಿಕ್ಷಕರು, ಪಾಲಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts