More

    ಪತ್ರಕರ್ತ ಮಿಥುನ್ ಕೊಡೆತ್ತೂರುಗೆ ಬ್ರಾೃಂಡ್ ಮಂಗಳೂರು ಪ್ರಶಸ್ತಿ



    ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ ಬ್ರಾೃಂಡ್ ಮಂಗಳೂರು -2024ನೇ ಪ್ರಶಸ್ತಿಯನ್ನು ಪತ್ರಕರ್ತ ಮಿಥುನ್ ಕೊಡೆತ್ತೂರು ಅವರಿಗೆ ನಗರದ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.
    ಪ್ರಶಸ್ತಿ ಪ್ರದಾನ ಮಾಡಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಮಾತನಾಡಿ ‘ ಪ್ರತಿಯೊಂದು ವಿಚಾರದಲ್ಲೂ ಧನಾತ್ಮಕ ಮತ್ತು ಋಣಾತ್ಮಕ ಅಭಿಪ್ರಾಯ ಇದ್ದೇ ಇರುತ್ತದೆ. ನಮ್ಮ ದೃಷ್ಟಿಕೋನ ಧನಾತ್ಮಕವಾಗಿದ್ದರೆ ಎಲ್ಲವೂ ಸುಂದರವಾಗಿ ಗೋಚರಿಸುತ್ತದೆ. ಕೋಮು ವೈಷಮ್ಯವನ್ನು ಮಟ್ಟಹಾಕಲು ಪತ್ರಕರ್ತರ ನೆರವು ಅಗತ್ಯ. ಪತ್ರಕರ್ತರು ನೀಡುವ ಧನಾತ್ಮಕ ವರದಿ ಸೌಹಾರ್ದತೆಗೆ ಪೂರಕವಾಗುತ್ತದೆ ಎಂದರು.
    ಮಂಗಳೂರು ಎನ್ನುವ ಹೆಸರೇ ದೊಡ್ಡ ಬ್ರಾೃಂಡ್. ಇಲ್ಲಿನ ಜನರು ವಿಶ್ವದಲ್ಲಿ ಗುರುತಿಸಲ್ಪಟ್ಟಿದ್ದಾರೆ. ಇಂತಹ ಶ್ರೇಷ್ಠ ಪರಂಪರೆ ಇರುವ ಮಂಗಳೂರಿನ ಕೋಮು ಸೌಹಾರ್ದ ಕಾಪಾಡುವುದು ಎಲ್ಲ ಕರ್ತವ್ಯ ಎಂದು ಅವರು ಹೇಳಿದರು.
    ಮಂಗಳೂರು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆಯ ಪತ್ರಕರ್ತರು ಸಾಮಾಜಿಕ ವ್ಯವಸ್ಥೆಯಲ್ಲಿನ ಸರಿ ತಪ್ಪುಗಳನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಾರೆ. ಕೋಮು ಸೌಹಾರ್ದ ಸ್ಥಾಪಿಸುವ ನಿಟ್ಟಿನಲ್ಲಿ ಬ್ರಾೃಂಡ್ ಮಂಗಳೂರು ಪ್ರಶಸ್ತಿಯನ್ನು ಪತ್ರಕರ್ತರ ಸಂಘ ನೀಡುತ್ತಿರುವುದು ಮಾದರಿ ಕಾರ್ಯವಾಗಿದೆ ಎಂದರು.
    ಮಾಜಿ ಎಂಎಲ್‌ಸಿ ಕ್ಯಾ. ಗಣೇಶ್ ಕಾರ್ಣಿಕ್, ಕ್ರೆಡೈ ಮಂಗಳೂರು ಘಟಕದ ಅಧ್ಯಕ್ಷ ವಿನೋದ್ ಪಿಂಟೊ, ಆಯುಷ್ ಇಲಾಖೆಯ ಜಿಲ್ಲಾ ಅಧಿಕಾರಿ ಮಹಮ್ಮದ್ ಇಕ್ಬಾಲ್, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಟ್ರಸ್ಟ್
    ಅಧ್ಯಕ್ಷ ರಾಮಕೃಷ್ಣ ಆರ್., ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯರಾದ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ಪ್ರಶಸ್ತಿ ತೀರ್ಪುಗಾರ ಹರ್ಷ ಉಪಸ್ಥಿತರಿದ್ದರು.
    ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಸ್ವಾಗತಿಸಿ. ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ವಂದಿಸಿದರು. ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ ಸನ್ಮಾನ ಪತ್ರ ವಾಚಿಸಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್.ಕಾರ್ಯಕ್ರಮ ನಿರೂಪಿಸಿದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts