More

    ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿತ: ವಾರದೊಳಗೆ ನಾಲ್ಕನೇ ಘಟನೆ!

    ಪಾಟ್ನಾ: ಬಿಹಾರದಲ್ಲಿ ಸೇತುವೆ ಕುಸಿತ ಸರಣಿ ಮುಂದುವರೆದಿದ್ದು ವಾರದೊಳಗೆ ನಾಲ್ಕು ಸೇತುವೆಗಳು ಒಂದರ ಹಿಂದೆ ಒಂದರಂತೆ ಕುಸಿದಿವೆ.
    ಇಂದು ಕಿಶನ್‌ಗಂಜ್ ಜಿಲ್ಲೆಯಲ್ಲಿ ಸೇತುವೆಯೊಂದು ಕುಸಿದು ಬಿದ್ದಿದೆ.

    ಇದನ್ನೂ ಓದಿ: ಅರಣ್ಯ ಒತ್ತುವರಿ ತಡೆಗೆ ಉಪಗ್ರಹ ಆಧಾರಿತ ತಂತ್ರಜ್ಞಾನ ಬಳಕೆಗೆ ಚಿಂತನೆ: ಸಚಿವ ಈಶ್ವರ ಖಂಡ್ರೆ

    ಕಂಕೈ ನದಿಯ ಉಪನದಿಗೆ ನಿರ್ಮಿಸಲಾಗಿರುವ 70 ಮೀಟರ್ ಸೇತುವೆ ಕುಸಿದು ಬಿದ್ದಿದ್ದು ಎರಡು ಪಟ್ಟಣಗಳಾದ ಬಹದ್ದೂರ್‌ಗಂಜ್ ಮತ್ತು ದಿಘಲ್‌ಬ್ಯಾಂಕ್ ಬ್ಲಾಕ್‌ಗಳನ್ನು ಸಂಪರ್ಕಿಸುತ್ತದೆ. ಈ ಸೇತುವೆ ಕುಸಿತವು ಎರಡು ಪಟ್ಟಣಗಳ ನಡುವಿನ ಸಂಪರ್ಕದ ಮೇಲೆ ಪರಿಣಾಮ ಬೀರಿದೆ. ಆದಾಗ್ಯೂ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.  ನದಿಯ ನೀರಿನ ಮಟ್ಟ ಹೆಚ್ಚಾಗಿದ್ದು ಹಾಗೂ ಬಲವಾದ ಪ್ರವಾಹದಿಂದಾಗಿ ಸೇತುವೆ ಮಧ್ಯದಲ್ಲಿ ಹಲವಾರು ಪಿಲ್ಲರ್​ಗಳು ಮುಳಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಸಮಾಜಿಕ ಮಾಧ್ಯಮದಲ್ಲಿ ಮೊಬೈಲ್​ನಲ್ಲಿ ಚಿತ್ರೀಕರಿಸಲಾಗಿರುವ ಪೋಟೋ ಮತ್ತು ವಿಡಿಯೋ ಭಾರಿ ವೈರಲ್ ಆಗಿವೆ. ಸೇತುವೆಯ ಮಧ್ಯ ಭಾಗ ಮುರಿದು ಬಿದ್ದಿದ್ದು ವೇಗವಾಗಿ ಹರಿಯುವ ನದಿ ನೀರನ್ನು ಸ್ಪರ್ಶಿಸುವುದನ್ನು ತೋರಿಸಿದ್ದು, ಅದು ಯಾವಾಗ ಬೇಕಾದರೂ ಕುಸಿದು ಬೀಳಬಹುದೆಂಬ ಆಂತಕವಿತ್ತು.
    ಘಟನೆಯ ಬಗ್ಗೆ ಮಾಹಿತಿ ಪಡೆದ ಬಹದ್ದೂರ್‌ಗಂಜ್ ಪೊಲೀಸ್ ಠಾಣೆಯ ಮುಖ್ಯಸ್ಥ ಅಭಿನವ್ ಪರಾಸರ್ ಅವರು ತಮ್ಮ ತಂಡದೊಂದಿಗೆ ಸ್ಥಳಕ್ಕೆ ತಲುಪಿದ್ದು ತಕ್ಷಣವೇ ಎರಡೂ ತುದಿಗಳಲ್ಲಿ ಪ್ರದೇಶವನ್ನು ಬ್ಯಾರಿಕೇಡ್ ಮಾಡಿ ವಾಹನ ಸಂಚಾರವನ್ನು ನಿಲ್ಲಿಸಿದರು.

    ಆರು ವರ್ಷಗಳ ಹಿಂದೆ ಸೇತುವೆ ನಿರ್ಮಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಸ್ತೆ ಇಲಾಖೆ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ.
    ಜಿಲ್ಲಾ ಮ್ಯಾಜಿಸ್ಟ್ರೇಟ್ ತುಷಾರ್ ಸಿಂಗ್ಲಾ ಮಾತನಾಡಿ, ಕಂಕೈ ನದಿಯನ್ನು ಮಹಾನಂದಾಗೆ ಸಂಪರ್ಕಿಸುವ ಸಣ್ಣ ಉಪನದಿಯಾದ ಮಡಿಯ ಮೇಲೆ 2011 ರಲ್ಲಿ ಸೇತುವೆಯನ್ನು ನಿರ್ಮಿಸಲಾಗಿದೆ. “ನೇಪಾಳದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯು ನೀರಿನ ಮಟ್ಟದಲ್ಲಿ ಹಠಾತ್ ಏರಿಕೆಗೆ ಕಾರಣವಾಗಿದೆ. ಸೇತುವೆಯ ಒಂದು ಕಂಬವು ಬಲವಾದ ಪ್ರವಾಹವನ್ನು ತಡೆದುಕೊಳ್ಳಲು ಸಾಧ್ಯವಾಗಲಿಲ್ಲ” ಎಂದು ಅವರು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದಿಂದ ಉಲ್ಲೇಖಿಸಿದ್ದಾರೆ.

    ಜೂನ್ 19 ರಂದು, ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಬಕ್ರಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಒಂದು ಭಾಗವು ಉದ್ಘಾಟನೆಗೊಳ್ಳುವ ಮೊದಲೇ ಕುಸಿದಿದೆ. ₹ 12 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸೇತುವೆ ಆಗಿತ್ತು ಇದು. ಕಳೆದ ಕೆಲವು ವರ್ಷಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಇದೇ ರೀತಿಯ ಹಲವಾರು ಘಟನೆಗಳು ನಡೆದಿದ್ದು, ರಾಜ್ಯದಲ್ಲಿನ ಸಾರ್ವಜನಿಕ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಪ್ರಶ್ನೆಗಳು ಮೂಡುತ್ತಿವೆ.

    NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts