ಇಂಡಿಗೋ ವಿಮಾನಗಳ ಅವ್ಯವಸ್ಥೆ: ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ | IndiGo flight

ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು
ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು
Published on: 
ನವದೆಹಲಿ: ಕಳೆದ ಮೂರು ದಿನಗಳಿಂದ ಇಂಡಿಗೋ ವಿಮಾನಗಳ(IndiGo flight) ಸಂಚಾರ ವ್ಯವಸ್ಥೆಯಲ್ಲಿ ಆಗಿರುವ ಅವ್ಯವಸ್ಥೆ ಬಗ್ಗೆ ಕೇಂದ್ರ ಸರ್ಕಾರ ಶುಕ್ರವಾರ(ಡಿ. 05) ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದೆ. ಮತ್ತೆ ಮೂರು ದಿನಗಳೊಳಗೆ ಎಲ್ಲವೂ ಸಹಜ ಸ್ಥಿತಿಗೆ ಬರುವ ಸಾಧ್ಯತೆ ಇದೆ ಎಂದು ಹೇಳಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು, ಅವ್ಯವಸ್ಥೆ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗುವುದು ಮತ್ತು ಹೊಣೆಗಾರಿಕೆಯನ್ನು ಸರಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಪೈಲಟ್‌ಗಳು ಮತ್ತು ಸಿಬ್ಬಂದಿಗೆ ವಿಶ್ರಾಂತಿ ದೊರೆಯುವಂತೆ ಮಾಡುವ ಗುರಿಯನ್ನು ಹೊಂದಿರುವ ವಿಮಾನ ಕರ್ತವ್ಯ ಸಮಯ ಮಿತಿಗಳ (ಎಫ್‌ಡಿಟಿಎಲ್) ಕೆಲವು ನಿಬಂಧನೆಗಳನ್ನು ಅಮಾನತುಗೊಳಿಸಿರುವುದನ್ನು ನಾಯ್ಡು ಸಮರ್ಥಿಸಿಕೊಂಡಿದ್ದು, ಪ್ರಯಾಣಿಕರ ಹಿತದೃಷ್ಟಿಯಿಂದ ಇದನ್ನು ಮಾಡಲಾಗಿದೆ ಮತ್ತು ಸುರಕ್ಷತೆಯಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
ಜೊತೆಗೆ, ಸಾಮಾನ್ಯ ವಿಮಾನಯಾನ ಸೇವೆಗಳನ್ನು ಆದಷ್ಟು ಬೇಗ ಪುನಃಸ್ಥಾಪಿಸಲು ಮತ್ತು ಪ್ರಯಾಣಿಕರಿಗೆ ಉಂಟಾಗುವ ಅನಾನುಕೂಲತೆಯನ್ನುಕಡಿಮೆ ಮಾಡಲು ಹಲವಾರು ಕಾರ್ಯಾಚರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಆ ಕ್ರಮಗಳ ತಕ್ಷಣದ ಅನುಷ್ಠಾನದ ಆಧಾರದ ಮೇಲೆ ನಾಳೆಯ ವೇಳೆಗೆ ವಿಮಾನ ವೇಳಾಪಟ್ಟಿಗಳು ಸ್ಥಿರಗೊಳ್ಳಲು ಆರಂಭವಾಗಿ ಸಾಮಾನ್ಯ ಸ್ಥಿತಿಗೆ ಬರುತ್ತವೆ. ಮುಂದಿನ ಮೂರು ದಿನಗಳಲ್ಲಿ ಎಲ್ಲವೂ ಸಹಜ ಸ್ಥಿತಿಗೆ ಬರಲಿದೆ ಎಂದಿದ್ದಾರೆ (ಏಜೆನ್ಸೀಸ್).