More

    NEET-UG ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಬಿಹಾರದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ

    ನವದೆಹಲಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಈ ಪ್ರಕರಣದಲ್ಲಿ ಇದು ಮೊದಲ ಬಂಧನವಾಗಿದೆ.ಸಿಬಿಐ ಅಧಿಕಾರಿಗಳ ತಂಡ ಇಂದು (ಗುರುವಾರ) ಪಾಟ್ನಾದಲ್ಲಿ ಆರೋಪಿಗಳಾದ ಮನೀಶ್‌ ಕುಮಾರ್‌ ಮತ್ತು ಅಶುತೋಷ್‌ ಅರವನ್ನು ಬಂಧಿಸಲಾಗಿದೆ. ಎಂದು ಗುರುತಿಸಲಾಗಿದೆ.

    ಇದನ್ನೂ ಓದಿ: ಸಿಎಂ ಸ್ಥಾನ ಬಿಟ್ಟುಕೊಡಲು ಹೇಳಿದ ಸ್ವಾಮೀಜಿಗೆ ಸಚಿವ ಕೆ.ಎನ್​. ರಾಜಣ್ಣ ಸವಾಲು…

    ಆರೋಪಿಗಳ ಪೈಕಿ ಮನೀಶ್‌ ಕುಮಾರ್‌ ವಿದ್ಯಾರ್ಥಿಗಳನ್ನು ತನ್ನ ಕಾರಿನಲ್ಲಿ ಕೂರಿಸಿ ಕರೆದೊಯ್ದಿದ್ದನೆಂದು ಹಾಗೂ ಕನಿಷ್ಠ ಎರಡು ಡಜನ್‌ ವಿದ್ಯಾರ್ಥಿಗಳಿಗೆ ಕೊಠಡಿಗಳನ್ನು ಕಾಯ್ದಿರಿಸಿದ್ದ ಎಂದು ತಿಳಿದು ಬಂದಿದೆ. ಇನ್ನೋರ್ವ ಆರೋಪಿ ಅಶುತೋಷ್‌ ವಿದ್ಯಾರ್ಥಿಗಳಿಗೆ ತನ್ನ ನಿವಾಸದಲ್ಲಿ ವಸತಿ ಸೌಕರ್ಯ ಒದಗಿಸಿ ಅಲ್ಲಿ ಅವರಿಗೆ ಸೋರಿಕೆಯಾದ ಪ್ರಶ್ನೆ ಪತ್ರಿಕೆಗಳು ಮತ್ತು ಉತ್ತರಗಳನ್ನು ನೀಡಲಾಗಿದೆ ಎಂದು ಪ್ರಕರಣಕ್ಕೆ ಸಂಬಂಧಿಸಿದ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಸಿಬಿಐ ಕನಿಷ್ಠ ಆರು ಎಫ್‌ಐಆರ್‌ಗಳನ್ನು ದಾಖಲಿಸಿದೆ.

    ಗುರುವಾರ ಇಬ್ಬರನ್ನು ವಿಚಾರಣೆಗಾಗಿ ಸಿಬಿಐ ಕರೆದಿತ್ತು. ವಿಚಾರಣೆಯ ಬಳಿಕ ಇಬ್ಬರ ಬಂಧನ ನಡೆದಿದೆ. ಇಬ್ಬರನ್ನು ಬಂಧನ ಮಾಡುವ ಮೊದಲು ಬಿಹಾರ, ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಕೆಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಪರೀಕ್ಷೆಗೆ ಒಂದು ದಿನ ಮುಂಚಿತವಾಗಿ ಪ್ರಶ್ನೆ ಪತ್ರಿಕೆಯ ಪ್ರತಿಯನ್ನು ತಾನು ಮತ್ತು ಇತರ ಕೆಲವರು ಪಡೆದುಕೊಂಡಿದ್ದೇವೆ ಎಂದು ಹೇಳಿದ ಅಭ್ಯರ್ಥಿಯನ್ನು ವಿಚಾರಣೆ ನಡೆಸಿದ್ದಾರೆ.

    ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಮೇ 5 ರಂದು ನಡೆಸಿದ ಪರೀಕ್ಷೆಯಲ್ಲಿ ಸುಮಾರು 24 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಮತ್ತು 1,500 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ನೀಡಿದ್ದು ವಿವಾದಕ್ಕೆ ಕಾರಣವಾಗಿ ದೇಶಾದ್ಯಂತ ಭಾರೀ ಪ್ರತಿಭಟನೆ ನಡೆದಿತ್ತು.
    ಈ ವರ್ಷ, NEET-UG ಪರೀಕ್ಷೆಯಲ್ಲಿ 67 ಮಂದಿ ಟಾಪರ್ ಗಳಾಗಿದ್ದು ಅವರೆಲ್ಲರೂ 720/720 ಅಂಕಗಳನ್ನು ಗಳಿಸಿದ್ದಾರೆ. NEET 2023 ರಲ್ಲಿ ಇಬ್ಬರು ಟಾಪರ್‌ ಮತ್ತು 2022 ರಲ್ಲಿ ಒಬ್ಬ ಟಾಪರ್ ಆಗಿದ್ದರು.

    ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಸಿಬಿಐ ಇಬ್ಬರನ್ನು ಬಿಡುಗಡೆ ಮಾಡಿದೆ. ಈ ವ್ಯಕ್ತಿಗಳನ್ನು ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ಚಾರ್ಹಿ ಎಂಬ ಪಟ್ಟಣದಲ್ಲಿರುವ ಸಿಸಿಎಲ್ ಅತಿಥಿಗೃಹದಲ್ಲಿ ವಿಚಾರಣೆಗೊಳಪಡಿಸಲಾಗಿತ್ತು. ಈ ವ್ಯಕ್ತಿಗಳನ್ನು ಹಜಾರಿಬಾಗ್ ಮೂಲದ ಓಯಸಿಸ್ ಶಾಲೆಯ ಪ್ರಾಂಶುಪಾಲರು ಮತ್ತು ಸಿಬ್ಬಂದಿ ಎಂದು ಗುರುತಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts