More

    ಅರ್ಜಿ ಸಲ್ಲಿಸಿಲು ಮುಗಿಬಿದ್ದ ಕಲಾವಿದರು

    ಚಾಮರಾಜನಗರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೈಜ ಕಲಾವಿದರನ್ನು ಗುರುತಿಸಿ ಗುರುತಿನ ಚೀಟಿ ನೀಡಲು ಮುಂದಾಗಿದ್ದು, ಅರ್ಜಿ ಸಲ್ಲಿಸಲು ಜೂ.26 ಕೊನೆಯ ದಿನವಾಗಿದ್ದರೂ ಅವಧಿ ವಿಸ್ತರಣೆ ಮಾಡಿರುವುದರಿಂದ ಶುಕ್ರವಾರ ಅರ್ಜಿ ಸಲ್ಲಿಸಲು ಕಲಾವಿದರು ಮುಗಿಬಿದ್ದರು.

    ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದ ವರನಟ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿರುವ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಕಚೇರಿಯಲ್ಲಿ ಬೆಳಿಗ್ಗೆಯಿಂದಲೇ ನೂರಾರು ಕಲಾವಿದರು ಅರ್ಜಿ ಸಲ್ಲಿಸುವ ಸಲುವಾಗಿ ಸಾಲುಗಟ್ಟಿ ನಿಂತಿದ್ದರು. ಮಹಿಳಾ ಜಾನಪದ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸುವ ಸಲುವಾಗಿ ದಾಖಲಾತಿಗಳ ಸಮೇತ ಹಾಜರಾಗಿದ್ದರು. ಕಳೆದು ಒಂದು ವಾರದಿಂದ ಕಲಾವಿದರಿಗೆ ಗುರುತಿನ ಚೀಟಿ ನೀಡುವ ಉದ್ದೇಶದಿಂದ ನೈಜಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿತ್ತು. ಈಗಾಗಲೇ ಜೂ.26 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಆದರೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದೇರ್ಶಕರು ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಿರುವ ಉದ್ದೇಶದಿಂದ ನೂರಾರು ಕಲಾವಿದರು ಗುರುತಿನ ಚೀಟಿ ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ಬರುತ್ತಿದ್ದಾರೆ.

    ಜಿಲ್ಲೆಯಲ್ಲಿ ಇನ್ನು ಹೆಚ್ಚಿನ ಕಲಾವಿದರು ಇದ್ದು, ಅರ್ಧದಷ್ಟು ಜನರಿಗೂ ಅರ್ಜಿ ಸಲ್ಲಿಸುವ ಕುರಿತು ಮಾಹಿತಿ ತಲುಪಿಲ್ಲ. ಈ ನಿಟ್ಟಿನಲ್ಲಿ ಇನ್ನೂ ಮತ್ತಷ್ಟು ದಿನ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಬೇಕು ಕಲಾವಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳನ್ನು ಈ ಮೂಲಕ ಒತ್ತಾಯಿಸಿದ್ದಾರೆ.

    1000 ಕ್ಕಿಂತಲೂ ಹೆಚ್ಚು ಜನರಿಂದ ಅರ್ಜಿ:
    ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ಈಗಾಗಲೇ 1000 ಕ್ಕಿಂತಲೂ ಹೆಚ್ಚು ಜನರು ಅರ್ಜಿ ಸಲ್ಲಿಸಿದ್ದಾರೆ. ಜಾನಪದ ತಂಬೂರಿ ಕಲಾವಿದರು, ಸೋಬಾನೆ ಕಲಾವಿದರು, ಡೊಳ್ಳುಕುಣಿತ, ಕಂಸಾಳೆ, ಗೊರವರ ಕುಣಿತ, ವೀರಗಾಸೆ ಹಾಗೂ ಇನ್ನೂ ಮುಂತಾದ ಕಲಾ ಪ್ರಕಾರಗಳಲ್ಲಿ ಪರಿಣಿತಿಯನ್ನು ಪಡೆದುಕೊಂಡಿರುವ ಕಲಾವಿದರು ಹಾಗೂ ಸಾಹಿತಿ, ಬರಹಗಾರರು ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ಜಿಲ್ಲೆಯಲ್ಲಿ ಇನ್ನೂ ಸಾಕಷ್ಟು ಜನ ನೈಜ ಕಲಾವಿದರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಗುರುತಿನ ಚೀಟಿ ಪಡೆಯಲು ಅರ್ಜಿ ಸಲ್ಲಿಸಬೇಕು ಎನ್ನುವ ಮಾಹಿತಿಯೇ ತಿಳಿದಿಲ್ಲ. ಗ್ರಾಮೀಣ ಭಾಗದಲ್ಲಿ ಇರುವ ಕಲಾವಿದರಿಗಂತೂ ಈ ಕುರಿತು ಕಂಚಿತ್ತೂ ಮಾಹಿತಿ ಇಲ್ಲದಂತಾಗಿದೆ. ಈ ನಿಟ್ಟಿನಲ್ಲಿ ಅರ್ಜಿಸಲ್ಲಿಸುವ ದಿನಾಂಕವನ್ನು ಮುಂದೂಡಬೇಕು ಎಂದು ರಂಗ ಕಲಾವಿದ ಶಿವಶಂಕರ್ ಚಟ್ಟು ಅವರು ವಿಜಯವಾಣಿ ಜತೆಗೆ ಮಾತನಾಡಿ ಒತ್ತಾಯಿಸಿದರು.

    ಕಲಾವಿದರನ್ನು ಕ್ರೂಢೀಕರಿಸುವ ಉದ್ದೇಶ:
    ಕಲಾವಿದರ ವಿವರಗಳನ್ನು ಕ್ರೋಢಿಕರಿಸುವ ದೃಷ್ಟಿಯಿಂದ ಜಿಲ್ಲೆಯ ಕಲಾವಿದರ, ಕಲಾತಂಡಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಸೂಕ್ತ ಕಾರ್ಯಕ್ರಮಗಳನ್ನು ನೀಡಲು ಹಾಗೂ ನೈಜ ಕಲಾವಿದರ ಪಟ್ಟಿಯನ್ನು ತಯಾರಿಸಿ ಗುರುತಿನ ಚೀಟಿ ನೀಡಲು ಅರ್ಹ ಕಲಾವಿದರು, ಕಲಾತಂಡದವರು ಹಾಗೂ ಸಾಹಿತಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಲ್ಲಿ ದೊರೆಯುವ ಅರ್ಜಿಯಲ್ಲಿ ಸ್ವ-ವಿವರದ ಮಾಹಿತಿಯೊಂದಿಗೆ ಕಲಾವಿದರು ತಮ್ಮ ಆಧಾರ್ ಗುರುತಿನ ಚೀಟಿ, ಪಡಿತರ ಚೀಟಿ, ಚುನಾವಣಾ ಗುರುತಿನ ಚೀಟಿ, ಪ್ರತಿಷ್ಠಿತ ಸಂಘ ಸಂಸ್ಥೆಗಳಿಂದ ಪಡೆದ ಪ್ರಶಸ್ತಿ ಪುರಸ್ಕಾರಗಳ ವಿವರ, ಪ್ರಮುಖ ಪ್ರದರ್ಶನಗಳ ವಿವರ, ಶಿಲ್ಪ ಚಿತ್ರಕಲೆಗಳ ಕಲಾ ಪ್ರದರ್ಶನಗಳು ಹಾಗೂ ಛಾಯಾಚಿತ್ರಗಳನ್ನು ಲಗತ್ತಿಸಬೇಕಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts