More

    ಯುವನಿಧಿ ಫಲಾನುಭವಿಗಳ ೋಷಣೆಗೆ ಮನವಿ

    ಚಾಮರಾಜನಗರ: ಯುವನಿಧಿ ಯೋಜನೆಯ ಪ್ರಯೋಜನ ಪಡೆಯುತ್ತಿರುವ ಅರ್ಹ ಅಭ್ಯರ್ಥಿಗಳು ಪ್ರತಿ ತಿಂಗಳು 25ನೇ ತಾರೀಖಿನೊಳಗಾಗಿ ಸ್ವಯಂಘೋಷಣೆ ಮಾಡಿಕೊಳ್ಳುವಂತೆ ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

    ಯುವನಿಧಿ ಯೋಜನೆಯಡಿ ಪದವಿ ಮತ್ತು ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೋಮಾಗಳನ್ನು 2022-23ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡಿ 2023ರಲ್ಲಿ ತೇರ್ಗಡೆಯಾಗಿ ಅರ್ಹತೆ ಹೊಂದಿದ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿಯಾಗಿದ್ದು ಹಾಗೂ ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿದ ಅಭ್ಯರ್ಥಿಗಳಿಗೆ ಜನವರಿ 2024 ರಿಂದ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ.

    ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ವೆಬ್‌ಸೈಟ್‌ನಲ್ಲಿ ಸ್ವಯಂಘೋಷಣೆ ಮಾಡಿಕೊಳ್ಳಬೇಕು. ಉಳಿದಂತೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಿಕೊಂಡು, ಒಂದು ವೇಳೆ ಅರ್ಜಿಯು ಅಪ್ರೂವ್ ಆಗದ ಸಂದರ್ಭದಲ್ಲಿ ಸೂಚಿಸಲ್ಪಟ್ಟ ಇಲಾಖೆಯ ಕಚೇರಿಗಳಿಗೆ ತಮ್ಮ ಎಲ್ಲಾ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಅವುಗಳ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಿ ಅಪ್ರೂವ್ ಮಾಡಿಸಿಕೊಳ್ಳಬೇಕು.

    ಹೆಚ್ಚಿನ ಮಾಹಿತಿಯನ್ನು ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಜಿಲ್ಲಾ ಉದ್ಯೋಗಾಧಿಕಾರಿ ಯವರನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಅಥವಾ ದೂ.ಸಂ 08226-224430 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿ ಎ. ಮಹಮ್ಮದ್ ಅಕ್ಬರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts