More

    ದೆಹಲಿಯಲ್ಲಿ ಅಮಿತ್ ಷಾ ಭೇಟಿಯಾದ ಸಿಎಂ: ರಾಜ್ಯದ ಪರವಾಗಿ ಮಂಡಿಸಲಾದ ಪ್ರಮುಖ ಪ್ರಸ್ತಾವನೆಗಳು ಹೀಗಿವೆ

    ಬೆಂಗಳೂರು: ನವದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ, ನಿನ್ನೆ (ಜೂ.28) ಸಂಜೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿಗೆ ಒತ್ತಾಯಿಸಿದರು.

    ಇದನ್ನೂ ಓದಿ: ಇವರು ಯಾರು ಬಲ್ಲಿರೇನು? ಅಪ್ಪು ಜತೆ ಸಿನಿಮಾ ಮಾಡಿ ಬ್ಲಾಕ್ಬಸ್ಟರ್ ಹಿಟ್​ ಕೊಟ್ಟು ಸೆನ್ಸೇಷನ್ ಕ್ರಿಯೇಟ್​​ ಮಾಡಿದ ಚೆಲುವೆ ಈಕೆ

    ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಸಲ್ಲಿಸಿದೆ ಎಂದು ಸಿಎಂ ಹೇಳಿದರು.

    ರಾಜ್ಯದ ಪರವಾಗಿ ಮಂಡಿಸಲಾದ ಪ್ರಮುಖ ಪ್ರಸ್ತಾವನೆಗಳು ಹೀಗಿವೆ:

    ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ ಇಂಡಿಯನ್​ ರಿಸರ್ವ್​ ಬೆಟಾಲಿಯನ್​ (India Reserve Battalion) ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡುವುದು. ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆಯನ್ನು ತಲಾ 200 ಕೋಟಿ ರೂ.ಗಳಂತೆ ಒಟ್ಟು 1,000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡುವುದು.

    ಹೈಕೋರ್ಟಿನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ ಬಾಡಿ ವೋರ್ನ್ ಕ್ಯಾಮೆರಾ (Body worn camera) ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 ಕ್ಯಾಮರಾ ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವುದು. ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ / ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವುದು.

    ಇದನ್ನೂ ಓದಿ: ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ; ಸಿಎಂ-ಡಿಸಿಎಂ ಹುದ್ದೆ ವಿವಾದದ ಕುರಿತು ಡಿಕೆಶಿ ಖಡಕ್​ ವಾರ್ನಿಂಗ್

    ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್‌ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು ಎಂದು ಸಿಎಂ ಹೇಳಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ್​, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮೊದಲಾದವರು ಉಪಸ್ಥಿತರಿದ್ದರು.

    ಚಿತ್ರರಂಗದಲ್ಲಿ ‘ಸಾರಥಿ’ಗಿರುತ್ತ ಉಳಿವು​? ಮುಂದಿನ ಚಿತ್ರಗಳ ಕಥೆಯೇನು? ಹೀಗಿದೆ ವರದಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts