More

    ಬಿಎಸ್‌ವೈ ವಿರುದ್ಧ ಕಾಂಗ್ರೆಸ್ ಹಗೆತನ ಆರೋಪ

    ಮೈಸೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹಗೆತನ ಮತ್ತು ಹೇಡಿತನದ ರಾಜಕಾರಣ ನಡೆಸುತ್ತಿದೆ ಎಂದು ಬಿಜೆಪಿ ಮುಖಂಡ ಗುರುಪಾದಸ್ವಾಮಿ ಆರೋಪಿಸಿದರು.
    ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಕಾಂಗ್ರೆಸ್ ಅಸಹ್ಯಕರ ರಾಜಕಾರಣ ಆರಂಭಿಸಿದೆ. ಪೋಕ್ಸೊ ಪ್ರಕರಣ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಚುನಾವಣೆ ಸಂದರ್ಭದಲ್ಲಿ ಬಂಧಿಸಿದರೆ ಮತಗಳು ಬರುವುದಿಲ್ಲ ಎಂಬ ಮುಂದಾಲೋಚನೆಯಲ್ಲಿ ಸುಮ್ಮನಿದ್ದು, ಈಗ ಬಂಧಿಸಲು ಪೊಲೀಸ್ ಇಲಾಖೆಗೆ ಹೇಳಿ ವಾರಂಟ್ ಹೊರಡಿಸಿದೆ ಎಂದು ಹೇಳಿಕೆಯಲ್ಲಿ ದೂರಿದ್ದಾರೆ.
    ದೂರುದಾರೆ ಮಹಿಳೆ ಮಾನಸಿಕ ಅಸ್ವಸ್ಥೆ. ಹಿರಿಯ ಅಧಿಕಾರಿಗಳು ಸೇರಿದಂತೆ ಅಂದಾಜು 50 ಜನರ ಮೇಲೆ ಆಕೆ ಈಗಾಗಲೇ ಸುಳ್ಳು ಕೇಸುಗಳನ್ನು ದಾಖಲಿಸಿದ್ದಾಗಿ ಸ್ವತಃ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರೇ ಹೇಳಿದ್ದರು. ಆದರೆ ಈಗ ಅವರು ಆ ಬಗ್ಗೆ ಮಾತನಾಡುತ್ತಿಲ್ಲ ಎಂದು ಟೀಕಿಸಿದ್ದಾರೆ.
    ಸಂತ್ರಸ್ತೆ ಪರವಾಗಿ ದೂರು ನೀಡಿದ್ದ ಮಹಿಳೆ ಈಗಾಗಲೇ ತೀರಿಕೊಂಡಿದ್ದಾರೆ. ಆದರೂ ಯಡಿಯೂರಪ್ಪ ಅವರನ್ನು ಮಣಿಸುವ ಸಲುವಾಗಿ ಬಂಧಿಸುವ ಯತ್ನ ನಡೆಸಲಾಗಿದೆ. ಈ ಪ್ರಕರಣದ ಬಗ್ಗೆ ದೂರು ದಾಖಲು ಆದಾಗಲೇ ತನಿಖೆ ನಡೆಸಬಹುದಿತ್ತು. ಅದನ್ನು ಬಿಟ್ಟು ವೈಯಕ್ತಿಕ ದ್ವೇಷಕ್ಕಾಗಿ ಯಡಿಯೂರಪ್ಪ ಅವರನ್ನು ಈಗ ಬಂಧಿಸಲು ಸರ್ಕಾರ ಮುಂದಾಗಿರುವುದು ಹೇಡಿತನ ಎಂದು ದೂರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts