More

    ಲೋಕಸಭೆ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ!

    ನವದೆಹಲಿ: ಲೋಕಸಭಾ ಚುನಾವಣೆಯ ಬಳಿಕ ಇಂಡಿ ಒಕ್ಕೂಟದ ಘಟಕಗಳ ಸಭೆ ನಡೆದಿದೆ. ಈ ಸಭೆಯ ನಂತರ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪ್ರತಿಪಕ್ಷದ ನಾಯಕರನ್ನಾಗಿ ಘೋಷಣೆ ಮಾಡಲಾಗಿದೆ.

    ಇದನ್ನೂ ಓದಿ: ರಾಣೆಬೆನ್ನೂರು: ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

    ಮಾಹಿತಿಯ ಪ್ರಕಾರ, ಸಭೆಯಲ್ಲಿ ಲೋಕಸಭಾ ಪ್ರತಿಪಕ್ಷದ ನಾಯಕನ ಆಯ್ಕೆ ವಿಷಯದ ಬಗ್ಗೆ ಸಭೆ ನಡೆದಿದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯನ್ನು ಪ್ರತಿಪಕ್ಷದ ನಾಯಕನನ್ನಾಗಿ ಮಾಡಲು ಪ್ರಸ್ತಾಪಿಸಲಾಗಿದೆ. ಅನೇಕ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲು ಒತ್ತಾಯಿಸಿದ್ದು, ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

    ಲೋಕಸಭಾ ವಿಪಕ್ಷ ಸ್ಥಾನಕ್ಕೆ ರಾಹುಲ್‌ ಗಾಂಧಿ ಅವರೇ ಆಗಬೇಕೆಂದು ಕಾಂಗ್ರೆಸ್‌ ನಾಯಕರು ಹಿಂದೆ ಆಗ್ರಹ ಮಾಡಿದ್ದರು. ಆದರೆ ರಾಹುಲ್‌ ಗಾಂಧಿ ಕಡೆಯಿಂದ ಯಾವುದೇ ಅಂತಿಮ ತೀರ್ಮಾನ ಬಂದಿರಲಿಲ್ಲ. ಈಗ ರಾಹುಲ್‌ ಗಾಂಧಿ ವಿಪಕ್ಷ ನಾಯಕನ ಸ್ಥಾನವನ್ನು ಒಪ್ಪಿಕೊಂಡಿದ್ದಾರೆ.

    ಮಾಹಿತಿಯ ಪ್ರಕಾರ, ಸಭೆಯಲ್ಲಿ ಲೋಕಸಭಾ ಪ್ರತಿಪಕ್ಷದ ನಾಯಕನ ಆಯ್ಕೆ ವಿಷಯದ ಬಗ್ಗೆ ಸಭೆ ನಡೆದಿದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯನ್ನು ಪ್ರತಿಪಕ್ಷದ ನಾಯಕನನ್ನಾಗಿ ಮಾಡಲು ಪ್ರಸ್ತಾಪಿಸಲಾಗಿದೆ. ಅನೇಕ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲು ಒತ್ತಾಯಿಸಿದ್ದು, ಈ ಹಿನ್ನೆಲೆಯಲ್ಲಿ ವಿಪಕ್ಷ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

    2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ 99 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅದರಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರು ವಿರೋಧ ಪಕ್ಷದ ನಾಯಕರಾಗಿ ನೇಮಕಗೊಂಡಿರುವುದು ನಮಗೆ ಖುಷಿ ತಂದಿದೆ ಎಂದು ಶಿವಸೇನೆ (ಯುಬಿಟಿ) ನಾಯಕ ಆನಂದ್ ದುಬೆ ಹೇಳಿದ್ದಾರೆ.

    ಪ್ರಧಾನಿ ಮೋದಿ ಅವರ ಮೊದಲ ಅವಧಿಯಲ್ಲಿ ಮಲ್ಲಿಕಾರ್ಜುನ ಖರ್ಗೆ,ಎರಡನೇ ಅವಧಿಯಲ್ಲಿ ಅಧಿರಂಜನ್‌ ಚೌಧರಿ ಲೋಕಸಭೆಯ ವಿಪಕ್ಷ ನಾಯಕನಾಗಿ ಆಯ್ಕೆ ಆಗಿದ್ದರು.

    ವಕೀಲನ ಹತ್ಯೆ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರ ವಕೀಲರ ಸಂಘದ ಮಾಜಿ ಅಧ್ಯಕ್ಷನ ಬಂಧನ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts