ಕಂಟೈನರ್ ಲಾರಿ ಅಪಘಾತ: ಉಪ್ಪಿನಂಗಡಿ ಬಳಿ ಹೆದ್ದಾರಿ ಸಂಚಾರ ಅಸ್ತವ್ಯಸ್ತ

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ಕಳೆದುಕೊಂಡು ಕಂಟೈನರ್ ಲಾರಿ ಹೆದ್ದಾರಿ ಬದಿಯ ಚರಂಡಿಗೆ ಬಿದ್ದು, ಅದರ ಕಂಟೈನರ್ ಹೆದ್ದಾರಿಯಲ್ಲಿ ಅಡ್ಡವಾಗಿ ತಿರುಗಿ ನಿಂತಿದ್ದರಿಂದ ಕೆಲವು ಗಂಟೆ ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಉಪ್ಪಿನಂಗಡಿ ಬಳಿಯ ಕೂಟೇಲು ಎಂಬಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ. ಎರಡು ಗಂಟೆಗಳ ಕಾಲ ಸುಗಮ ಸಂಚಾರಕ್ಕೆ ತೊಡಕು ಮಂಗಳೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿ ಬೆಳಗ್ಗೆ 6.30ರ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಸಾಗಿ ರಸ್ತೆ ಬದಿಯ ಚರಂಡಿಗೆ ಇಳಿಯಿತು. … Continue reading ಕಂಟೈನರ್ ಲಾರಿ ಅಪಘಾತ: ಉಪ್ಪಿನಂಗಡಿ ಬಳಿ ಹೆದ್ದಾರಿ ಸಂಚಾರ ಅಸ್ತವ್ಯಸ್ತ