More

    ಮೇಳಾಪುರದಲ್ಲಿ ದಂಪತಿ ಸಂಪರ್ಕ ಪಾಕ್ಷಿಕ ಕಾರ್ಯಕ್ರಮ

    ಶ್ರೀರಂಗಪಟ್ಟಣ: ತಾಲೂಕಿನ ಮೇಳಾಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ತಾಲೂಕು ಆರೋಗ್ಯ ಇಲಾಖೆ ಹಾಗೂ ಮಹದೇವಪುರ ಆಯುಷ್ಮಾನ್ ಆರೋಗ್ಯ ಮಂದಿರ ಸಹಯೋಗದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ಶನಿವಾರ ದಂಪತಿ ಸಂಪರ್ಕ ಪಾಕ್ಷಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.


    ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ. ಬೆನ್ನೂರ ಮಾತನಾಡಿ,
    ಸರಿಯಾದ ವಯಸ್ಸಿಗೆ ಮದುವೆ, ಮಕ್ಕಳ ನಡುವೆ ಅಂತರ ಕಾಪಾಡಿಕೊಳ್ಳುವುದು ಮುಖ್ಯ. ಹಾಗಾದರೆ ಮಾತ್ರ ತಾಯಿ-ಮಕ್ಕಳ ಆರೋಗ್ಯ ಉತ್ತಮವಾಗಿರುತ್ತದೆ. ಮುಖ್ಯವಾಗಿ ಸಂತಾನೋತ್ಪತ್ತಿ ಆರೋಗ್ಯ ಸೇವೆಗಳಾದ ತಾತ್ಕಾಲಿಕ, ಆಧುನಿಕ ಅಲ್ಪಾವಧಿ ಮತ್ತು ದೀರ್ಘಕಾಲಿನ ಗರ್ಭ ನಿರೋಧಕಗಳು ಹಾಗೂ ಶಾಶ್ವತ ವಿಧಾನಗಳನ್ನು ಪ್ರತಿ ದಂಪತಿಯೂ ಬಳಸಿಕೊಳ್ಳಬೇಕು. ಒಟ್ಟಾರೆ ತಾಯಿ ಮತ್ತು ಮಗುವಿನ ಆರೋಗ್ಯದ ಹಿತದೃಷ್ಟಿಯಿಂದ ಅರ್ಹ ತಾಯಂದಿರು ಕುಟುಂಬ ಕಲ್ಯಾಣ ತಾತ್ಕಾಲಿಕ ವಿಧಾನಗಳನ್ನು ಪಾಲಿಸಬೇಕೆಂದು ಸಲಹೆ ನೀಡಿದರು.
    ತಾಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಜಿ.ಮೋಹನ್ ಮಾತನಾಡಿದರು.


    ಕಾರ್ಯಕ್ರಮದಲ್ಲಿ ವಿವಿಧ ಕುಟುಂಬ ಕಲ್ಯಾಣ ವಿಧಾನಗಳ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಗ್ರಾಪಂ ಸದಸ್ಯ ವೆಂಕಟೇಶ್, ಆರೋಗ್ಯ ನಿರೀಕ್ಷಣಾಧಿಕಾರಿ ಕೃಷ್ಣೇಗೌಡ, ಸಮುದಾಯ ಆರೋಗ್ಯ ಅಧಿಕಾರಿ ಶರತ್ ಕುಮಾರ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ತಸ್ಮಿಯಬಾನು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಗರ್ಭಿಣಿಯರು, ಬಾಣಂತಿಯರು ಇತರರು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts