More

    ಬೆಳ್ಳಾರೆಯಲ್ಲಿ ಸೈಬರ್ ಕ್ರೈಂ ಮಾಹಿತಿ : ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

    ವಿಜಯವಾಣಿ ಸುದ್ದಿಜಾಲ ಸುಳ್ಯ

    ಬೆಳ್ಳಾರೆಯ ಶ್ರೀ ಸದಾಶಿವ ಚಾರಿಟೇಬಲ್ ಸೊಸೈಟಿ ಆಶ್ರಯದಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಸುಳ್ಯ ಘಟಕದ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ಕೌಶಲಾಭಿವೃದ್ಧಿ ಮತ್ತು ಸೈಬರ್ ಕ್ರೈಂ ಬಗ್ಗೆ ಮಾಹಿತಿ ಕಾರ್ಯಕ್ರಮ ಬೆಳ್ಳಾರೆ ಕೆಪಿಎಸ್ ಶಾಲಾ ಸಭಾಂಗಣದಲ್ಲಿ ನಡೆಯಿತು.

    ಶ್ರೀ ಸದಾಶಿವ ಚಾರಿಟೆಬಲ್ ಸೊಸೈಟಿ ಅಧ್ಯಕ್ಷ ಸುಬ್ರಹ್ಮಣ್ಯ ಜೋಶಿ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ದುರ್ಗಾಕುಮಾರ್ ನಾಯರ್‌ಕೆರೆ ಮಾತನಾಡಿ, ಜಗತ್ತಿನಲ್ಲಿ ಗೆದ್ದವರು ಶ್ರೇಷ್ಠರು, ಸೋತವರು ಅಸಮರ್ಥರಲ್ಲ. ಸೋತಾಗ ಫೀನಿಕ್ಸ್‌ನಂತೆ ಪುಟಿದೇಳುವುದೇ ನೈಜ ಗೆಲುವು ಎಂದರು.

    ಬೆಳ್ಳಾರೆ ಪೊಲೀಸ್ ಠಾಣೆಯ ಎ.ಎಸ್.ಐ ದಾಮೋದರ್, ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಅಧ್ಯಕ್ಷ ಈಶ್ವರ್ ವಾರಣಾಸಿ, ಕೆಪಿಎಸ್ ಪ್ರಾಂಶುಪಾಲ ಜನಾರ್ದನ ಕೆ.ಎನ್, ಉಪಪ್ರಾಂಶುಪಾಲೆ ಉಮಾಕುಮಾರಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಮಾಯಿಲಪ್ಪ ಜಿ., ಎಸ್‌ಡಿಎಂಸಿ ಅಧ್ಯಕ್ಷ ಶ್ರೀನಾಥ್ ರೈ ಬಾಳಿಲ, ಸದಸ್ಯ ಹರ್ಷ ಜೋಗಿಬೆಟ್ಟು, ಶ್ಯಾಮಲಾ ಸುಬ್ರಹ್ಮಣ್ಯ ಜೋಶಿ ಉಪಸ್ಥಿತರಿದ್ದರು. ಉಪನ್ಯಾಸಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು.

    ಹದಿಹರೆಯದ ವಯಸ್ಸಿನಲ್ಲಿ ವಿದ್ಯಾರ್ಥಿಗಳು ಸೈಬರ್ ಕ್ರೈಂಗಳ ಕುರಿತು ಎಚ್ಚರಿಕೆ ವಹಿಸಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸಮಯ ಪೋಲು ಮಾಡದೆ ಓದಿನೆಡೆಗೆ ಆಸಕ್ತಿ ಹೆಚ್ಚಿಸಿಕೊಳ್ಳಬೇಕು.
    -ಪೂಜಾ, ಪೇದೆ, ಬೆಳ್ಳಾರೆ ಪೊಲೀಸ್ ಠಾಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts