More

    ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌:  ಸಿಬಿಐ ತನಿಖೆಗೆ ಒತ್ತಾಯ

    ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್‌ ದರ್ಶನ್, ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳಿಗೆ ಅನ್ನಪೂರ್ಣೇಶ್ವರಿ ಪೊಲೀಸರು ಬಂಧಿಸಿದ್ದಾರೆ. ಇದೀಗ ಪ್ರಕರಣವನ್ನು ಸಿಬಿಐಗೆ ತನಿಖೆಗೆ ವಹಿಸಬೇಕು ಬೇಡ ಜಂಗಮ ಸಮುದಾಯದ ಜಿಲ್ಲಾಧ್ಯಕ್ಷ ಎಂ.ಟಿ ಮಲ್ಲಿಕಾರ್ಜುನ ಸ್ವಾಮಿ ಒತ್ತಾಯಿಸಿದ್ದಾರೆ.

    ಇದನ್ನೂ ಓದಿ: ಕೊಲೆ ಕೇಸ್; ‘ಚಾಲೆಂಜಿಂಗ್ ಸ್ಟಾರ್’ ನಟ ದರ್ಶನ್​ಗೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆ, ರೀಟ್ವೀಟ್ ಮಾಡಿದ ನಟಿ ರಮ್ಯಾ

    ಪೊಲೀಸರು ಈ ಪ್ರಕರಣದ ಆರೋಪಿಗಳನ್ನು ತನಿಖೆ ಮಾಡುವುದು ಬೇಡ. ನಟ ದರ್ಶನ್ ಪ್ರಭಾವಿಯಾಗಿದ್ದು, ಪ್ರಭಾವ ಬೀರಿ ಹೊರಗೆ ಬರಬಹುದು. ಹೀಗಾಗಿ ಈ ಪ್ರಕರಣವನ್ನು ಸಿಬಿಐಗೆ ಕೊಡಿ ಎಂದು ಆಗ್ರಹಿಸಿದ್ದಾರೆ. ನಮ್ಮ ಸಮುದಾಯದ ಸ್ವಾಮೀಜಿಗಳು ಕರೆ ಮಾಡಿ ಮಾಹಿತಿ ಪಡೆದಿದ್ದಾರೆ. ಅವರೊಟ್ಟಿಗೆ ಚರ್ಚಿಸಿ ಮುಂದಿನ ಕ್ರಮವಹಿಸಲಾಗುತ್ತದೆ ಎಂದರು.

    ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌:  ಸಿಬಿಐ ತನಿಖೆಗೆ ಒತ್ತಾಯ

    ಚಿತ್ರದುರ್ಗದ ರೇಣುಕಾ ಸ್ವಾಮಿ ಅವರನ್ನು ಬೆಂಗಳೂರಿನಲ್ಲಿ ಕೊಲೆ ಮಾಡಿದ ಆರೋಪದಲ್ಲಿ ಒಟ್ಟು 13 ಜನರ ಬಂಧನ ಆಗಿದೆ. ನಟ ದರ್ಶನ್​, ಪವಿತ್ರಾ ಗೌಡ ಅವರನ್ನು ಬಂಧಿಸಿ ವಿಚಾರಣೆ ಮಾಡಲಾಗುತ್ತಿದೆ. ಹಲವು ಜನರಿಂದ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ವೇಳೆ ಹಲವರ ಹೆಸರು ಹೊರಗೆ ಬಂದಿದೆ. ಕ್ಷುಲ್ಲಕ ವಿಚಾರದಿಂದ ಕೊಲೆ ನಡೆದುಹೋಗಿದೆ. ಈ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ ಎನ್ನಲಾದ ದರ್ಶನ್​ ಹಾಗೂ ಪವಿತ್ರಾ ಗೌಡ ಸೇರಿದಂತೆ ಎಲ್ಲ 13 ಜನರ ಹೆಸರು ಮತ್ತು ವಿಳಾಸ ಬಹಿರಂಗ ಆಗಿವೆ.

    ದರ್ಶನ್​, ಪವಿತ್ರಾ ಗೌಡ ಜೊತೆ ವಿ. ವಿನಯ್, ಆರ್.ನಾಗರಾಜು, ಎಂ. ಲಕ್ಷ್ಮಣ್​, ಎಸ್​. ಪ್ರದೋಶ್​, ಕೆ. ಪವನ್, ದೀಪಕ್​ ಕುಮಾರ್, ನಂದೀಶ್​, ಕಾರ್ತಿಕ್​, ನಿಖಿಲ್ ನಾಯಕ್​, ಕೇಶವಮೂರ್ತಿ, ರಾಘವೇಂದ್ರ ಅಲಿಯಾಸ್​ ರಾಘು ಈಗ ಪೊಲೀಸರ ವಶದಲ್ಲಿ ಇದ್ದಾರೆ. ಇಂದು (ಜೂನ್ 11) ಸಂಜೆ 4.30ಕ್ಕೆ ಎಲ್ಲರನ್ನೂ ಪೊಲೀಸರು ಕೋರ್ಟ್​ಗೆ ಹಾಜರುಪಡಿಸಲಿದ್ದಾರೆ.

    ಕೊಲೆಯಾದ ರೇಣುಕಾ ಸ್ವಾಮಿ ಕೂಡ ದರ್ಶನ್​ ಅಭಿಮಾನಿ ಆಗಿದ್ದ. ಪವಿತ್ರಾ ಗೌಡಗೆ ಮೆಸೇಜ್ ಮಾಡಿದ ಬಗ್ಗೆ ಕೊಲೆಗೂ ಮುನ್ನ ಸ್ನೇಹಿತರ ಬಳಿ ರೇಣುಕಾಸ್ವಾಮಿ ಕೊಲೆಗೂ ಮುನ್ನ ಸ್ನೇಹಿತರ ಬಳಿ ಹೇಳಿಕೊಂಡಿದ್ದ ರೇಣುಕಾಸ್ವಾಮಿ.‘ನಮ್ಮ ಬಾಸ್ ಸಂಸಾರವನ್ನು ಪವಿತ್ರಾ ಗೌಡ ಹಾಳು ಮಾಡಿದ್ದಾಳೆ. ಅದಕ್ಕೆ ಪವಿತ್ರಾ ಗೌಡಗೆ ಮೆಸೇಜ್ ಮಾಡಿದ್ದೆ’ ಎಂದು ರೇಣುಕಾ ಸ್ವಾಮಿ ಹೇಳಿಕೊಂಡಿದ್ದ ಎನ್ನಲಾಗಿದೆ. ತನಿಖೆ ಮುಂದುವರಿದಂತೆಲ್ಲ ಹೊಸ ಹೊಸ ಮಾಹಿತಿಗಳು ಹೊರಬೀಳುತ್ತಿವೆ.

    ಅಮರಾವತಿಯನ್ನು ಆಂಧ್ರಪ್ರದೇಶದ ರಾಜಧಾನಿ ಎಂದು ಘೋಷಿಸಿದ ಚಂದ್ರಬಾಬು ನಾಯ್ಡು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts