More

    ರೇಣುಕಾಸ್ವಾಮಿ ಹೀರೋ ಮಾಡೋದು ನಿಲ್ಸಿ! ಜನ ಸಾವಿರ ಮಾತನಾಡಲಿ ದರ್ಶನ್‌ನ ಬಿಟ್ಟುಕೊಡಲ್ಲ ಎಂದ VJ ಹೇಮಾಲತಾ

    ಬೆಂಗಳೂರು: ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದಾನೆ ಎನ್ನುವ ಹಿನ್ನೆಲೆಯಲ್ಲಿ ಚಿತ್ರದುರ್ಗದ ರೇಣುಕಾ ಸ್ವಾಮಿಯ ಭೀಕರ ಹತ್ಯೆಯಲ್ಲಿ ಪವಿತ್ರಾ ಗೌಡ ಹಾಗೂ ದರ್ಶನ್​ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ಈ ಕುರಿತಾಗಿ ಖ್ಯಾತ ನಿರೂಪಕಿ ಹೇಮಾಲತಾ ತಮ್ಮ ಇನ್‌ಸ್ಟಾ ಖಾತೆಯಲ್ಲಿ ದರ್ಶನ್‌ ಜೊತೆಗಿನ ಫೋಟೋ ಹಂಚಿಕೊಂಡು ದರ್ಶನ್​ ಪರವಾಗಿ ಕೆಲವು ವಿಚಾರಗಳನ್ನು ಬರೆದುಕೊಂಡಿದ್ದಾರೆ. ಈ ಸುದ್ದಿ ಸೋಶಿಯಲ್​ ಮೀಡಿಯಾದಲ್ಲಿ ಸಖತ್​ ಚರ್ಚೆ ಆಗುತ್ತಿದೆ.

    ನಿರೂಪಕಿ ಹೇಮಾಲತಾ ಪೋಸ್ಟ್‌ನಲ್ಲಿ ʻʻಸಾವಿರ ಜನ ಸಾವಿರ ಮಾತನಾಡಲಿ.. ಒಮ್ಮೆ ಬೆಳೆದ ಸ್ನೇಹಕ್ಕೆ ಕಡಲಿನಷ್ಟು ಪ್ರೀತಿಗೆ ನಾವೆಲ್ಲರೂ ಋಣಿಗಳೇ.. ಸ್ನೇಹಾವೆಂಬ ಸಂಕೋಲೆಯಲಿ ಒಮ್ಮೆ ಸಿಕ್ಕಿಕೊಂಡರೆ ಕೊಂಡಿ ಕಳಚುವುದಿಲ್ಲ…ಅಂದಿಗೂ ಇಂದಿಗೂ ಎಂದೆಂದಿಗೂ ಮರೆಯುವುದಿಲ್ಲ, ಬಿಡುವುದಿಲ್ಲ, ಬಿಟ್ಟುಕೊಡುವುದಿಲ್ಲ. ಈ ಘಟನೆಗೆ ಏನು ಹೇಳಬೇಕು ಎಂದು ತಿಳಿಯುತ್ತಿಲ್ಲ, ಕಾನೂನಿನ ಮುಖಾಂತರ ಅಂತ್ಯವನ್ನಾಡಿ ಎಲ್ಲಾ ಕಳಂಕವನ್ನು ತೊಳೆದುಕೊಂಡು ಹೊರಗೆ ಬನ್ನಿ. ನಿಮ್ಮ ಮೇಲಿರುವ ಪ್ರೀತಿ ಗೌರವ ಎಂದಿಗೂ ಕಮ್ಮಿ ಆಗುವುದಿಲ್ಲ. ಅಲ್ಲದೇ ಕೊಲೆಯಾಗಿರುವ ರೇಣುಕಾಸ್ವಾಮಿಯನ್ನು ಹೀರೋ ಎನ್ನುವಂತೆ ಬಿಂಬಿಸಬೇಡಿʼʼ Kindly stop making #renukaswamy a Hero here!! No point ಎಂದು ನಿರೂಪಕಿ ಹೇಮಾಲತಾ ಮನವಿ ಮಾಡಿದ್ದಾರೆ.

    ರೇಣುಕಾಸ್ವಾಮಿ ಹೀರೋ ಮಾಡೋದು ನಿಲ್ಸಿ! ಜನ ಸಾವಿರ ಮಾತನಾಡಲಿ ದರ್ಶನ್‌ನ ಬಿಟ್ಟುಕೊಡಲ್ಲ ಎಂದ VJ ಹೇಮಾಲತಾ

    ಏನಿದು ಪ್ರಕರಣ?: ಫೆಬ್ರವರಿ 27ರಿಂದ ಪವಿತ್ರಾ ಗೌಡಗೆ ರೇಣುಕಾ ಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ. ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

    ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ. ವಿಚಾರಣೆ ನಡೆಸಿದ ಕೋರ್ಟ್‌ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಜುಲೈ 4ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಮಹತ್ವದ ಆದೇಶ ನೀಡಿದೆ.

    ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಮತ್ತು ಆತನ ಸಹಚರ ಪ್ರದೋಷ್‌  ಇಬ್ಬರ ಬಳಿಯೂ ಪರವಾನಗಿ ಹೊಂದಿದ  ಯುಎಸ್ ಮೇಡ್ ಪಿಸ್ತೂಲ್‌ಗಳಿದ್ದು, ಲೋಕಸಭೆ ಚುನಾವಣೆ  ವೇಳೆ ಇಬ್ಬರೂ ಅವುಗಳನ್ನು ಪೊಲೀಸರ ಬಳಿ ಠೇವಣಿ  ಇರಿಸಿರಲಿಲ್ಲ ಎಂಬುದು ಗೊತ್ತಾಗಿದೆ. ಇದೀಗ ಅವುಗಳನ್ನು ವಶಕ್ಕೆ ಪಡೆಯಲಾಗುತ್ತಿದೆ.

    ಪೊಲೀಸ್‌ ವಶದಲ್ಲೂ ಪವಿತ್ರಾಗೌಡ ಮೇಕಪ್‌, ಲೇಡಿ ಎಸ್‌ಐಗೆ ಕಷ್ಟ

    ಸೂರಜ್‌ ಬಳೆ ತೊಡ್ತಾನೆ, ಸೀರೆ ಉಡ್ತಾನೆ! ಅಮಾವಾಸ್ಯೆ ರಹಸ್ಯ ಬಯಲು ಮಾಡಿದ ಸಂತ್ರಸ್ತ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts