More

    ಹಾಲಿನ ದರ ಏರಿಕೆ ಆದೇಶ ಹಿಂಪಡೆಯಲು ಆಗ್ರಹ

    ದಾವಣಗೆರೆ : ಹಾಲಿನ ದರ ಏರಿಕೆ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿ, ರಾಜ್ಯ ಸರ್ಕಾರ ಜನವಿರೋಧಿಯಾಗಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.  ಜಯದೇವ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಹಸುಗಳೊಂದಿಗೆ ಮೆರವಣಿಗೆಯಲ್ಲಿ ಸಾಗಿ, ಟ್ರಾೃಕ್ಟರ್‌ನಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಹಾಗೂ ಹಾಲಿನ ಕ್ಯಾನ್ ಇಟ್ಟು ವಿನೂತನವಾಗಿ ಪ್ರತಿಭಟಿಸಿದರು.  ಮಹಾತ್ಮ ಗಾಂಧಿ ವೃತ್ತದ ಮಾರ್ಗವಾಗಿ ಪಿಬಿ ರಸ್ತೆಯಲ್ಲಿ ತೆರಳಿದ ಬಿಜೆಪಿ ಕಾರ್ಯಕರ್ತರು ಉಪ ವಿಭಾಗಾಧಿಕಾರಿ ಕಚೇರಿ ಮುಂಭಾಗದಲ್ಲಿ ‘ಮಾನವ ಸರಪಳಿ’ ನಿರ್ಮಿಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.  ಹರಿಹರ ಶಾಸಕ ಬಿ.ಪಿ. ಹರೀಶ್ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ರಾಜ್ಯ ಸರ್ಕಾರ ರೈತ ವಿರೋಧಿ, ಜನ ವಿರೋಧಿಯಾಗಿದೆ ಎಂದು ದೂರಿದರು. ರೈತರು ಪಂಪ್‌ಸೆಟ್‌ಗೆ ವಿದ್ಯುತ್ ಸಂಪರ್ಕ ಪಡೆಯಲು ಬಿಜೆಪಿ ಸರ್ಕಾರದ ಅವಧಿಯಲ್ಲಿ 25 ಸಾವಿರ ರೂ. ಮಾತ್ರ ಶುಲ್ಕವಿತ್ತು. ಈಗ ಅದನ್ನು 4 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗಿದೆ. ಬಡ ರೈತರಿಗೆ ಈ ಮೊತ್ತ ಹೊರೆಯಾಗುತ್ತದೆ ಎಂದು ಹೇಳಿದರು.  ಬಿತ್ತನೆ ಬೀಜ, ಪೆಟ್ರೋಲ್ ದರ ಹೆಚ್ಚಿಸಲಾಗಿದೆ. ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ ಹಣವನ್ನು ರಾಜ್ಯ ಸರ್ಕಾರ ನೀಡುತ್ತಿಲ್ಲ. ‘ಟಪಾಟಪ್…’ ಎಂದು ಬೆಲೆ ಏರಿಕೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.  ಕ್ಷುಲ್ಲಕ ಕಾರಣಕ್ಕೆ ಅನೇಕ ರಾಜಕಾರಣಿಗಳನ್ನು ಜೈಲಿಗೆ ಕಳಿಸುತ್ತಿದ್ದಾರೆ. ಆದರೆ 200 ಕೋಟಿ ರೂ.ಗಳನ್ನು ವೈಯಕ್ತಿಕ ಖಾತೆಗೆ ಹಾಕಿಸಿದ ಸಚಿವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಹರಿಹಾಯ್ದರು.  ಜಿಲ್ಲಾ ಸಚಿವರು ಜನರ ನಡುವೆ ಬರುತ್ತಿಲ್ಲ, ಅವರ ಕಷ್ಟಗಳನ್ನು ಆಲಿಸುತ್ತಿಲ್ಲ. ಇಂಥ ಸಚಿವರ ಅಗತ್ಯವಿತ್ತೆ ಎಂದು ಪ್ರಶ್ನಿಸಿದರು.  ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಮಾತನಾಡಿದರು. ಮುಖಂಡರಾದ ಲೋಕಿಕೆರೆ ನಾಗರಾಜ್, ಯಶವಂತರಾವ್ ಜಾಧವ್, ಬಿ.ಎಂ. ಸತೀಶ್, ಶ್ರೀನಿವಾಸ ದಾಸಕರಿಯಪ್ಪ, ಕೆ.ಎಂ. ಸುರೇಶ್, ಚಂದ್ರಶೇಖರ ಪೂಜಾರ್, ಜಿ.ಎಸ್. ಶ್ಯಾಮ್, ಕಲ್ಲೇಶ್, ಅಣ್ಣೇಶ್, ಧನಂಜಯ ಕಡ್ಲೆಬಾಳ್, ರಮೇಶ ನಾಯ್ಕ, ಶಿವನಗೌಡ ಪಾಟೀಲ್, ಚೇತನಾಬಾಯಿ, ಸವಿತಾ, ದಾಕ್ಷಾಯಿಣಮ್ಮ ಇದ್ದರು.  …  (ಬಾಕ್ಸ್)  ನೋಟಿಸ್‌ಗೆ ಆಕ್ಷೇಪ  ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬಾರದು, ಘೋಷಣೆ ಕೂಗಬಾರದು ಎಂದು ಪೊಲೀಸ್ ಇಲಾಖೆಯಿಂದ ಜಿಲ್ಲಾ ಬಿಜೆಪಿಗೆ ನೋಟಿಸ್ ಬಂದಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೀಗೆ ಮಾಡುವುದು ಸರಿಯಲ್ಲ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್. ರಾಜಶೇಖರ್ ಆಕ್ಷೇಪ ವ್ಯಕ್ತಪಡಿಸಿದರು.  ಜಿಲ್ಲಾಡಳಿತಕ್ಕೆ ಹೆದರಿಕೆ ಶುರುವಾದಂತಿದೆ. ಆದ್ದರಿಂದಲೆ ಈ ರೀತಿಯ ವರ್ತನೆ ತೋರುತ್ತಿದೆ. ಇದಕ್ಕೆಲ್ಲ ನಮ್ಮ ಕಾರ್ಯಕರ್ತರು ಬಗ್ಗುವುದಿಲ್ಲ, ನಮ್ಮನ್ನು ತುಳಿದಷ್ಟೂ ಪುಟಿದೇಳುತ್ತೇವೆ ಎಂದರು.  …  

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts