More

    ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಸಿಎಂ ಬದಲಾವಣೆಯಾಗದು

    ದಾವಣಗೆರೆ : ಸ್ವಾಮೀಜಿಗಳು ಹೇಳಿದ ಮಾತ್ರಕ್ಕೆ ಮುಖ್ಯಮಂತ್ರಿ ಬದಲಾವಣೆ ಮಾಡುವುದಿಲ್ಲ, ನಮ್ಮ ಪಕ್ಷದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಕಾಂಗ್ರೆಸ್‌ನ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅಭಿಪ್ರಾಯಪಟ್ಟರು.
    ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿಎಂ ಬದಲಾವಣೆ ಮಾಡಬೇಕು ಎಂದಿರುವ ಒಕ್ಕಲಿಗ ಸಮುದಾಯದ ಶ್ರೀ ಚಂದ್ರಶೇಖರ ಸ್ವಾಮೀಜಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.
    ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ವರ್ಷದಿಂದ ಉತ್ತಮ ಕಾರ್ಯಗಳನ್ನು ಮಾಡುತ್ತಿದ್ದಾರೆ. ವಿಪಕ್ಷಗಳಿಗೆ ಸರಿಯಾಗಿ ಉತ್ತರ ಕೊಡುವ ಶಕ್ತಿ ಅವರಿಗಿದೆ. ಬದಲಾವಣೆಯ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಯಾರು ಏನೇ ಹೇಳಿದರೂ ವ್ಯತ್ಯಾಸವಾಗುವುದಿಲ್ಲ ಎಂದರು.
    ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ಅವನಿಗೆ ಏನು ಗೊತ್ತು?, ಯಾರೋ ಹೇಳಿದ್ದರಿಂದ ಮಾತಾಡಿರಬಹುದು. ಯಾರೇ ಮಾತಾನಾಡಿದರೂ ಅದು ಅವರ ವೈಯಕ್ತಿಕ ಅಭಿಪ್ರಾಯವಾಗುತ್ತದೆ ಎಂದು ತಿಳಿಸಿದರು. ಜಾತಿವಾರು ಡಿಸಿಎಂ ಬೇಡಿಕೆ ಬಗ್ಗೆ ಹೈಕಮಾಂಡ್ ನೋಡಿಕೊಳ್ಳುತ್ತದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts