More

    ಜಿಎಂಐಟಿಯಲ್ಲಿ ಇಂಡಕ್ಷನ್ ಕಾರ್ಯಕ್ರಮ  

    ದಾವಣಗೆರೆ : ಜೀವನದಲ್ಲಿ ಶಿಕ್ಷಣ ಬಹಳ ಮುಖ್ಯ. ಶಿಕ್ಷಣದಿಂದ ವಿನಯ, ಶ್ರದ್ಧೆ ಮತ್ತು ನಿಷ್ಠೆ ಬೆಳೆಸಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ್ಕರಾದ ಮಂಜಮ್ಮ ಜೋಗತಿ ಹೇಳಿದರು.
     ಜಿಎಂಐಟಿ ಕಾಲೇಜಿನಲ್ಲಿ ಮೊದಲ ವರ್ಷದ ಇಂಜಿನಿಯರಿಂಗ್ ಮತ್ತು ಬಿಸಿಎ ವಿದ್ಯಾರ್ಥಿಗಳಿಗೆ ಬುಧವಾರ ಹಮ್ಮಿಕೊಂಡಿದ್ದ ಇಂಡಕ್ಷನ್ ಪ್ರೋಗ್ರಾಮ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
     ಶಿಕ್ಷಣ ಅರಿತ ಯಾವುದೇ ವಿದ್ಯಾರ್ಥಿ ಸಮಯ ವ್ಯರ್ಥ ಮಾಡಲಾರ. ನಿಷ್ಠೆ ಹಾಗೂ ಶ್ರದ್ಧೆಯಿಂದ ಕೆಲಸ ಮಾಡುವ ಹಾಗೂ ಗುರು ಹಿರಿಯರಿಗೆ ಗೌರವ ಕೊಡುವ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉನ್ನತ ಸ್ಥಾನ ತಲುಪಲು ಸಾಧ್ಯ ಎಂದು ತಿಳಿಸಿದರು.
     ಜಿಎಂ ವಿಶ್ವವಿದ್ಯಾಲಯದ ಸಹ ಉಪಕುಲಪತಿ ಡಾ.ಎಚ್.ಡಿ. ಮಹೇಶಪ್ಪ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆ. ಸದ್ಬಳಕೆ ಮಾಡಿಕೊಂಡು ಉತ್ತಮ ಅಧ್ಯಯನ ಮಾಡಬೇಕು ಎಂದರು.
     ಜಿಎಂ ವಿಶ್ವವಿದ್ಯಾಲಯದ ಡೀನ್ ಫಾರ್ ಫ್ಯಾಕಲ್ಟಿ ಆಫ್ ಇಂಜಿನಿಯರಿಂಗ್ ಡಾ.ಜಿ.ಎಂ. ಪಾಟೀಲ್ ಮಾತನಾಡಿ, ಒಂದು ವಾರಗಳ ಕಾಲ ನಡೆಯುವ ಈ ಕಾರ್ಯಕ್ರಮಕ್ಕೆ ವಿವಿಧ ಕ್ಷೇತ್ರದ ಗಣ್ಯರು ಹಾಗೂ ತಜ್ಞರು ಆಗಮಿಸಲಿದ್ದು, ಮೊದಲ ಹೆಜ್ಜೆಯಾಗಿ ವಿದ್ಯಾರ್ಥಿಗಳನ್ನು ಕೈಗಾರಿಕೆಗಳಿಗೆ ತಕ್ಕಂತೆ ತಯಾರು ಮಾಡಲಿದ್ದಾರೆ ಎಂದು ತಿಳಿಸಿದರು.
     ಜಿಎಂಎಸ್ ಅಕಾಡೆಮಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯೆ ಶ್ವೇತಾ ಮರಿಗೌಡರ್, ಜಿಎಂಐಟಿ ಕಾಲೇಜು ಪ್ರಾಚಾರ್ಯ ಡಾ.ಎಂ.ಬಿ. ಸಂಜಯ್ ಪಾಂಡೆ, ಜಿಎಂ ವಿಶ್ವವಿದ್ಯಾಲಯದ ಮೌಲ್ಯಮಾಪನ ವಿಭಾಗದ ರಿಜಿಸ್ಟ್ರಾರ್ ಡಾ.ಬಿ.ಎಸ್. ಸುನಿಲ್ಕುಮಾರ್, ಡೀನ್ ಫಾರ್ ಫ್ಯಾಕಲ್ಟಿ ಆಫ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್ ಡಾ.ಬಸವರಾಜಸ್ವಾಮಿ ಇದ್ದರು. ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥ ಟಿ.ಆರ್. ತೇಜಸ್ವಿ ಕಟ್ಟಿಮನಿ ನಿರೂಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts