More

    ಹಿರೇಕೋಗಲೂರು ಗೋಮಾಳದಲ್ಲಿ ಬಡಾವಣೆ ನಿರ್ಮಾಣ

    ದಾವಣಗೆರೆ :  ಚನ್ನಗಿರಿ ತಾಲೂಕಿನ ಹಿರೇಕೋಗಲೂರು ಗ್ರಾಮದ ಗೋಮಾಳ ಜಮೀನಿನಲ್ಲಿ ವಾಸವಾಗಿದ್ದ 37 ಕುಟುಂಬಗಳಿಗೆ ಸುವ್ಯವಸ್ಥಿತ ಬಡಾವಣೆಯೊಂದು ಸದ್ಯದಲ್ಲೆ ನಿರ್ಮಾಣವಾಗಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ ಬಿ. ಇಟ್ನಾಳ್ ತಿಳಿಸಿದ್ದಾರೆ.  ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ ಅವರು ಅಲ್ಲಿನ ಸ್ಥಿತಿಗತಿ ಪರಿಶೀಲನೆ ಮಾಡಿದರು. ಆ ನಿವಾಸಿಗಳು ಗುಡಿಸಲುಗಳಲ್ಲಿ ವಾಸವಾಗಿದ್ದಾರೆ. ಮೂಲಸೌಲಭ್ಯಗಳ ಕೊರತೆ ಎದುರಿಸುತ್ತಿದ್ದಾರೆ. ಅವರಿಂದ ಬಂದ ಬೇಡಿಕೆ ಆಧರಿಸಿ ಜಿಲ್ಲಾಧಿಕಾರಿಗಳು ಪಕ್ಕದಲ್ಲೆ 5 ಎಕರೆ ಜಾಗವನ್ನು ಮಂಜೂರು ಮಾಡಿದ್ದಾರೆ ಎಂದು ಹೇಳಿದರು.  ಅಲ್ಲಿ ನಿವೇಶನ ಅಭಿವೃದ್ಧಿ ಮಾಡಲು ರಾಜೀವ್ ಗಾಂಧಿ ವಸತಿ ನಿಗಮದಿಂದ ಸದ್ಯದಲ್ಲೆ ಅನುದಾನ ಬಿಡುಗಡೆಯಾಗಲಿದೆ. ಹಣ ಬಂದ ನಂತರ ಗ್ರಾಮಸಭೆಯಲ್ಲಿ ಫಲಾನುಭವಿಗಳ ಆಯ್ಕೆ ಮಾಡಿ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.  ಈಗ ಅವರು ವಾಸವಿರುವ ಪ್ರದೇಶದಲ್ಲಿ ಹೆಚ್ಚುವರಿಯಾಗಿ ವಿದ್ಯುತ್ ದೀಪಗಳು ಬೇಕೆಂದು ಕೇಳಿದ್ದಾರೆ. ಕುಡಿಯುವ ನೀರನ್ನು ಟ್ಯಾಂಕರ್ ಮೂಲಕ ನೀಡಲಾಗುತ್ತಿದೆ ಎಂದು ನಿವಾಸಿಗಳು ತಿಳಿಸಿದರು. ಅಲ್ಲಿನ ಪಿಡಿಒ ಖಾಸಗಿ ಬೋರ್‌ವೆಲ್ ಒಂದನ್ನು ಬಾಡಿಗೆಗೆ ಪಡೆದು ನೀರು ಪೂರೈಸುವ ವ್ಯವಸ್ಥೆ ಮಾಡುತ್ತಿದ್ದಾರೆ. ಒಂದೆರಡು ದಿನಗಳಲ್ಲಿ ಅದು ಕಾರ್ಯರೂಪಕ್ಕೆ ಬರಲಿದೆ. ಅಲ್ಲಿರುವ 37 ಕುಟುಂಬಗಳಲ್ಲದೆ ಗ್ರಾಮದಲ್ಲಿರುವ ನಿವೇಶನ ರಹಿತರಿಗೂ ನಿವೇಶನ ಸಿಗಲಿದೆ ಎಂದರು.  ಒಟ್ಟು 118 ನಿವೇಶನಗಳ ಅಭಿವೃದ್ಧಿಗೆ ನೀಲನಕ್ಷೆ ಹಾಗೂ ಯೋಜನೆ ಸಿದ್ಧವಾಗಿದೆ. ರಾಜೀವ್ ಗಾಂಧಿ ವಸತಿ ನಿಗಮದಿಂದ 3.54 ಲಕ್ಷ ರೂ. ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ತಿಳಿದು ಬಂದಿದೆ.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts