More

    ಹಳ್ಳಿಗಳಿಗೆ ಮೂಲಸೌಕರ್ಯ ಕಲ್ಪಿಸುವ ಯೋಜನೆ

    ದಾವಣಗೆರೆ :  ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಎಲ್ಲ ರೀತಿಯ ಮೂಲಸೌಕರ್ಯ ಕಲ್ಪಿಸಲು ಸಮಗ್ರ ಯೋಜನೆಯೊಂದನ್ನು ರೂಪಿಸುವಂತೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಸೂಚಿಸಿದರು.  ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸುರೇಶ ಹಿಟ್ನಾಳ್ ಅವರೊಂದಿಗೆ ಗೃಹ ಕಚೇರಿಯಲ್ಲಿ ಭಾನುವಾರ ಸಂಜೆ ನಡೆಸಿದ ಸಭೆಯಲ್ಲಿ ಈ ಸೂಚನೆ ನೀಡಿದರು.  ನಾವು ಚುನಾವಣಾ ಪ್ರಚಾರಕ್ಕೆ ಹೋದಾಗ ಅನೇಕ ಗ್ರಾಮಗಳು ಮೂಲಸೌಕರ್ಯದಿಂದ ವಂಚಿತವಾಗಿರುವುದು ಕಂಡುಬಂದಿದ್ದು ಇಂಥ ಗ್ರಾಮಗಳನ್ನು ಗುರುತಿಸಿ ಅಗತ್ಯ ವ್ಯವಸ್ಥೆ ಮಾಡುವಂತೆ ತಿಳಿಸಿದರು.  ಕೆಲವು ಗ್ರಾಮಗಳಲ್ಲಿ ಮೂಲಸೌಕರ್ಯ ಇದ್ದರೂ ಸಹ ಸ್ವಚ್ಛತೆ ಇಲ್ಲ. ಅಂಥ ಕಡೆ ರೋಗಗಳು ಹರಡದಂತೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಜನಜಾಗೃತಿ ಮೂಡಿಸಬೇಕು ಎಂದು ಹೇಳಿದರು.  ಮೂಲಸೌಕರ್ಯ ವಂಚಿತ ಕೆಲವು ಗ್ರಾಮಗಳನ್ನು ಹೆಸರಿಸಿದ ಡಾ. ಪ್ರಭಾ ಅವರು ಗ್ರಾಮ ಸ್ವರಾಜ್ಯ ಎಂಬ ಧ್ಯೇಯ ವಾಕ್ಯವನ್ನು ಸಂಪೂರ್ಣ ಪರಿಪಾಲಿಸಬೇಕಾಗಿದ್ದು ಈ ನಿಟ್ಟಿನಲ್ಲಿ ಅಗತ್ಯವಿರುವ ಗ್ರಾಮಗಳನ್ನು ಗುರುತಿಸಿ ಯೋಜನೆ ರೂಪಿಸುವಂತೆ ತಿಳಿಸಿದರು.  ಗ್ರಾಮೀಣ ಜನರು ಮೂಲ ಸೌಕರ್ಯ ಇಲ್ಲದಿದ್ದರೂ ಜೀವನ ಸಾಗಿಸುತ್ತಿದ್ದು ಅವರಿಗೆ ಕನಿಷ್ಠ ಸೌಲಭ್ಯವನ್ನು ಸರ್ಕಾರದಿಂದ ಕೊಡಿಸುವ ಜವಾಬ್ದಾರಿ ನಮ್ಮ ಮೇಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನುದಾನ ತರುವ ಕೆಲಸ ನಮ್ಮದು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳು ಇದ್ದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts