More

    ರಾಜಕಾಲುವೆಗಳ ಹೂಳು ತೆಗೆಯಲು ಸೂಚನೆ

    ದಾವಣಗೆರೆ : ಮಹಾನಗರ ಪಾಲಿಕೆ ವ್ಯಾಪ್ತಿಯ ಆವರಗೆರೆ, ಭಾರತ್ ಕಾಲನಿ, ಬಸಾಪುರದ ರಾಜಕಾಲುವೆಗಳಿಗೆ ಶುಕ್ರವಾರ, ಮೇಯರ್ ವಿನಾಯಕ ಪೈಲ್ವಾನ್, ಆಯುಕ್ತೆ ರೇಣುಕಾ ಹಾಗೂ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಎರಡೂವರೆ ಕಿ.ಮೀ. ವರೆಗೆ ಹೂಳೆತ್ತುವ ಕಾರ್ಯ ನಡೆದಿದ್ದು, ಉಳಿದಿರುವ ಒಂದೂವರೆ ಕಿ.ಮೀ. ಹೂಳನ್ನು ಆದಷ್ಟು ಬೇಗ ತೆರವುಗೊಳಿಸಬೇಕು. ಮಳೆ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಮನೆಯೊಳಗೆ ನೀರು ನುಗ್ಗುವುದು, ಚರಂಡಿ ತುಂಬಿ ಹರಿಯುವುದು, ರಸ್ತೆ ಮೇಲೆ ನೀರು ಹರಿಯುವುದಕ್ಕೆ ಕಡಿವಾಣ ಹಾಕುವಂತೆ ನಿರ್ದೇಶನ ನೀಡಲಾಯಿತು.
    ಇದೇ ವೇಳೆ ಮೇಯರ್ ವಿನಾಯಕ್ ಪೈಲ್ವಾನ್ ಮಾತನಾಡಿ, ವಿಪಕ್ಷ ಸದಸ್ಯರು ವಿನಾಕಾರಣ ಆರೋಪ ಮಾಡುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಇಲ್ಲಿನವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾರೆ. ಬಿಜೆಪಿ ಆಡಳಿತದಲ್ಲಿದ್ದಾಗ ಜಿಲ್ಲೆಯಲ್ಲಿ ಐವರು ಶಾಸಕರಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಏಕೆ ಆಗಲಿಲ್ಲ. ಸಚಿವ ಮಲ್ಲಿಕಾರ್ಜುನ್ ಅವರ ಸಲಹೆ, ಮಾರ್ಗದರ್ಶನ ಪಡೆಯುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
    ಸ್ಥಾಯಿ ಸಮಿತಿ ಅಧ್ಯಕ್ಷರಾದ ಅಬ್ದುಲ್ ಲತೀಫ್, ಮೀನಾಕ್ಷಿ ಜಗದೀಶ್, ಆಡಳಿತ ಪಕ್ಷದ ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಶಿವಲಿಂಗ ಕೊಟ್ರಯ್ಯ, ಎಇ ಮನೋಹರ್, ಪ್ರೀತಂ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts