More

    ರಾಜ್ಯದ ಜನರಿಗೆ ಬೆಲೆ ಏರಿಕೆಯ ಬರೆ  ಕರ್ನಾಟಕ ನವನಿರ್ಮಾಣ ಸೇನೆ ಕಿಡಿ

    ದಾವಣಗೆರೆ: ಪದೇ ಪದೇ ಅಗತ್ಯ ವಸ್ತುಗಳ ಬೆಲೆ ಏರಿಸುತ್ತಿರುವ ರಾಜ್ಯ ಸರ್ಕಾರ, ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಕರ್ನಾಟಕ ನವನಿರ್ಮಾಣ ಸೇನೆ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿತು.
    ಜಯದೇವ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್‌ನಲ್ಲಿ ತೆರಳಿದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಅವರ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಿದರು.
    ಕೆಲವು ತಿಂಗಳಿಂದ ರಾಜ್ಯದಲ್ಲಿ ಸ್ಪರ್ಧೆಗೆ ಬಿದ್ದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಳಿಕ ಹಾಲಿನ ದರ ಹೆಚ್ಚಿಸಲಾಗಿದೆ. ಇದರ ಮೂಲಕ ಸರ್ಕಾರ, ಜನಸಾಮಾನ್ಯರ ಬದುಕಿಗೆ ಬರೆ ಹಾಕುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.
    ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಡತನ ರೇಖೆಗಿಂತ ಕೆಳಗಿನವರೇ ಹೆಚ್ಚು ವಾಸಿಸುತ್ತಿದ್ದು, ತಮ್ಮ ಆಡಳಿತದ ಅನುಕೂಲಕ್ಕೆ ತಕ್ಕಂತೆ ಬೇಕಾಬಿಟ್ಟಿಯಾಗಿ ಬೆಲೆ ಏರಿಸಲಾಗುತ್ತಿದೆ. ಮುಂದಿನ ದಿನದಲ್ಲಿ ಸಾರಿಗೆ ಸಚಿವರು ಬಸ್ ಪ್ರಯಾಣದ ದರ ಹೆಚ್ಚಿಸುವ ಪ್ರಸ್ತಾವ ಮಾಡಲಿದ್ದಾರೆ ಎಂಬ ಮಾಹಿತಿ ಇದೆ.
    ಸರ್ಕಾರ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕಿ ಆ ಹಣದಿಂದಲೇ ಆಡಳಿತ ಯಂತ್ರ ನಡೆಸುವುದು ಸರಿಯಲ್ಲ. ಕೂಡಲೇ ಬೆಲೆ ಇಳಿಸಬೇಕು. ಮುಂದಿನ ದಿನಗಳಲ್ಲಿ ಬೆಲೆ ಹೆಚ್ಚಿಸಿದಲ್ಲಿ ನವನಿರ್ಮಾಣ ಸೇನೆ ಪ್ರತಿಭಟನೆ ನಡೆಸುವ ಜತೆಗೆ ಸಚಿವರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ ಕಪ್ಪು ಬಟ್ಟೆ ಪ್ರದರ್ಶಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
    ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಕೆ.ಎನ್. ವೆಂಕಟೇಶ್, ಉಪಾಧ್ಯಕ್ಷ ಶೇರ್ ಅಲಿ, ಬಿ. ಮಂಜುನಾಥ, ತಾರಕೇಶವ, ಅಶ್ಫಕ್‌ಉಲ್ಲಾ, ಗಿರೀಶ್, ವಿ. ನಾರಾಯಣ್, ವಿನಯ್‌ಕುಮಾರ್ ಇತರರಿದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts