More

    ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ; ಸಿಎಂ-ಡಿಸಿಎಂ ಹುದ್ದೆ ವಿವಾದದ ಕುರಿತು ಡಿಕೆಶಿ ಖಡಕ್​ ವಾರ್ನಿಂಗ್

    ಬೆಂಗಳೂರು: ಕಳೆದ ಕೆಲ ದಿನಗಳಿಂದ ಕಾಂಗ್ರೆಸ್​ ಪಾಳಯದಲ್ಲಿ ಹೆಚ್ಚುವರಿ ಉಪಮುಖ್ಯಮಂತ್ರಿ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಆಗ್ರಹ ಕೇಳಿ ಬರುತ್ತಿರುವ ನಡುವೆಯೇ ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ ಎಂದು ಹೇಳುವ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್​ ಮುಖಂಡರಿಗೆ ವಾರ್ನಿಂಗ್​ ಕೊಟ್ಟಿದ್ದಾರೆ.

    ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್, ಹೆಚ್ಚುವರಿ ಡಿಸಿಎಂ ಬಗ್ಗೆ ಯಾರೂ ಮಾತನಾಡುವಂತಿಲ್ಲ. ಒಂದು ವೇಳೆ ಮಾತನಾಡಿದರೆ ಅಂಥವರಿಗೆ ನೋಟಿಸ್ ನೀಡಲಾಗುವುದು. ಬಾಯಿಗೆ ಬೀಗ ಹಾಕೊಂಡು ತೆಪ್ಪಗೆ ಇರಿ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ವಿಶ್ವಕಪ್​ ಎಂದರೆ ಆರ್​ಸಿಬಿ ಪರ ಆಡಿದಂತಲ್ಲಾ; ಕೊಹ್ಲಿ ಪ್ರದರ್ಶನದ ಕುರಿತು ಟೀಕಿಸಿದ ಪಾಕ್​ ಮಾಜಿ ನಾಯಕ

    ಯಾವ ಡಿಸಿಎಂ ಚರ್ಚೆಯೂ ಇಲ್ಲ, ಸಿಎಂ ಪ್ರಶ್ನೆಯೂ ಇಲ್ಲ. ಯಾರ ಶಿಫಾರಸು ಸಹ ಅವಶ್ಯಕತೆ ಇಲ್ಲ. ನಾನು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಯಾವ ಶಾಸಕರು ಕೂಡ ಮಾತನಾಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಮಾತನಾಡಿದರೆ, ಪಕ್ಷದ ಶಿಸ್ತು ಕಾಪಾಡಲು ಎಐಸಿಸಿ ಹಾಗೂ ನಾನು ವಿಧಿಯಿಲ್ಲದೇ ನೋಟಿಸ್ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

    ಪಕ್ಷ ಕಟ್ಟಲು, ಅಧಿಕಾರಕ್ಕೆ ತರಲು ಎಷ್ಟು ಕಷ್ಟಪಟ್ಟಿದ್ದೇವೆ ಎಂಬುದು ನಮಗೆ ಗೊತ್ತು. ಪಕ್ಷದ ಹಿತದೃಷ್ಟಿಯಿಂದ ಬಾಯಿಗೆ ಬೀಗ ಹಾಕಿಕೊಂಡಿದ್ದರೆ ಒಳ್ಳೆಯದು. ಯಾವ ಸ್ವಾಮೀಜಿಗಳೂ ಮಾತಾಡಿಲ್ಲ. ಎಲ್ಲರಿಗೂ ಕೈ ಮುಗಿಯುತ್ತೇನೆ. ನಮ್ಮ ರಾಜಕಾರಣದ ಸುದ್ದಿಗೆ ನೀವು ಬರಬೇಡಿ. ಸ್ವಾಮೀಜಿ ನನ್ನ ಮೇಲಿನ ಅಭಿಮಾನದಿಂದ ಮಾತಾಡಿದ್ದಾರೆ ಅಷ್ಟೇ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್​ ಹೇಳಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts