More

    ಅಬಕಾರಿ ನೀತಿ ಪ್ರಕರಣ; ದೆಹಲಿ ಹೈಕೋರ್ಟ್​​ನಿಂದ ಸಿಬಿಐಗೆ ನೋಟಿಸ್​ ಜಾರಿ

    ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಏಜೆನ್ಸಿ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ ಮನವಿಯ ಮೇರೆಗೆ ದೆಹಲಿ ಹೈಕೋರ್ಟ್ ಮಂಗಳವಾರ (ಜುಲೈ 2) ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ನೋಟಿಸ್ ಜಾರಿ ಮಾಡಿದೆ. ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು ಸಿಬಿಐಗೆ ನೋಟಿಸ್ ಜಾರಿ ಮಾಡಿದ್ದು, 7 ದಿನಗಳಲ್ಲಿ ಉತ್ತರ ನೀಡುವಂತೆ ಸೂಚಿಸಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿದ್ದಾರೆ.

    ಇದನ್ನು ಓದಿ: ಲೋಕಸಭಾ ಸ್ಪೀಕರ್​ ಓಂ ಬಿರ್ಲಾಗೆ ರಾಹುಲ್​ಗಾಂಧಿ ಪತ್ರ; ಉಲ್ಲೇಖಿಸಿರುವ ಅಂಶಗಳೇನು ಗೊತ್ತಾ?

    ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಕೇಜ್ರಿವಾಲ್ ಅವರನ್ನು ಜೂನ್ 26ರಂದು ಸಿಬಿಐ ಬಂಧಿಸಿತ್ತು. ನಂತರ ಜೂನ್​ 29ರವರೆಗೆ ಸಿಬಿಐ ಕಸ್ಟಡಿಗೆ ನೀಡಲಾಯಿತು. ಕಸ್ಟಡಿ ವಿಸ್ತರಣೆಯನ್ನು ಸಿಬಿಐ ಕೋರದ ಹಿನ್ನೆಲೆಯಲ್ಲಿ ಅರವಿಂದ್​ ಕೇಜ್ರಿವಾಲ್​ ಅವರನ್ನು ಜುಲೈ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

    ವಿಚಾರಣೆ ವೇಳೆ ಕೇಜ್ರಿವಾಲ್ ಪರ ವಕೀಲರು, ಅರವಿಂದ್​​​ ಕೇಜ್ರಿವಾಲ್​​ ಅವರ ಬಂಧನವು ಅಪರಾಧ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 41 ಮತ್ತು 60ಎ ಅಡಿಯಲ್ಲಿ ಸೂಚಿಸಲಾದ ಶಾಸನಬದ್ಧ ಆದೇಶದ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ವಾದಿಸಿದ್ದಾರೆ. ಅರ್ಜಿಯಲ್ಲಿ, ಪ್ರಸ್ತುತ ಪ್ರಕರಣದಲ್ಲಿ ಅಪರಾಧವು 7 ವರ್ಷಗಳವರೆಗೆ ಶಿಕ್ಷೆಯಾಗಿದ್ದರೂ, ಸೆಕ್ಷನ್ 41A ಮತ್ತು 60A ಸೂಚನೆಯ ಅಗತ್ಯವನ್ನು ತನಿಖಾಧಿಕಾರಿಯು ಪಾಲನೆ ಮಾಡಿಲ್ಲ. ಮತ್ತು ಕಾನೂನಿನಡಿಯಲ್ಲಿ ಕಡ್ಡಾಯವಾಗಿ ಅವಶ್ಯಕತೆಗಳನ್ನು ಅನುಸರಿಸದೆ ಅರ್ಜಿದಾರರನ್ನು ಬಂಧಿಸುವುದು ಕಾನೂನುಬಾಹಿರವಾಗಿದೆ. ಆದ್ದರಿಂದ ಅವರನ್ನು ಕಸ್ಟಡಿಯಿಂದ ಬಿಡುಗಡೆ ಮಾಡುವಂತೆ ಹಾಗೂ ಅವರ ವಿರುದ್ಧದ ಸಂಪೂರ್ಣ ಸಿಬಿಐ ವಿಚಾರಣೆಯನ್ನು ರದ್ದುಪಡಿಸುವಂತೆ ನಿರ್ದೇಶನ ನೀಡುವಂತೆ ಕೋರಿದ್ದಾರೆ. (ಏಜೆನ್ಸೀಸ್​​)

    ಎನ್​ಡಿಎ ಸಂಸದೀಯ ಸಭೆಯಲ್ಲಿ ಸಂಸದರಿಗೆ ‘ನಮೋ’ ಕಿವಿಮಾತು; ಪ್ರಧಾನಿ ಹೇಳಿರುವ ಸಲಹೆ ಏನು ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts