More

    ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ ತಲುಪಿಸಿ

    ಬೇಲೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಫಲಾನುಭವಿಗಳಿಗೆ ಸಿಗುವಂತೆ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ದೇಶಾಣಿ ಆನಂದ್ ಹೇಳಿದರು.


    ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಬೇಲೂರು ವಿಧಾನಸಭಾ ಕ್ಷೇತ್ರದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷನಾಗಿ ಜವಾಬ್ದಾರಿಯಿಂದ ನಿರ್ವಹಿಸಲಿದ್ದೇನೆ. ಕ್ಷೇತ್ರದ ಮೂಲೆ ಮೂಲೆಯಲ್ಲಿರುವ ಗ್ರಾಮಗಳಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಎಲ್ಲಿ ಇನ್ನೂ ಅನುಷ್ಠಾನವಾಗಿಲ್ಲ ಎಂಬುದರ ಬಗ್ಗೆ ಮಾಹಿತಿ ಪಡೆದು ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಹಾಗೂ ನಮ್ಮ ಸಮಿತಿ ಸದಸ್ಯರ ಸಹಕಾರ ಪಡೆದು ಕೆಲಸ ಮಾಡಲಿದ್ದೇನೆ ಮತ್ತು ಮುಂದಿನ ದಿನಗಳಲ್ಲಿ ನಮ್ಮ ಸಮಿತಿ ಸದಸ್ಯರು ಅವರವರ ವ್ಯಾಪ್ತಿಯಲ್ಲಿ ಕೆಲಸ ಮಾಡಿಸಲು ಯೋಜನೆ ರೂಪಿಸಲಾಗುವುದು ಎಂದರು.


    ಅಧಿಕಾರಿಗಳು ಬಡವರ ಪರವಾಗಿ ನಿಸ್ವಾರ್ಥದಿಂದ ಕೆಲಸ ಮಾಡಿಸಿ, ಬೇಲೂರಿನಿಂದಲೇ ಪ್ರಥಮವಾಗಿ ರಾಜ್ಯಕ್ಕೆ ಮಾದರಿಯಾಗಿ ಕೆಲಸ ಮಾಡಲಿದ್ದೇವೆ. ಗೃಹಲಕ್ಷ್ಮಿಯೋಜನೆಯಲ್ಲಿ ತಂತ್ರಾಂಶ ಬದಲಾವಣೆಯಿಂದ ತಡವಾಗಿದೆ. ಮುಂದಿನ ಕೆಲವೇ ದಿನಗಳಲ್ಲಿ ಈ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸಮಿತಿ ರಾಜ್ಯಾಧ್ಯಕ್ಷರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.


    ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ.ನಿಶಾಂತ್ ಮಾತನಾಡಿ, ರಾಜ್ಯ ಸರ್ಕಾರ ಗ್ಯಾರಂಟಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರನ್ನಾಗಿ ಮಾಡಿದ್ದು, ಸರ್ಕಾರದ ಐದು ಗ್ಯಾರಂಟಿಗಳು ಯಾರಿಗೆ ತಲುಪಿಲ್ಲ ಎಂಬುದನ್ನು ಪರಿಶೀಲಿಸಿ ಅರ್ಹರಿಗೆ ಯೋಜನೆ ತಲುಪಿಸುವಂತೆ ಸಮಿತಿ ಅಧ್ಯಕ್ಷರು, ಸದಸ್ಯರು ಕ್ರಮಕ್ಕೆ ಮುಂದಾಗಬೇಕು ಎಂದರು.


    ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್.ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶೈಲೇಶ್, ಪುರಸಭೆ ಮಾಜಿ ಅಧ್ಯಕ್ಷೆ ತೀರ್ಥಕುಮಾರಿ, ಜಿಪಂ ಮಾಜಿ ಸದಸ್ಯ ತೌಫಿಕ್, ಮುಖಂಡರಾದ ಮಲ್ಲಿಕಾರ್ಜುನ್, ತಾಪಂ ಇಒ ಸತೀಶ್, ಆಹಾರ ಶಿರಸ್ತೇದಾರ್ ವೀಣಾ ಮತ್ತಿತರರು ಹಾಜರಿದ್ದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts