More

    ಕಾಲಮಿತಿಯಲ್ಲಿ ಪರಿಹರಿಸಲು ಸಚಿವ ಸಂತೋಷ ಲಾಡ್ ಸೂಚನೆ

    ಧಾರವಾಡ: ಜಿಲ್ಲಾ ಮಟ್ಟದ ಜನತಾ ದರ್ಶನ ಸಾರ್ವಜನಿಕರು ಸಮಸ್ಯೆ ಹೇಳಿಕೊಳ್ಳಲು ಉತ್ತಮ ವೇದಿಕೆ. ಎಲ್ಲ ಇಲಾಖೆಗಳ ಅಽಕಾರಿಗಳು ಉಪಸ್ಥಿತರಿದ್ದು, ಕೆಲ ಪ್ರಕರಣಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲಾಗುತ್ತದೆ. ಸಾರ್ವಜನಿಕರಿಂದ ಸಲ್ಲಿಕೆಯಾಗುವ ಅಹವಾಲುಗಳನ್ನು ಕಾಲಮಿತಿಯಲ್ಲಿ ಪರಿಹರಿಸಲು ಅಽಕಾರಿಗಳಿಗೆ ಸೂಚಿಸಲಾಗಿದೆ ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
    ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ `ಜನತಾ ದರ್ಶನ’ದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
    ಕಾನೂನಾತ್ಮಕವಾಗಿ, ಸ್ಥಳೀಯವಾಗಿ ಬಗೆಹರಿಸಬಹುದಾದ ಅಹವಾಲುಗಳನ್ನು ಜಿಲ್ಲಾಡಳಿತದ ಮಟ್ಟದಲ್ಲಿ ಬಗೆಹರಿಸಲಾಗುತ್ತಿದೆ. ಬಾಕಿ ಅಹವಾಲುಗಳನ್ನು ಹಿಂಬರಹ ನೀಡಲಾಗುತ್ತಿದೆ. ಅವಳಿನಗರಗಳಲ್ಲಿ ವಿವಿಧೆಡೆ ಕಾನೂನುಬಾಹಿರವಾಗಿ ನಿರ್ಮಿತ ಅನಽಕೃತ ಬಡಾವಣೆಗಳಿಂದ ಸಾರ್ವಜನಿಕರಿಗೆ ತೊಂದರೆಗಳಾಗುತ್ತಿವೆ. ಹೊಸ ಕಾನೂನುಗಳನ್ವಯ ಅನಽಕೃತ ಬಡಾವಣೆಗಳ ಸಮಸ್ಯೆ ಬಗೆಹರಿಸಲು ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.
    ಇದೇವೇಳೆ ಸಚಿವರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರಿಗೆ ಸ್ಮಾರ್ಟ್ ಫೋನ್ ವಿತರಿಸಿದರು. ಜಿಲ್ಲಾಽಕಾರಿ ದಿವ್ಯ ಪ್ರಭು, ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಡಾ. ಗೋಪಾಲ ಬ್ಯಾಕೋಡ, ಜಿಲ್ಲಾ ಪಂಚಾಯಿತಿ ಸಿಇಒ ಸ್ವರೂಪ ಟಿ.ಕೆ., ಮಹಾನಗರ ಪಾಲಿಕೆ ಆಯುಕ್ತ ಡಾ. ಈಶ್ವರ ಉಳ್ಳಾಗಡ್ಡಿ, ಹುಡಾ ಆಯುಕ್ತ ಡಾ. ಸಂತೋಷಕುಮಾರ ಬಿರಾದಾರ ವೇದಿಕೆಯಲ್ಲಿದ್ದರು.
    ಕಂದಾಯ ಇಲಾಖೆ ಅರ್ಜಿ ಹೆಚ್ಚು: ಜಿಲ್ಲಾ ಮಟ್ಟದ 5ನೇ ಜನತಾ ದರ್ಶನದಲ್ಲಿ ಕಂದಾಯ ಇಲಾಖೆಗೆ ಸಂಬAಽಸಿ ಸಾರ್ವಜನಿಕರಿಂದ 47 ಅರ್ಜಿಗಳು ಸಲ್ಲಿಕೆಯಾದವು. ನಗರಾಭಿವೃದ್ಧಿ ಇಲಾಖೆಯ 27, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಇಲಾಖೆಯ 30, ಶಿಕ್ಷಣ ಇಲಾಖೆಯ 16, ಲೋಕೋಪಯೋಗಿ 8, ಸಮಾಜ ಕಲ್ಯಾಣ 6, ಗೃಹ ಇಲಾಖೆಯ 5, ಕೃಷಿ 4, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾರಿಗೆ, ಕಾರ್ಮಿಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ 3, ಪಶು ಸಂಗೋಪನೆ ಮತ್ತು ಮೀನುಗಾರಿಕೆ, ಉನ್ನತ ಶಿಕ್ಷಣ, ವಸತಿ, ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ 2, ಮಹಾನಗರ ಪಾಲಿಕೆ, ಹಣಕಾಸು ಇಲಾಖೆ, ಜಲಸಂಪನ್ಮೂಲ, ಇತರ ಇಲಾಖೆಗಳು ಸೇರಿ 175 ಅಹವಾಲುಗಳು ಸಲ್ಲಿಕೆಯಾದವು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts