More

    ಶಿಸ್ತು, ಸಂಸ್ಕಾರ ಅಳವಡಿಕೆಗೆ ಪ್ರೇರಣೆ: ಕೃಷ್ಣಮೂರ್ತಿ ಮಂಜರು ಕಿವಿಮಾತು ; ಕಲಿಕಾ ಪರಿಕರ ವಿತರಣೆ, ಪಾಲಕರ ಸಭೆ

    ಗಂಗೊಳ್ಳಿ: ಮಕ್ಕಳ ಕಲಿಕೆ ಬಗ್ಗೆ ಪಾಲಕರು ಗಮನಹರಿಸಬೇಕು. ವಿದ್ಯಾರ್ಥಿಗಳ ಕಲಿಕಾಮಟ್ಟ ಹೆಚ್ಚಿಸಲು ಶಿಕ್ಷಕರು ಪ್ರಯತ್ನ ಮಾಡುತ್ತಾರೆ. ಅಂತೆಯೇ ಪಾಲಕರು ತಮ್ಮ ಮೇಲಿನ ಜವಾಬ್ದಾರಿ ಅರಿತು ಪಾಲಿಸಬೇಕು, ಮಗು ಶಿಸ್ತು, ಸಂಸ್ಕಾರ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರೇರೆಪಿಸಬೇಕು ಎಂದು ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಕೃಷ್ಣಮೂರ್ತಿ ಮಂಜರು ಹೇಳಿದರು.

    ವಂಡ್ಸೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಗುರುವಾರ ಕೊಡಮಾಡಿದ ಸಮವಸ್ತ್ರ, ನೋಟ್‌ಬುಕ್, ಕಲಿಕಾ ಪರಿಕರಗಳ ವಿತರಣೆ ಕಾರ್ಯಕ್ರಮ ಹಾಗೂ ಪಾಲಕರ ಸಭೆಯಲ್ಲಿ ಪರಿಕರ ವಿತರಿಸಿ ಮಾತನಾಡಿದರು. ಎಸ್‌ಡಿಎಂಸಿ ಅಧ್ಯಕ್ಷೆ ಡಾ.ಪೂರ್ಣಿಮಾ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನಾಡಪ್ರಭು ಕೆಂಪೇಗೌಡರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಕೆಂಪೇಗೌಡರ ದಿನ ಆಚರಿಸಲಾಯಿತು. ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಅಂಬಿಕಾ, ರೇವತಿ, ಪಲ್ಲವಿ, ಆಶಾ ಅವರನ್ನು ಸನ್ಮಾನಿಸಲಾಯಿತು. ಎಸ್‌ಡಿಎಂಸಿಗೆ ತೆರವಾದ ಎರಡು ಸ್ಥಾನಗಳಿಗೆ ಸದಸ್ಯರನ್ನು ಆಯ್ಕೆ ಮಾಡಲಾಯಿತು.

    ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಉದಯ ಕುಮಾರ್ ಶೆಟ್ಟಿ, ಕೋಶಾಧಿಕಾರಿ ಜಿ.ಶ್ರೀಧರ ಶೆಟ್ಟಿ, ವಂಡ್ಸೆ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ, ಎಸ್‌ಡಿಎಂಸಿ ಉಪಾಧ್ಯಕ್ಷ ರಾಜು ವಂಡ್ಸೆ ಉಪಸ್ಥಿತರಿದ್ದರು. ಮುಖ್ಯಶಿಕ್ಷಕ ಸದಾಶಿವ ಸ್ವಾಗತಿಸಿದರು. ಸಹಶಿಕ್ಷಕ ಸುಧಾಕರ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕ ಪ್ರತಾಪಕುಮಾರ ಶೆಟ್ಟಿ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts