More

    ಚುನಾವಣಾ ಖರ್ಚು-ವೆಚ್ಚ ಸಲ್ಲಿಸಿ, ಡಿಸಿ ನಲಿನ್​ ಅತುಲ್​ ಸೂಚನೆ

    ಕೊಪ್ಪಳ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ಚುನಾವಣಾ ಖರ್ಚು&ವೆಚ್ಚಗಳನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ನಲಿನ್​ ಅತುಲ್​ ತಿಳಿಸಿದರು.

    ನಗರದ ಜಿಪಂ ಜೆ.ಎಚ್​.ಪಟೇಲ್​ ಸಭಾಂಗಣದಲ್ಲಿ ಗುರುವಾರ ಅಭ್ಯರ್ಥಿಗಳು, ಚುನಾವಣಾ ಏಜೆಂಟ್​ಗಳ ಜತೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದರು.

    ಚುನಾವಣಾ ವೆಚ್ಚದ ಸಂಪೂರ್ಣ ವಿವರ ಆಯೋಗಕ್ಕೆ ಸಲ್ಲಿಸಬೇಕು. ನೀವು ಸಲ್ಲಿಸಿದ ಲೆಕ್ಕಪತ್ರಗಳನ್ನು ಚುನಾವಣಾ ವೆಚ್ಚ ವೀಕ್ಷಕರು ಪರಿಶೀಲಿಸಲಿದ್ದಾರೆ. ಚುನಾವಣಾ ವೆಚ್ಚ ನಿರ್ವಹಣೆಗಾಗಿ ಕೈಗೊಂಡ ಹೊಸ ಬ್ಯಾಂಕ್​ ಖಾತೆ ಹಾಗೂ ರಿಜಿಸ್ಟರ್​ ನಿರ್ವಹಣೆ ವಿವರ ಪರಿಶೀಲಿಸಿಕೊಳ್ಳಬೇಕು. ವರದಿಯಲ್ಲಿನ ಮಾಹಿತಿ ಸರಿಯಾಗಿ ನಮೂದಿಸಿ. ಅಭ್ಯರ್ಥಿಗಳು ನಿರ್ವಹಿಸುವ ರಿಜಿಸ್ಟರ್​ ಹಾಗೂ ಚುನಾವಣಾ ಅಧಿಕಾರಿಗಳ ಬಳಿ ಇರುವ ರಿಜಿಸ್ಟರ್​ನಲ್ಲಿ ವ್ಯತ್ಯಾಸವಿರಬಾರದು. ಲೆಕ್ಕ ಪತ್ರಗಳ ಪರಿಶೀಲನಾ ಸಭೆಗೆ ಅಭ್ಯರ್ಥಿಗಳು ಮತ್ತು ಚುನಾವಣಾ ವೆಚ್ಚಗಳಿಗಾಗಿ ನೇಮಿಸಿರುವ ಏಜೆಂಟರು ಖುದ್ದಾಗಿ ಹಾಜರಾಗಬೇಕು. ಯಾವುದೇ ಆಕ್ಷೇಪಣೆಗಳಿದ್ದಲ್ಲಿ ವೆಚ್ಚ ವೀಕ್ಷಕರ ಮುಂದೆ ಸಲ್ಲಿಸಲು ಅವಕಾಶವಿರಲಿದೆ ಎಂದರು.

    ಚುನಾವಣಾ ಖರ್ಚು-ವೆಚ್ಚಗಳ ನೋಡಲ್​ ಅಧಿಕಾರಿ ಪ್ರಶಾಂತ ಮಾತನಾಡಿ, ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳು ವೆಚ್ಚ ನಿರ್ವಹಣೆ ಮಾಡಬೇಕು. ಚುನಾವಣಾ ಫಲಿತಾಂಶದ ಬಳಿಕ 30 ದಿನಗಳೊಳಗಾಗಿ ವೆಚ್ಚದ ವಿವರ ಸಲ್ಲಿಸಬೇಕು. ಡೇ ಟು ಡೇ ರಿಜಿಸ್ಟರ್​, ಕ್ಯಾಶ್​ ರಿಜಿಸ್ಟರ್​, ಬ್ಯಾಂಕ್​ ರಿಜಿಸ್ಟರ್​ ವಿವರ ಮತ್ತು ಇದರೊಂದಿಗೆ ಪಾರ್ಟ್​ 1 ರಿಂದ 4 ಹಾಗೂ ಶೆಡ್ಯುಲ್ಡ್​ 1 ರಿಂದ 12ರಲ್ಲಿ ಸಲ್ಲಿಸಬೇಕು. ಜೂ.30ರಂದು ಬೆಳಗ್ಗೆ 11 ಗಂಟೆಗೆ ಪರಿಶೀಲನಾ ಸಭೆ ನಡೆರಯಲಿದೆ. ಅಭ್ಯರ್ಥಿಗಳು ಚುನಾವಣಾ ವೆಚ್ಚ ವಿವರಗಳನ್ನು ಸಲ್ಲಿಸದಿದ್ದಲ್ಲಿ ಆಯೋಗ ಮೂರು ವರ್ಷ ಕಾಲ ಅನರ್ಹಗೊಳಿಸಲಿದೆ. ಕೊಪ್ಪಳದಲ್ಲಿ ಸ್ಪರ್ಧಿಸಿದ 19 ಅಭ್ಯರ್ಥಿಗಳು ವಿವರ ಸಲ್ಲಿಸಿ ಎಂದರು.

    ತರಬೇತಿ ಕಾರ್ಯಕ್ರಮದ ನೋಡಲ್​ ಅಧಿಕಾರಿ ಕೃಷ್ಣಮೂರ್ತಿ ದೇಸಾಯಿ, ಚುಣಾವಣಾ ಶಾಖೆಯ ತಹಸೀಲ್ದಾರ್​ ರವಿ ವಸ್ತ್ರದ್​ ಇತರರಿದ್ದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts