More

    ಪ್ರೀತಿ-ಪ್ರೇಮ ಜಾಲದ ಬಲೆಯಲ್ಲಿ ಸಿಲುಕದಿರಿ

    ಹಿರೀಸಾವೆ: ಯಾವುದೇ ತುರ್ತು ಸಮಯದಲ್ಲಿ ಹಾಗೂ ಅಪಾಯದ ಪರಿಸ್ಥಿತಿಯಲ್ಲಿ 112 ಸಂಖ್ಯೆಗೆ ಕರೆ ಮಾಡುವ ಮೂಲಕ ಹೆಚ್ಚಿನ ಅನಾಹುತವನ್ನು ತಪ್ಪಿಸಬಹುದು ಎಂದು ಹಿರೀಸಾವೆ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಸುಪ್ರಿತ್ ಹೇಳಿದರು.


    ಪಟ್ಟಣದ ಠಾಣೆಯಲ್ಲಿ ಗುರುವಾರ ಆಯೋಜಿಸಿದ್ದ ಪೊಲೀಸ್ ಠಾಣೆ ತೆರೆದ ಮನೆ ಕಾರ್ಯಕ್ರಮದಲ್ಲಿ ಮಾತನಾಡಿ, ಸಮಾಜದಲ್ಲಿರುವ ಪ್ರತಿಯೊಬ್ಬರಿಗೂ ಠಾಣೆಗೆ ಭೇಟಿ ನೀಡಲು ಅವಕಾಶ ಇದೆ ಎಂದರು.


    ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಗಳು ಹೆಚ್ಚಾಗುತ್ತಿವೆ. ಅಪರಿಚಿತ ವ್ಯಕ್ತಿಗಳು ನಿಮ್ಮ ಮೊಬೈಲ್‌ಗೆ ಕರೆ ಮಾಡಿ ಹಣದ ಆಸೆ ತೋರಿಸಿ ಒಟಿಪಿ ಪಡೆದು ನಿಮ್ಮದೇ ಬ್ಯಾಂಕ್ ಖಾತೆಯಿಂದ ಹಣವನ್ನು ಕದಿಯುತ್ತಿದ್ದಾರೆ. ಸಾಕಷ್ಟು ಜಾಗರೂಕರಾಗಿರಬೇಕು ಎಂದು ಎಚ್ಚರಿಸಿದರು.


    ಈ ಬಗ್ಗೆ ವಿದ್ಯಾರ್ಥಿನಿಯರು ಪಾಲಕರಿಗೆ ಅರಿವು ಮೂಡಿಸಬೇಕು. ಜತೆಗೆ ಪ್ರೀತಿ-ಪ್ರೇಮದ ಪ್ರಕರಣಗಳು ಹೆಚ್ಚಾಗುತ್ತಿವೆ. ನೀವು ಓದಿನ ಬಗ್ಗೆ ಹೆಚ್ಚಿನ ಗಮನಹರಿಸಿ ಉತ್ತಮ ಜೀವನವನ್ನು ಕಟ್ಟಿಕೊಳ್ಳಿ ಎಂದು ಸಲಹೆ ನೀಡಿದರು.


    ಪಟ್ಟಣದ ಎಸ್‌ಎನ್‌ಎಚ್‌ಸಿಎಸ್ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಮಾತನಾಡಿ, ಇಲ್ಲಿನ ಶ್ರೀಕಂಠಯ್ಯ ವೃತ್ತದಲ್ಲಿ ಕಾಲೇಜು ಪ್ರಾರಂಭ ಮತ್ತು ಬಿಡುವ ಸಮಯದಲ್ಲಿ ಕೆಲವು ಯುವಕರು ಅಸಭ್ಯವಾಗಿ ವರ್ತನೆ ಮಾಡುತ್ತಾರೆ. ಕಾಲೇಜಿನ ಗೇಟ್ ಸಮೀಪದಲ್ಲಿ ಮತ್ತು ರಸ್ತೆಯಲ್ಲಿ ನಿಂತು ಮೊಬೈಲ್ ಸಂಖ್ಯೆ ಕೇಳುತ್ತಾರೆ. ಹಾಯ್ ಬಾಯ್ ಎನ್ನುತ್ತ ಕಿರಿಕಿರಿ ಮಾಡುತ್ತಾರೆ. ಈ ಎರಡೂ ಸಮಯದಲ್ಲಿ ಅಲ್ಲಿಗೆ ಸಿಬ್ಬಂದಿಯನ್ನು ನಿಯೋಜನೆ ಮಾಡುವಂತೆ ವಿದ್ಯಾರ್ಥಿನಿಯರು ಕೇಳಿಕೊಂಡರು. ಪೊಲೀಸ್ ಅಧಿಕಾರಿಗಳು ಮಾಹಿತಿ ಪಡೆದು ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts