More

    ಹೊಸ ಕಾನೂನು ಪರಿಣಾಮ ಕಾದು ನೋಡಬೇಕು: ಪರಮೇಶ್ವರ

    ಬೆಂಗಳೂರು: ದೇಶದಲ್ಲಿ ಜಾರಿಯಾಗಿರುವ ಮೂರು ಹೊಸ ಅಪರಾಧ ಕಾನೂನುಗಳ ಪರಿಣಾಮದ ಬಗ್ಗೆ ಈಗಲೇ ಹೇಳಲು ಬರುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಹೇಳಿದರು.

    ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ದಾಖಲಾಗುವ ಪ್ರಕರಣಗಳಿಗೆ ಹೊಸ ಕಾನೂನುಗಳು ಅನ್ವಯವಾಗಲಿವೆ. ಹೊಸ ಕಾಯ್ದೆಗಳ ಸಕ್ಸಸ್ ಅಥವಾ ಫೇಲ್ಯೂರ್ ಈಗಲೇ ಗೊತ್ತಾಗುವುದಿಲ್ಲ. ಪ್ರಕರಣಗಳು ದಾಖಲಾದ ಬಳಿಕ ಕೋರ್ಟ್‌ನಲ್ಲಿ ಯಾವ ರೀತಿ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡಬೇಕು. ಇಡೀ ದೇಶದಲ್ಲಿ ಜಾರಿ ಮಾಡಿರುವುದರಿಂದ ಎಲ್ಲ ಕಡೆ ಈ ಬಗ್ಗೆ ಪ್ರತಿಕ್ರಿಯೆ ಬರಬೇಕು. ಸರ್ಕಾರ ಕೆಲ ಪರಿಷ್ಕರಣೆ ಮಾಡಬಹುದು ಎಂದು ತಿಳಿಸಿದರು.

    ಹೊಸ ಕಾನೂನುಗಳ ಬಗ್ಗೆ ಇಲಾಖೆಯ ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಪೊಲೀಸರಿಗಾಗಿ ಹೊಸದಾಗಿ ಮೊಬೈಲ್ ಅಪ್ಲಿಕೇಷನ್ ಸಿದ್ಧಪಡಿಸಲಾಗಿದೆ. ಪೊಲೀಸರಿಗೆ ಹೊಂದಿಕೆ ಆಗುವವರೆಗೆ ಈ ಆಪ್ ನೋಡಿಕೊಂಡು ಕೆಲಸ ಮಾಡಲು ಸಹಾಯವಾಗಲಿದೆ ಎಂದರು.

    ಕಾನ್‌ಸ್ಟೇಬಲ್‌ಗಳ ಅಂತರ ಜಿಲ್ಲಾ ವರ್ಗಾವಣೆಗೆ ನಿಯಮಗಳನ್ನು ರೂಪಿಸಲಾಗುತ್ತಿದೆ. ಈವರೆಗೆ ನಿಯಮಗಳಿರಲಿಲ್ಲ. ಪತಿ-ಪತ್ನಿ ವರ್ಗಾವಣೆಯನ್ನು ಮಾಡಲಾಗುವುದು. ಈ ಕುರಿತು ಪೊಲೀಸ್ ಮಹಾನಿರ್ದೇಶಕರೊಂದಿಗೆ ಚರ್ಚಿಸಿದ್ದೇನೆ. ಅಂತರ ಜಿಲ್ಲಾ ವರ್ಗಾವಣೆ ಸಮಸ್ಯೆಯನ್ನು ಶೀಘ್ರವಾಗಿ ಬಗೆ ಹರಿಸಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts