More

    ಮಾನವನ ದುರಾಸೆಗೆ ಪರಿಸರ ನಾಶ

    ಕೆ.ಆರ್.ನಗರ: ಪರಿಸರವನ್ನು ಉಳಿಸಿ ಬೆಳೆಸಬೇಕಾದ ಜವಬ್ದಾರಿ ಪ್ರತಿಯೊಬ್ಬರ ಮೇಲಿದ್ದು, ನಿರಂತರವಾಗಿ ಹಾಳಾಗುತ್ತಿರುವ ಅರಣ್ಯ ನಾಶ ತಡೆದರೆ ಮಾತ್ರ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ಸಿಗಲು ಸಾಧ್ಯ ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

    ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಅರಣ್ಯ ಇಲಾಖೆಯಿಂದ ಆಯೋಜಿಸಿದ್ದ ವನ ಮಹೋತ್ಸವ ಕಾರ್ಯಕ್ರಮಕ್ಕೆ ಸಸಿಗಳನ್ನು ನೇಡುವ ಮೂಲಕ ಚಾಲನೆ ನೀಡಿ, ಮನುಷ್ಯನ ದುರಾಸೆಯಿಂದ ನಿತ್ಯ ಅರಣ್ಯ ನಾಶವಾಗುತ್ತಿದ್ದು, ಪರಿಸರ ಮೇಲಾಗುತ್ತಿರುವ ದಾಳಿಯನ್ನು ತಡೆಗಟ್ಟಲು ಪ್ರತಿಯೊಬ್ಬರೂ ಕೈ ಜೋಡಿಸಬೇಕು ಎಂದರು.

    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪ್ರತಿ ವರ್ಷ 5 ಕೋಟಿ ಸಸಿಗಳನ್ನು ನೆಡುವ ಯೋಜನೆ ಹಮ್ಮಿಕೊಂಡಿದೆ. 5 ವರ್ಷದಲ್ಲಿ 25 ಕೋಟಿ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಣೆ ಮಾಡಲಾಗುತ್ತದೆ. ಜನ್ಮದಿನದ ನೆನಪಿಗೆ ಸಸಿ ನೆಡುವ ಯೋಜನೆ ಪ್ರತಿಯೊಬ್ಬರು ಹಮ್ಮಿಕೊಳ್ಳಬೇಕು ಎಂದರು.

    ಕಾಡು ಉಳಿದರೆ ಮಾತ್ರ ಕಾಲಕಾಲಕ್ಕೆ ಮಳೆಯಾಗಿ, ಬೆಳೆ ಸಮೃದ್ಧಿಯಾಗಿ ಬೆಳೆದು ಜನತೆ ನೆಮ್ಮದಿ ಕಂಡುಕೊಳ್ಳಲು ಸಾಧ್ಯವಾಗಲಿದೆ. ಕಾಡು ಪ್ರಾಣಿಗಳು ನಾಡಿನತ್ತ ಬರಲು ಅರಣ್ಯ ನಾಶವೇ ಪ್ರಮುಖಕಾರಣವಾಗಿದೆ. ವಿದ್ಯಾರ್ಥಿಗಳು ಭವಿಷ್ಯದ ದೃಷ್ಠಿಯಲ್ಲಿ ಪರಿಸರ ರಕ್ಷಣೆಗೆ ಸಂಕಲ್ಪ ಮಾಡಬೇಕು ಎಂದರು.

    ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ, ಕಾಲೇಜು ಪ್ರಾಂಶುಪಾಲರಾದ ಡಾ.ಜಯಾ, ಪುರಸಭೆ ಮುಖ್ಯಾಧಿಕಾರಿ ಡಾ.ಜಯಣ್ಣ, ವಲಯ ಅರಣ್ಯಾಧಿಕಾರಿ ಎಂ.ಆರ್.ರಶ್ಮಿ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಟಿ.ವಿ.ಹರಿಪ್ರಸಾದ್, ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್, ಹರೀಶ್, ಶೋಭಾ, ಪುರಸಭಾ ಸದಸ್ಯ ಕೋಳಿಪ್ರಕಾಶ್, ಶಿವುನಾಯಕ್, ನಟರಾಜ್, ಶಂಕರ್‌ಸ್ವಾಮಿ, ಕಾಲೇಜು ಸಿಡಿಸಿ ಸದಸ್ಯ ವೇಣುಗೋಪಾಲ್, ತಾಲೂಕು ಕುರುಬರ ಸಂಘದ ನಿರ್ದೇಶಕ ಅಪ್ಪಾಜೀ ಗೌಡ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts