More

    300ಕ್ಕೂ ಹೆಚ್ಚು ಗ್ರೂಪ್​… ನಟ ದರ್ಶನ್​ ಮೊಬೈಲ್​ ಪರಿಶೀಲನೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ!

    ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಗೆಳತಿ ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳಿಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ. ಜುಲೈ 4ರವರೆಗೆ ನಟ ದರ್ಶನ್​ ಪರಪ್ಪನ ಅಗ್ರಹಾರದಲ್ಲಿ ಕಾಲ ಕಳೆಯಬೇಕಿದೆ. ದರ್ಶನ್​ ಅವರು ಈ ಹಿಂದೆಯೇ ಅಂದರೆ 2011ರಲ್ಲಿ ಪತ್ನಿಗೆ ಹಲ್ಲೆ ಮಾಡಿದ ಪ್ರಕರಣದಲ್ಲಿ ಒಮ್ಮೆ ಜೈಲುಪಾಲಾಗಿದ್ದರು. 13 ವರ್ಷಗಳ ಬಳಿಕ ಮತ್ತೊಮ್ಮೆ ಜೈಲು ಸೇರಿದ್ದು, ಚಾಪೆ ಮೇಲೆ ನಿದ್ರಿಸಲಾಗದೆ ಪರಿತಪಿಸುತ್ತಿದ್ದಾರೆ. ಇದರ ನಡುವೆ ಸ್ಪೋಟಕ ಮಾಹಿತಿಯೊಂದು ಬಯಲಾಗಿದೆ.

    ದರ್ಶನ್​ ಅವರ ಮೊಬೈಲ್​ ಪರಿಶೀಲನೆಯ ವೇಳೆ ಆಘಾತಕಾರಿ ಮಾಹಿತಿ ಬೆಳಕಿಗೆ ಬಂದಿರುವುದಾಗಿ ಪೊಲೀಸ್​ ಮೂಲಗಳು ತಿಳಿಸಿವೆ. ದರ್ಶನ್​ ಅವರ ಗ್ಯಾಂಗ್​ 300ಕ್ಕೂ ಅಧಿಕ ವಾಟ್ಸ್​ಆ್ಯಪ್​ ಗ್ರೂಪ್​ಗಳನ್ನು ಮಾಡಿದೆ. ಅಲ್ಲದೆ, ಕ್ರಿಮಿನಲ್​ ಹಿನ್ನೆಲೆ ಇರುವವರ ಜೊತೆ ದರ್ಶನ್​ಗೆ ನಂಟಿರುವುದಾಗಿ ಪೊಲೀಸ್​ ಮೂಲಗಳು ತಿಳಿಸಿವೆ. ಪ್ರತಿ ಜಿಲ್ಲೆಯಲ್ಲಿ 25 ರಿಂದ 30 ಜನರ ತಂಡವನ್ನು ಮಾಡಿಕೊಂಡು ಫೋನ್​ನಲ್ಲೇ ದರ್ಶನ್​ ಸಂಪರ್ಕದಲ್ಲಿದ್ದರು ಎನ್ನಲಾಗಿದೆ.

    ದರ್ಶನ್​ ವಿರುದ್ಧ ಯಾರೇ ಮಾತನಾಡಿದರು ಪ್ರತಿ ಜಿಲ್ಲೆಯಲ್ಲಿ ದರ್ಶನ್​ ಪರ ಪ್ರತಿಭಟನೆ ನಡೆಯುತ್ತಿತ್ತು. ಈ ಹಿಂದೆ ನಟ ಜಗ್ಗೇಶ್​ ಮೇಲೂ ಇದೇ ರೀತಿ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ದರ್ಶನ್​ ಬಗ್ಗೆ ಮಾತನಾಡಿದ್ದಕ್ಕೆ ಜಗ್ಗೇಶ್​ ಮೇಲೆ ದರ್ಶನ್​ ಅಭಿಮಾನಿಗಳು ಹಲ್ಲೆಗೆ ಯತ್ನಿಸಿದ್ದರು. ಪ್ರತಿ ತಿಂಗಳು ಈ ತಂಡಕ್ಕೆ ದರ್ಶನ್​ ಹಣ ಕಳುಹಿಸುತ್ತಿದ್ದರು ಎಂಬುದು ಮೊಬೈಲ್​ ಪರಿಶೀಲನೆ ವೇಳೆ ಬಯಲಾಗಿರುವುದಾಗಿ ಪೊಲೀಸ್​ ಮೂಲಗಳು ತಿಳಿಸಿವೆ.

    ಪ್ರತಿ ಜಿಲ್ಲೆಯಲ್ಲೂ 25 ರಿಂದ 30 ಜನರ ತಂಡಕ್ಕೆ ದರ್ಶನ್​ ಹಣ ಕಳುಹಿಸುತ್ತಿದ್ದರು. ಜಿಲ್ಲೆಗಳಲ್ಲಿ ಅಭಿಮಾನಿಗಳನ್ನು ಇದೇ ತಂಡ ಒಟ್ಟಿಗೆ ಸೇರಿಸುತ್ತಿತ್ತು. ದರ್ಶನ್​ ವಿರುದ್ಧ ಯಾರೇ ಮಾತನಾಡಿದರೂ ಅವರ ವಿರುದ್ಧ ದಾಳಿ ಮಾಡುತ್ತಿದ್ದರು. ಜಿಲ್ಲೆ ಜಿಲ್ಲೆಯಲ್ಲಿ ದರ್ಶನ್​ ಪರ ಪ್ರತಿಭಟನೆ ನಡೆಸುತ್ತಿದ್ದರು ಎಂಬ ಭಯಾನಕ ಮಾಹಿತಿ ಮೊಬೈಲ್​ ಪರಿಶೀಲನೆಯ ವೇಳೆ ಬಟಾಬಯಲಾಗಿದೆ ಎಂದು ಪೊಲೀಸ್​ ಮೂಲಗಳು ಮಾಹಿತಿ ನೀಡಿವೆ.

    ಸದ್ಯ ಜೈಲಿನಲ್ಲಿರುವ ದರ್ಶನ್​ ಮತ್ತು ಗ್ಯಾಂಗ್​ಗೆ ಜುಲೈ 4ರವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ. ಪರಪ್ಪನ ಅಗ್ರಹಾರ ಸೇರಿರುವ ನಟ ದರ್ಶನ್​ ಸರಿಯಾಗಿ ಊಟ, ನಿದ್ರೆ ಇಲ್ಲದೇ ನರಕಯಾತನೆ ಅನುಭವಿಸುತ್ತಿದ್ದಾರೆ. ಹೊರಗಡೆ ಐಷಾರಾಮಿ ಜೀವನ ನಡೆಸುತ್ತಿದ್ದ ಚಕ್ರವರ್ತಿಗೆ ಪರಪ್ಪನ ಅಗ್ರಹಾರದಲ್ಲಿ ಡೆವಿಲ್​ ದರ್ಶನವಾಗುತ್ತಿದೆ. ನಿತ್ಯವೂ ಚಿಕನ್​, ಹಣ್ಣಿನ ಜ್ಯೂಸ್​ ಸೇರಿದಂತೆ ರುಚಿ ರುಚಿಯಾದ ಆಹಾರ ಸೇವಿಸುತ್ತಿದ್ದ ದರ್ಶನ್​ ಉಪ್ಪು ಖಾರ ಇಲ್ಲದ ಆಹಾರ ಸೇವಿಸಲಾಗದೇ ಒದ್ದಾಡುತ್ತಿದ್ದಾರೆ.

    ಏನಿದು ಪ್ರಕರಣ?
    ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್​ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡ ಇದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ರನ್ನು ಬಂಧಿಸಲಾಗಿದೆ. ಫೆಬ್ರವರಿ 27ರಿಂದ ದರ್ಶನ್​ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

    ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.

    ರುಚಿಯಿಲ್ಲದ ಊಟ ಸೊಳ್ಳೆಗಳ ಕಾಟ! ಜೈಲಿನಲ್ಲಿ ನರಕಯಾತನೆ ಅನುಭವಿಸಲಾಗದೇ ಪವಿತ್ರಾ ಗೌಡ ಕಣ್ಣೀರು

    ಭಾರತದ ಹೆಡ್​ ಕೋಚ್​ ಆಗುವುದಾದರೆ… ಗೌತಮ್ ಗಂಭೀರ್​ ಮುಂದಿಟ್ಟ 5 ಬೇಡಿಕೆಗಳಿಗೆ ದಂಗಾದ ಬಿಸಿಸಿಐ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts