More

    ನಾಲೆಗೆ ನೀರು ಹರಿಸುವಂತೆ ಒತ್ತಾಯ: ರೈತ ಸಂಘ(ಮೂಲ ಸಂಘಟನೆ) ಪ್ರತಿಭಟನೆ

    ಮಂಡ್ಯ: ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲೆಗೆ ನೀರು ಹರಿಸುವಂತೆ ಒತ್ತಾಯಿಸಿ ರೈತ ಸಂಘ(ಮೂಲ ಸಂಘಟನೆ) ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
    ರೈತರು ಬರಗಾಲದಿಂದಾಗಿ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಆದ್ದರಿಂದ ಅವರ ಪರವಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ನಿಲ್ಲಬೇಕಿದೆ. ಆದರೆ ಕೃಷಿಗೆ ಅಸಮರ್ಪಕ ನೀರು ಪೂರೈಕೆ, ಬಿತ್ತನೆ ಬೀಜ, ರಸಗೊಬ್ಬರದ ದರ ಏರಿಕೆಯಿಂದಾಗಿ ರೈತರು ಸಮಸ್ಯೆಗೆ ಸಿಲುಕಿದ್ದಾರೆ. ಆದ್ದರಿಂದ ಕೂಡಲೇ ಸಮಸ್ಯೆ ಬಗೆಹರಿಸಬೇಕೆಂದು ರಾಜ್ಯಸರ್ಕಾರದ ವಿರುದ್ಧ ಘೋಷಣೆ ಕೂಗಿ ಒತ್ತಾಯಿಸಿದರು.
    ಜಿಲ್ಲೆಯಲ್ಲಿ ಕೈಗಾಲುವೆಗಳು ಶಿಥಿಲಾವಸ್ಥೆಯಲ್ಲಿರುವುದರಿಂದ ಕೂಡಲೇ ಹೂಳು ತೆಗೆಸಬೇಕು. ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ಎಫ್‌ಆರ್‌ಪಿ ದರವಾಗಿ 3,150 ರೂ ನಿಗದಿಪಡಿಸಿದ್ದು, ಇದನ್ನು ಪರಿಷ್ಕರಿಸಿ 4,500 ರೂ ನೀಡಬೇಕು. ರಾಜ್ಯಸರ್ಕಾರ 500 ರೂನಂತೆ ಪ್ರೋತ್ಸಾಹಧನ ಕೊಡಬೇಕು. ಸರ್ಕಾರ ಹಾಗೂ ಕಾರ್ಖಾನೆ ವತಿಯಿಂದ ಕಬ್ಬು ಬಿತ್ತನೆಯನ್ನು ಉಚಿತವಾಗಿ ನೀಡಬೇಕು. ಪ್ರತಿ ಕ್ವಿಂಟಾಲ್ ಕೊಬ್ಬರಿಗೆ 18 ಸಾವಿರ ರೂ ಕೊಡಬೇಕು. ನಾಗಮಂಗಲ ತಾಲೂಕು ಬಿಂಡಿಗನವಿಲೆ ಹೋಬಳಿಯ ಕದಬಳ್ಳಿಯಲ್ಲಿ ಶಾಶ್ವತ ಕೊಬ್ಬರಿ ಖರೀದಿ ಕೇಂದ್ರ ತೆರೆಯಬೇಕು. ರಾಜ್ಯಸರ್ಕಾರ ಕೊಬ್ಬರಿ ಬೆಳೆಗಾರರಿಗೆ ಪ್ರೋತ್ಸಾಹಧನ ನೀಡಬೇಕು ಎಂದು ಆಗ್ರಹಿಸಿದರು.
    ರೈತರ ಜೀವನ ನಿರ್ವಹಣೆಗೆ ಹೈನುಗಾರಿಕೆಯನ್ನು ಅವಲಂಬಿಸಿದ್ದಾರೆ. ಆದರೆ ಈಗ ಉತ್ಪಾದನಾ ವೆಚ್ಚ ಹೆಚ್ಚಾಗಿರುವುದರಿಂದ ಪ್ರತಿ ಲೀಟರ್ ಹಾಲಿಗೆ 50 ರೂ ನಿಗದಿಪಡಿಸಬೇಕು. ಜತೆಗೆ ಬಾಕಿ ಇರುವ ಪ್ರೋತ್ಸಾಹಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. ಕಳೆದ ಮೂರು ವರ್ಷದಿಂದ ರೇಷ್ಮೆ ಬೆಳೆಗೆ ವೈಜ್ಞಾನಿಕ ಬೆಲೆ ಸಿಗದೇ ರೈತರ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಚಾಕಿ ಸಾಕಾಣಿಕೆದಾರರು ಸರ್ಕಾರ ನಿಯಂತ್ರಣದಲ್ಲಿರುವಂತೆ ನೋಡಿಕೊಳ್ಳುವುದರ ಜತೆಗೆ ಸೂಕ್ತ ವೈಜ್ಞಾನಿಕ ಬೆಲೆ ನೀಡಬೇಕು. ಫಸಲ್ ಬಿಮಾ ಯೋಜನೆಯಡಿ ಪರಿಹಾರವನ್ನು ನೀಡಬೇಕು. ಕೆಆರ್‌ಎಸ್ ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದಾಗಿ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಬೇಕು. ಜತೆಗೆ ಟ್ರಯಲ್ ಬ್ಲಾಸ್ಟಿಂಗ್ ಅವಕಾಶ ನೀಡಬೇಕು. ರಾಜ್ಯಸರ್ಕಾರ ಕೂಡಲೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಬೇಕೆಂದು ಒತ್ತಾಯಿಸಿದರು.
    ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್, ಉಪಾಧ್ಯಕ್ಷ ನಾಗೇಂದ್ರಸ್ವಾಮಿ, ರಾಮಲಿಂಗೇಗೌಡ, ಮಂಜೇಶ್‌ಗೌಡ, ಸೊಳ್ಳೆಪುರ ಪ್ರಕಾಶ್, ಪ್ರಭುಲಿಂಗು, ರಾಮಕೃಷ್ಣಯ್ಯ, ಅಣ್ಣೂರು ಮಹೇಂದ್ರ ಇತರರಿದ್ದರು.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts