More

    ಕೋಳಿ ಸಾಕಾಣಿಕೆ ಉಚಿತ ತರಬೇತಿ

    ಬೆಂಗಳೂರು: ರುಡ್‌ಸೆಟ್ ವತಿಯಿಂದ ಉಚಿತ ಕೋಳಿ ಸಾಕಾಣಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.


    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ 18ರಿಂದ 45 ವರ್ಷಗಳ ವಯೋಮಾನದ ನಿರುದ್ಯೋಗಿ ಯುವಕ-ಯುವತಿಯರು ಜು.2 ರೊಳಗೆ ಅರ್ಜಿ ಸಲ್ಲಿಸಬಹುದು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ಪ್ರದೇಶದವರಿಗೆ ಆದ್ಯತೆ. 10 ದಿನಗಳ ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ಉಚಿತವಾಗಿ ಊಟ ಮತ್ತು ವಸತಿ ಸೌಲಭ್ಯ ನೀಡಲಾಗುತ್ತದೆ. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು.

    ವಿಳಾಸ: ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ (ಮೊ: 93801 62042).

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts