More

    ವಾಲ್ಮೀಕಿ ನಿಗಮದ ಹಗರಣ! ಜಿಲ್ಲಾಡಳಿತ ಕಚೇರಿಗೆ ಬಿಜೆಪಿ ಮುತ್ತಿಗೆ

    ವಿಜಯವಾಣಿ ಸುದ್ದಿಜಾಲ ಗದಗ
    ಕಾಂಗ್ರೆಸ್​ ಪಕ್ಷದ ಚುನಾವಣಾ ವೆಚ್ಚಕ್ಕೆ ಬಳಕೆ ಮಾಡಿಕೊಂಡಿರುವ ವಾಲ್ಮೀಕಿ ನಿಗಮದಲ್ಲಿ ಸರ್ಕಾರಿ ಹಣದ ವರ್ಗಾವಣೆಯ ಗೋಲ್​ಮಾಲ್​, ಪರಿಶಿಷ್ಟ ಪಂಗಡದ ಅನುದಾನದ 187 ಕೋಟಿ ರೂ. ಸಂಶಯಾತ್ಮಕ ಖಾತೆಗಳಿಗೆ ವರ್ಗಾವಣೆ ಮಾಡಿರುವುದನ್ನು ವಿರೋಧಿಸಿ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಟನಕ ವತಯಿಂದ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಬೃಹತ್​ ಪ್ರತಿಭಟನೆ ಮಾಡಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಯಿತು.
    ವಿಧಾನ ಪರಿಷತ್​ ಸದಸ್ಯ ಎಸ್​. ವಿ. ಸಂಕನೂರ ಮಾತನಾಡಿ, ಪರಿಶಿಷ್ಟ ಪಂಗಡದ ಅನುದಾನ 187 ಕೋಟಿ ಹಣವನ್ನು ಸಂಶಯಾತ್ಮಕ ಖಾತೆಗೆ ವರ್ಗಾವಣೆ ಮಾಡಿ, ವಾಲ್ಮೀಕಿ ನಿಗಮದಲ್ಲಿ ಸರ್ಕಾರಿ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ರಾಜ್ಯದ ಜನರ ದುಡ್ಡನ್ನು ಚುನಾವಣಾ ವೆಚ್ಚಕ್ಕೆ ಬಳಕೆ ಮಾಡಿಕೊಳ್ಳಲಾಗಿದೆ. ಕಾಂಗ್ರೆಸ್​ ಸರ್ಕಾರ ಜನರಿಗೆ ಮೋಸ ಮಾಡಿದೆ. ಕಾಂಗ್ರೆಸ್​ ಸರ್ಕಾರದ ಅವ್ಯವಹಾರದಿಂದ ಮನನೊಂದ ವಾಲ್ಮೀಕಿ ನಿಗಮದ ಅಧಿಕ ಚಂದ್ರಶೇಖರ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡರು. ಈ ಪ್ರಕಣದ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.
    ಬಿಜೆಪಿ ರಾಜು ಕುರುಡಗಿ ಮಾತನಾಡಿ, ಬಿಜೆಪಿ ಆಡಳಿತ ಅವಧಿಯಲ್ಲಿ ಎಸ್​.ಟಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಯೋಜನೆಗಳಿಗೆ ಹಿಂದಿನ ಬಿಜೆಪಿ ಸರ್ಕಾರ 28234 ಕೋಟಿ ಮಿಸಲಿಟ್ಟಿತ್ತು. ಕಾಂಗ್ರೆಸ್​ ಸರ್ಕಾರ ಒಂದೇ ವರ್ಷದಲ್ಲಿ ಎಸ್​ಟಿ ನಿಗಮಗಳಲ್ಲಿ ಅವ್ಯವಹಾರ ಮಾಡುತ್ತಿದೆ. ಎಸ್​ಸಿ, ಎಸ್​ಟಿ, ಹಿಂದುಳಿದ ವರ್ಗಗಳಿಗೆ ಕಾಂಗ್ರೆಸ್​ ಅನ್ಯಾಯ ಮಾಡುತ್ತಿದೆ. ಸಚಿವ ನಾಗೇಂದ್ರ ರಾಜೀನಾಮೆ ಪ್ರಕರಣಕ್ಕೆ ಪರಿಹಾರ ಅಲ್ಲ. ರಾಜ್ಯದ ಜನತೆಗೆ ಗ್ಯಾರಂಟಿ ಎಂಬ ನೆಪವೊಡ್ಡಿ ಹಣ ದುರ್ಬಳಕೆ ಮಾಡಿಕೊಳ್ಳವುದಲ್ಲದೇ ವಾಲ್ಮೀಕಿ ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಂಡು ಅಧಿಕಾರಿಗಳ ಸಾವಿಗೆ ಕಾರಣ ಕಾಂಗ್ರೆಸ್​ ಸರ್ಕಾರ ಕಾರಣ ಆಗಿದೆ. ಬ್ರಷ್ಟರ ರಣೆ, ಪರಿಶಿಷ್ಟ ಪಂಗಡದವರ ಶೋಷಣೆ ಮಾಡುತ್ತಿದೆ ಎಂದು ಆರೋಪಿಸಿರು,
    ಎಸ್​.ಟಿ.ಮೋರ್ಚಾ ಜಿಲ್ಲಾಧ್ಯ ಈಶ್ವರಪ್ಪ ರಂಗಪ್ಪನವರ ಮಾತನಾಡಿ, ರಾಜ್ಯದಲ್ಲಿ ನಮ್ಮ ಸಮುದಾಯಕ್ಕೆ ಅನ್ಯಾಯ ಮಾಡಿರುವಂತಹ ಕಾಂಗ್ರೆಸ್​ ಸರ್ಕಾರ ಈ ಸರ್ವಾಧಿಕಾರಿ ಧೊರಣೆಗೆ ಮುಂಬರುವ ದಿನಗಳಲ್ಲಿ ನಮ್ಮ ಸಮುದಾಯ ತಕ್ಕ ಪಾಠ ಕಲಿಸಲಿದೆ ಎಂದರು.
    ಉಮೇಶಗೌಡ ಪಾಟೀಲ, ಲಿಂಗರಾಜ ಪಾಟೀಲ, ಪಕ್ಕಿರೇಶ ರಟ್ಟಿಹಳ್ಳಿ, ಎಂ. ಎಸ್​. ಕರೀಗೌಡ್ರ, ಜಗನ್ನಾಥಶಾ ಭಾಂಡಗೆ, ಈಶಪ್ಪ ನಾಯ್ಕರ, ಉಷಾ ಮಹೇಶ ದಾಸರ, ಅನೀಲ ಅಬ್ಬಿಗೇರಿ ಹಲವರು ಇದ್ದರು

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts