More

    ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ

    ತರೀಕೆರೆ: ಪಟ್ಟಣದ ಶಾಸಕರ ಜನಸಂಪರ್ಕ ಕಾರ್ಯಾಲಯ ಆವರಣದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ, ತಾಲೂಕು ಆರ್ಯುವೇದ ಆಸ್ಪತ್ರೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಲೇರಿಯಾ ಮಾಸಾಚರಣೆ ಹಾಗೂ ಡೆಂಘೆ ನಿಯಂತ್ರಣ ಜಾಗೃತಿ ಜಾಥಕ್ಕೆ ಶಾಸಕ ಜಿ.ಎಚ್.ಶ್ರೀನಿವಾಸ್ ಚಾಲನೆ ನೀಡಿದರು.
    ನಂತರ ಮಾತನಾಡಿದ ಅವರು, ಅನೈರ್ಮಲ್ಯದಿಂದ ಡೆಂಘೆ ಹರಡುತ್ತಿದ್ದು ಜನ ಸ್ವಚ್ಛತೆಗೆ ಆದ್ಯತೆ ನೀಡಿ ರೋಗದ ಬಗ್ಗೆ ಎಚ್ಚರವಹಿಸ ಬೇಕು. ಸರ್ಕಾರ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು, ಜನ ಇದರ ಸದ್ಬಳಕೆ ಮಾಡಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
    ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ಜಿ.ಚಂದ್ರಶೇಖರ್ ಮಾತನಾಡಿ, ಆರೋಗ್ಯ ಇಲಾಖೆ ಡೆಂಘೆ ನಿಯಂತ್ರಣಕ್ಕೆ ಶ್ರಮವಹಿಸಿದೆ. ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಮೂಲಕ ಮನೆ ಮನೆಗೆ ತೆರಳಿ ಸ್ವಚ್ಛತೆ ಅರಿವು ಮೂಡಿಸುತ್ತಿದ್ದರೆ. ಜ್ವರ ಲಕ್ಷಣ ಕಂಡು ಬಂದ ಕೂಡಲೇ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು ಎಂದು ತಿಳಿಸಿದರು.
    ಡೆಂಘೆ ನಿಯಂತ್ರಣ ಜಾಥದಲ್ಲಿ ಪಾಲ್ಗೊಂಡಿದ್ದ ವೈದ್ಯರು ಹಾಗೂ ಸಿಬ್ಬಂದಿ ಪಟ್ಟಣದ ಯಶೋದಮ್ಮ ನಾಗತಿ ಪ್ರೌಢಶಾಲೆ, ಸರ್ಕಾರಿ ಉರ್ದು ಶಾಲೆ ಇನ್ನಿತರ ಕಡೆ ಸಂಚರಿಸಿ ಡೆಂಘೆ ರೋಗದ ಲಕ್ಷಣ, ಹರುಡುವಿಕೆ, ಲಾರ್ವ ಸಮೀಕ್ಷೆ, ಚಿಕಿತ್ಸೆ ಇನ್ನಿತರ ಮಾಹಿತಿ ನೀಡುವ ಜತೆಗೆ ಶಾಲಾ ಮಕ್ಕಳಿಗೆ ರೋಗ ನಿರೋಧಕ ಶಕ್ತಿ ವೃದ್ಧಿಸುವ ಔಷಧಿಗಳನ್ನು ವಿತರಿಸಿದರು.
    ಸರ್ಕಾರಿ ಆಸ್ಪತ್ರೆ ವೈದ್ಯ ಡಾ.ಟಿ.ಎಂ.ದೇವರಾಜ್, ಸರ್ಕಾರಿ ಆರ್ಯುವೇದ ಆಸ್ಪತ್ರೆ ತಜ್ಞ ವೈದ್ಯ ಡಾ.ಬಿ.ವಿ.ಕಿಶೋರ್‌ಕುಮಾರ್, ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಪಿ.ಬಿ.ಗೋವರ್ಧನ್, ಆರೋಗ್ಯ ನಿರೀಕ್ಷಕ ಪ್ರಶಾಂತ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts