More

    ವೀರಶೈವ ಪದ ಕೈಬಿಟ್ಟ ಸರ್ಕಾರ: ಮತ್ತೆ ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ವಿವಾದ

    ಬೆಂಗಳೂರು ರಾಜ್ಯ ಸರ್ಕಾರವು ನೂತನವಾಗಿ ಪರಿಷ್ಕರಿಸಿರುವ 9ನೇ ತರಗತಿ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ‘ವಿಶ್ವಗುರು ಬಸವಣ್ಣನವರು-ಸಾಂಸ್ಕೃತಿಕ ನಾಯಕ’ ಎಂಬ ಪಾಠದಲ್ಲಿ ‘ವೀರಶೈವ’ ಎಂಬ ಪದವನ್ನು ತೆಗೆದು ಹಾಕಲಾಗಿದೆ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯರ ಸಂಸ್ಥೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

    ಈ ಸಂಬಂಧ ಸಂಸ್ಥೆಯ ಪರವಾಗಿ ಶ್ರೀಮದ್ ವಿಭೂತಿಪುರ ವೀರಸಿಂಹಾಸನ ಸಂಸ್ಥಾನ ಮಠದ ಡಾ. ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಕೂಡಲೇ ತಪ್ಪುಗಳನ್ನು ಸರಿಪಡಿಸುವಂತೆ ಒತ್ತಾಯಿಸಿದ್ದಾರೆ.

    ಈ ರಿತಿ ಅವೈಜ್ಞಾನಿಕ ಮತ್ತು ಇತಿಹಾಸಕ್ಕೆ ಮತ್ತು ಸಾವಿರಾರು ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಒಂದು ಪರಂಪರೆಗೆ ಧಕ್ಕೆಯಾಗುವ ವಿಚಾರಗಳನ್ನು ವಿದ್ಯಾರ್ಥಿಗಳ ತಲೆಯಲ್ಲಿ ತುಂಬಬಾರದು. ನೈಜ ವಿಚಾರಗಳನ್ನು ನೀಡುವ ಕೆಲಸ ಮಾಡಬೇಕೆಂದು ನಿರ್ದೇಶನ ನೀಡಬೇಕೆಂದು ಕೋರುತ್ತೇವೆ. ಒಂದು ವೇಳೆ ಪಠ್ಯದಲ್ಲಿನ ದೋಷಗಳನ್ನು ಸರಿಪಡಿಸದಿದ್ದರೆ ಕಾನೂನಿನ ಮೊರೆ ಹೋಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

    ವೀರಶೈವ ಪದ ಕೈಬಿಟ್ಟ ಸಮಿತಿ:

    ಬಸವಣ್ಣನವರ ಪರಿಚಯವನ್ನು ಕುರಿತು 2016ರಿಂದ 3 ಮೂರು ಪರಿಷ್ಕರಣೆ ಮಾಡಲಾಗಿದೆ. 2016 ಮತ್ತು 2022ರ ಪಠ್ಯಪುಸ್ತಕದಲ್ಲಿರುವ ‘ವೀರಶೈವ’ ಪದವನ್ನು 2024ರಲ್ಲಿ ಡಾ. ಮಂಜುನಾಥ ಜಿ. ಹೆಗಡೆ ಅವ ನೇತೃತ್ವದಲ್ಲಿ ನಡೆದ ಪರಿಷ್ಕರಣೆಯಲ್ಲಿ ತೆಗೆದು ಹಾಕಿರುವುದು ಮತ್ತು ವಿದ್ಯಾರ್ಥಿಗಳಿಗೆ ಅನೇಕ ತಪ್ಪು ಮಾಹಿತಿಗಳನ್ನು ನೀಡಿರುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts