More

    ಆಸ್ಪತ್ರೆಯಿಂದ ಬಿಡುಗಡೆಯಾದ ಗುರು ಸ್ವಾಮೀಜಿ

    ಹನೂರು: ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಶ್ರೀ ಸಾಲೂರು ಬೃಹನ್ಮಠದ ಗುರು ಸ್ವಾಮೀಜಿ ಅವರ ಆರೋಗ್ಯ ಸುಧಾರಿಸಿದ್ದು, ಸೋಮವಾರ ಸಂಜೆ ಆಸ್ಪತ್ರೆಯಿಂದ ಬಿಡುಗಡೆಯಾದರು.

    ವಾರದ ಹಿಂದೆ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಶ್ರೀಗಳನ್ನು ಮೈಸೂರಿನ ಜೆಎಸ್‌ಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ತುಮಕೂರು ಸಿದ್ಧಗಂಗ ಮಠದ ಸಿದ್ಧಲಿಂಗ ಸ್ವಾಮೀಜಿ, ಕನಕಪುರ ದೇಗುಲದ ಮಠದ ಚನ್ನಬಸವ ಸ್ವಾಮೀಜಿ, ಕುಂದೂರು ಮಠದ ಶರತ್ ಚಂದ್ರ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.

    ಈ ನಡುವೆ ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ಹನೂರು ಕ್ಷೇತ್ರದ ಮಾಜಿ ಶಾಸಕಿ ಪರಿಮಳ ನಾಗಪ್ಪ, ಪುತ್ರ ಡಾ.ಪ್ರೀತನ್ ನಾಗಪ್ಪ ಸೇರಿದಂತೆ ಹಲವು ಗಣ್ಯರು ಭೇಟಿ ನೀಡಿದ್ದರು. ಈ ವೇಳೆ ಶ್ರೀಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದರು. ಶ್ರೀಗಳ ಆರೋಗ್ಯ ವಿಚಾರದಲ್ಲಿ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರು ಹೆಚ್ಚಿನ ನಿಗಾ ವಹಿಸಿದ್ದರು. ವೈದ್ಯರು ಸೂಕ್ತ ಚಿಕಿತ್ಸೆ ಆರಂಭಿಸಿದ್ದರ ಪರಿಣಾಮ ಶ್ರೀಗಳ ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದು, ಆಸ್ಪತ್ರೆಯಿಂದ ಮರಳಿದ್ದಾರೆ. ಇದರಿಂದ ಆತಂಕದಲ್ಲಿದ್ದ ಸದ್ಭಕರು ಸದ್ಯ ನಿಟ್ಟುಸಿರು ಬಿಟ್ಟಂತಾಗಿದೆ.

    ಗುರು ಸ್ವಾಮೀಜಿ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡಿದ್ದು, ಆಸ್ಪತ್ರೆಯಿಂದ ಮರಳಿದ್ದಾರೆ. ಅಗತ್ಯ ಚಿಕಿತ್ಸೆ ಜತೆಗೆ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ್ದಾರೆ. ಈ ಬಗ್ಗೆ ಮುತುರ್ವಜಿ ವಹಿಸಲಾಗಿದೆ.
    ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಪೀಠಾಧಿಪತಿ, ಸಾಲೂರು ಬೃಹನ್ಮಠ, ಮ.ಬೆಟ್ಟ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts