More

    ಅಪ್ರಾಪ್ತ ವಯಸ್ಸಿನ ಬಾಲಕಿಗೆ ಕಿರುಕುಳ: ಇಬ್ಬರ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

    ಕಾಸರಗೋಡು: ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ 17ರ ಹರೆಯದ ಬಾಲಕಿಯನ್ನು ವಿವಿಧೆಡೆ ಕರೆದೊಯ್ದು ಕಿರುಕುಳ ನೀಡಿರುವ ದೂರಿನನ್ವಯ ಬದಿಯಡ್ಕ ಹಾಗೂ ವಿದ್ಯಾನಗರ ಠಾಣೆ ಪೊಲೀಸರು ಇಬ್ಬರ ವಿರುದ್ಧ ಪೋಕ್ಸೋ ಅನ್ವಯ ಕೇಸು ದಾಖಲಿಸಿಕೊಂಡಿದ್ದಾರೆ. ಬಾಲಕಿ ಈ ಹಿಂದೆ ಪೋಕ್ಸೋ ಅನ್ವಯ ಹತ್ತಕ್ಕೂ ಹೆಚ್ಚು ಬಾರಿ ಠಾಣೆಗೆ ದೂರು ಸಲ್ಲಿಸಿದ್ದಾಳೆ.

    ಕಿರುಕುಳ ತಡೆಯಲೆತ್ನಿಸಿದಾಗ ಹಲ್ಲೆ

    ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದ ಸಂದರ್ಭ ಬಾಲಕಿಗೆ 2022 ಏ.18ರಂದು ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಕೇಸು ದಾಖಲಾಗಿದೆ. ಕ್ವಾರ್ಟರ್ಸ್ ಒಂದರ ಮಾಲೀಕ ಮುಸ್ತಫಾ ಎಂಬಾತ ಬಾಲಕಿಯನ್ನು ಕಾರಿನಲ್ಲಿ ಆದೂರಿನ ತಙಳ್ ಬಳಿ ಕರೆದೊಯ್ದಿದ್ದು, ಅಲ್ಲಿ ತಙಳ್ ಕಿರುಕುಳಕ್ಕೆ ಯತ್ನಿಸಿದ್ದಾನೆ. ಕಿರುಕುಳ ಯತ್ನ ತಡೆಯಲೆತ್ನಿಸಿದಾಗ, ತನ್ನ ಮುಖಕ್ಕೆ ಹೊಡೆದಿರುವುದಾಗಿಯೂ ದೂರಿನಲ್ಲಿ ತಿಳಿಸಲಾಗಿದೆ.

    ವಿದ್ಯಾನಗರ ಠಾಣೆಯಲ್ಲಿ ಕೇಸು ದಾಖಲು

    ಅದೇ ದಿನ ಕಾರಿನಲ್ಲಿ ಬಾಲಕಿಯನ್ನು ಮಂಗಳೂರಿನ ವಸತಿಗೃಹಕ್ಕೆ ಕರೆದೊಯ್ದು ಕಿರುಕುಳ ನೀಡಿದ್ದ. 29ರಂದು ಅಲ್ಲಿಂದ ಗೋವಾ ಕರೆದೊಯ್ಯುವ ಮಧ್ಯೆ ಕಾರಿನಲ್ಲಿ ಹಾಗೂ ಅಲ್ಲಿನ ವಸತಿಗೃಹದಲ್ಲಿ ಕಿರುಕುಳ ನೀಡಲಾಗಿದೆ. ಅಲ್ಲಿಂದ ವಾಪಸಾಗುವ ಮಧ್ಯೆ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದು, ಅಲ್ಲಿಯೂ ಕಿರುಕುಳ ನೀಡಲಾಗಿತ್ತು ಎಂದು ತಿಳಿಸಲಾಗಿದೆ. ಈ ಬಗ್ಗೆ ವಿದ್ಯಾನಗರ ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

    ಸಿನಿಮಾ

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_sticky', [[320, 50], [300, 50]], 'div-gpt-ad- 1719903699617-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_sticky --> <div id='div-gpt-ad-1719903699617-0' style='min-width: 300px; min-height: 50px;'> <script> googletag.cmd.push(function() { googletag.display('div-gpt-ad-1719903699617-0'); }); </script> </div>

    ಲೈಫ್‌ಸ್ಟೈಲ್

    <script async src="https://securepubads.g.doubleclick.net/tag/js/gpt.js"></script> <script> window.googletag = window.googletag || {cmd: []}; googletag.cmd.push(function() { googletag.defineSlot('/22637491760/Vijayavani.net_AP_300x250', [[300, 50], [250, 250], [300, 250], [200, 200]], 'div-gpt-ad-1719903811902-0').addService(googletag.pubads()); googletag.pubads().enableSingleRequest(); googletag.enableServices(); }); </script> <!-- /22637491760/Vijayavani.net_AP_300x250 --> <div id='div-gpt-ad-1719903811902-0' style='min-width: 200px; min-height: 50px;'> <script> googletag.cmd.push(function() { googletag.display('div-gpt-ad-1719903811902-0'); }); </script> </div>

    ಟೆಕ್ನಾಲಜಿ

    Latest Posts